Train: ಮುರುಡೇಶ್ವರ ಎಕ್ಸ್‌ಪ್ರೆಸ್ ಸಮಯ ಬದಲಾವಣೆ ಬೇಡ
Team Udayavani, Nov 29, 2024, 7:20 AM IST
ಮಂಗಳೂರು: ಮುರುಡೇಶ್ವರ- ಬೆಂಗಳೂರು ಮಧ್ಯೆ ಮಂಗಳೂರು ಮೂಲಕ ಸಂಚರಿಸುತ್ತಿರುವ 16585/86 ಬೆಂಗಳೂರು ಮುರುಡೇಶ್ವರ ಎಕ್ಸ್‌ಪ್ರೆಸ್ ರೈಲಿನ ಸಮಯ ಬದಲಾಯಿಸುವ ಪ್ರಸ್ತಾವಕ್ಕೆ ಮಂಗಳೂರಿನ ಯಾತ್ರಿ ಸಂಘದ ವರು ವಿರೋಧ ವ್ಯಕ್ತಪಡಿಸಿದ್ದಾರೆ.
ಮುರುಡೇಶ್ವರ ಸ್ಟೇಷನ್‌ನಲ್ಲಿ ನೀರು ತುಂಬಿಸುವುದು ಹಾಗೂ ಬೋಗಿ ನಿರ್ವಹಣೆ ಮಾಡುವುದಕ್ಕಾಗಿ ಮೂರು ಗಂಟೆಕಾಲ ಈ ರೈಲನ್ನು ನಿಲ್ಲಿಸುವಂತೆ ರೈಲ್ವೇ ಮಂಡಳಿಯು ರೈಲ್ವೇ ಇಲಾಖೆಗೆ ಸೂಚನೆ ನೀಡಿರುವುದರಿಂದ ಈ ಬದಲಾವಣೆಗೆ ಸಿದ್ಧತೆ ನಡೆಯುತ್ತಿರುವುದಾಗಿ ತಿಳಿದುಬಂದಿದೆ.
ಈ ರೀತಿ ಮುರುಡೇಶ್ವರದಲ್ಲಿ ರೈಲನ್ನು ತಡೆ ಹಿಡಿದರೆ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಬೇಕಾಗಿ ಬರುವುದಲ್ಲದೆ ರೈಲು ಮಂಗಳೂರು ಸೆಂಟ್ರಲ್‌ಗೆ ಬರದೇ ಮಂಗಳೂರು ಜಂಕ್ಷನ್ ಅಥವಾ ಪಡೀಲು ಮೂಲಕ ಹೋಗುವ ಸಾಧ್ಯತೆ ಇದೆ ಎನ್ನು ವುದು ಈ ಭಾಗದ ಪ್ರಯಾಣಿಕರ ಕಳವಳ.
ರೈಲಿನ ವೇಳಾಪಟ್ಟಿಯನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡಬಾರದು ಎಂದು ಅಭಿವೃದ್ಧಿ ಸಮಿತಿ ಅಧ್ಯಕ್ಷ ಹನುಮಂತ ಕಾಮತ್ ನೈಋತ್ಯ ರೈಲ್ವೆ ಪ್ರಧಾನ ಮುಖ್ಯ ನಿರ್ವಹಣ ಪ್ರಬಂಧಕರಿಗೆ ಬರೆದ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ
ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್ ಪ್ರತಿಭಟನೆ
Vijay Hazare: ಕರ್ನಾಟಕಕ್ಕೆ ಇಂದು ನಾಗಾಲ್ಯಾಂಡ್ ಎದುರಾಳಿ
Train; ಬೆಂಗಳೂರು- ಮುರುಡೇಶ್ವರ ಎಕ್ಸ್‌ಪ್ರೆಸ್ ರೈಲಿನ ಸಮಯ ಬದಲಾವಣೆಗೆ ಅಸಮ್ಮತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.