ವಿಮಾನ ನಿಲ್ದಾಣ ರನ್ ವೇಯಲ್ಲಿ ಟ್ರ್ಯಾಕ್ಟರ್ ನಿಂತಿಲ್ಲ: ವಿವಿ ರಾವ್
Team Udayavani, Jan 11, 2018, 3:46 PM IST
ಮಂಗಳೂರು: ವಿಮಾನ ನಿಲ್ದಾಣದ ರನ್ ವೇಯಲ್ಲಿ ಟ್ರ್ಯಾಕ್ಟರ್ ನಿಂತಿಲ್ಲ, ಇದು ಸತ್ಯಕ್ಕೆ ದೂರವಾದ ವಿಷಯ ಎಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ದೇಶಕ ವಿವಿ ರಾವ್ ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೂದಲೆಳೆಯ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿದ ಘಟನೆ ನಡೆದಿದೆ