ಭಾರತದ ಸಮುದ್ರದ ತಾಕತ್ತಿನ ವಿಚಾರದಲ್ಲಿ ಇಂದು ದೊಡ್ಡ ದಿನ : ಪ್ರಧಾನಿ ನರೇಂದ್ರ ಮೋದಿ
Team Udayavani, Sep 2, 2022, 3:27 PM IST
ಮಂಗಳೂರು : ಭಾರತದ ಸಮುದ್ರದ ತಾಕತ್ತಿನ ವಿಚಾರದಲ್ಲಿ ದೊಡ್ಡ ದಿನವಾಗಿದೆ. ಸೈನ್ಯ ಮತ್ತು ಆರ್ಥಿಕ ವಿಚಾರದಲ್ಲಿ ದೇಶ ಇಂದು ದೊಡ್ಡ ಸಾಧನೆ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಗೋಲ್ಡ್ ಫಿಂಚ್ ಮೈದಾನದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕೊಚ್ಚಿಯಲ್ಲಿ ಇಂದು ದೇಶದ ಮೊದಲ ವಿಮಾನ ವಾಹಕ ನೌಕೆ ಐಎನ್ ಎಸ್ ವಿಕ್ರಾಂತ್ ಲೋಕಾರ್ಪಣೆ ಮಾಡಿರುವುದು ಪ್ರತಿಯೊಬ್ಬ ಪ್ರಜೆಗೂ ಹೆಮ್ಮೆಯಾಗಿದೆ ಎಂದರು.
ಮೀನುಗಾರರ ಉತ್ಪನ್ನಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತಲುಪಿಸುವುದು ಇನ್ನಷ್ಟು ಸುಲಭವಾಗಿದೆ. ವಿಕಸಿತ ಭಾರತ ನಿರ್ಮಾಣಕ್ಕೆ ಮೇಕ್ ಇನ್ ಇಂಡಿಯಾ ಅತ್ಯಂತ ಅಗತ್ಯ ಎಂದರು.
ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು, ಉತ್ಪಾದನಾ ವಲಯವನ್ನು ವಿಸ್ತರಿಸುವುದು ಮತ್ತು ಮೇಕ್ ಇನ್ ಇಂಡಿಯಾವನ್ನು ವಿಸ್ತರಿಸುವುದು ಬಹಳ ಮುಖ್ಯ.ಇದಲ್ಲದೆ, ನಾವು ರಫ್ತು ಹೆಚ್ಚಿಸಬೇಕು ಮತ್ತು ಉತ್ಪನ್ನಗಳ ವೆಚ್ಚವನ್ನು ಸ್ಪರ್ಧಾತ್ಮಕವಾಗಿಸಬೇಕು ಎಂದರು.
ಕಳೆದ ವರ್ಷಗಳಲ್ಲಿ, ರಾಷ್ಟ್ರವು ಬಂದರು ನೇತೃತ್ವದ ಅಭಿವೃದ್ಧಿಯನ್ನು ಪ್ರಮುಖ ಮಂತ್ರವನ್ನಾಗಿ ಮಾಡಿದೆ. ಈ ಪ್ರಯತ್ನಗಳ ಫಲವಾಗಿ ಕಳೆದ 8 ವರ್ಷಗಳಲ್ಲಿ ಭಾರತೀಯ ಬಂದರುಗಳ ಸಾಮರ್ಥ್ಯ ದ್ವಿಗುಣಗೊಂಡಿದೆ ಎಂದರು.
ಸಾಗರ ಮಾಲಾ ಯೋಜನೆಯ ಅತೀ ಹೆಚ್ಚು ಪ್ರಯೋಜನವನ್ನು ಕರ್ನಾಟಕ ಪಡೆದುಕೊಂಡಿದೆ.ರಾಜ್ಯದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳು, 2014 ರ ನಂತರ 4 ಪಟ್ಟು ಹೆಚ್ಚು ರೈಲ್ವೆ ಯೋಜನೆಗಳ ಅನುದಾನ ಕರ್ನಾಟಕ ಕ್ಕೆ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಕ್ಷೇತ್ರದಲ್ಲಿ ಕಳೆದ 8 ವರ್ಷಗಳಲ್ಲಿ 70,000 ಕೋಟಿ ರೂ.ಗಳ ಯೋಜನೆಗಳ ಕಾಮಗಾರಿ ಪ್ರಗತಿಯಲ್ಲಿದೆ. ಜತೆಗೆ 1 ಲಕ್ಷ ಕೋಟಿಗೂ ಹೆಚ್ಚು ಮೊತ್ತದ ಯೋಜನೆಗಳು ಚಾಲನೆಯಲ್ಲಿವೆ ಎಂದರು.
ಬಡವನಿಗೆ ಸಂಕಟ ಬಂದರೆ ಇಡೀ ಕುಟುಂಬ ಸಂಕಟಕ್ಕೆ ಗುರಿಯಾಗುತ್ತದೆ. ಆಯುಷ್ಮಾನ್ ಭಾರತ ಯೋಜನೆ ನಾಲ್ಕು ಕೋಟಿ ಬಡವರಿಗೆ ನೆರವಾಗಿಗೆ, ಕರ್ನಾಟಕದ 30 ಲಕ್ಷ ಮಂದಿಗೆ ನೆರವಾಗಿದೆ.ಕೋಟ್ಯಂತರ ಬಡವರಿಗೆ ವಿಕಾಸದ ಲಾಭ ಸಿಗಲು ಸಾಧ್ಯವಾಗಿದೆ ಎಂದರು.
ಮತ್ಸ್ಯ ಸಂಪದ ಯೋಜನೆ ಮೂಲಕ ಕರ್ನಾಟಕದ ಮೀನುಗಾರರ ಅಭಿವೃದ್ಧಿಗಾಗಿ ಕೆಲಸ ಮಾಡಲಾಗುತ್ತಿದೆ. ಕರಾವಳಿ ಮತ್ತು ಪಶ್ಚಿಮ ಘಟ್ಟ ಪ್ರವಾಸೋದ್ಯಮ ಅಭಿವೃದ್ಧಿಗೆ ಅತ್ಯುತ್ತಮ ಸ್ಥಳಗಳಾಗಿವೆ. ಪ್ರವಾಸೋದ್ಯಮ ಅಭಿವೃದ್ಧಿ ಸಮಾಜದ ಹಲವರಿಗೆ ಲಾಭವಾಗುತ್ತದೆ. ಕ್ರೂಸ್ ಟೂರಿಸಂ ಇಲ್ಲಿ ಅಭಿವೃದ್ಧಿಯಾಗಬೇಕು ಎಂದರು.
ಡಬಲ್ ಇಂಜಿನ್ ಸರಕಾರ ಹಗಲು ರಾತ್ರಿ ಜನರ ಆಕಾಂಕ್ಷೆಗಳನ್ನು ಈಡೇರಿಸಲು ಕೆಲಸಮಾಡುತ್ತಿದೆ. ಕಳೆದ 8 ವರ್ಷಗಳಲ್ಲಿ ಮೆಟ್ರೋ ಸಂಪರ್ಕ ಹೊಂದಿದ ನಗರಗಳ ಸಂಖ್ಯೆ ನಾಲ್ಕು ಪಟ್ಟು ಹೆಚ್ಚಾಗಿದೆ ಎಂದರು.
ಕ್ಲೀನ್ ಎಕಾನಮಿ ಮೂಲಕ ಆನ್ಲೈನ್ ಪೇಮೆಂಟ್ ಇಂದು ಮೇಲ್ಮಟ್ಟದಲ್ಲಿ ನಡೆಯುತ್ತಿದೆ. ಭೀಮ್ ಸೇರಿ ವಿವಿಧ ಯಾಪ್ ಗಳು ಜಗತ್ತಿನ ಗಮನ ಸೆಳೆಯುತ್ತಿದೆ ಎಂದರು.
ಭಾರತದ ದೊಡ್ಡ ಉದ್ಯಮಿಗಳು ಕರ್ನಾಟಕದವರೇ ಆಗಿದ್ದಾರೆ. ರಾಣಿ, ಅಬ್ಬಕ್ಕ ಅವರನ್ನು ನೆನಪಿಸಿಕೊಳ್ಳುತ್ತೇನೆ. ವೀರ ಮಹಿಳೆ ದೊಡ್ಡ ಪ್ರೇರಣೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.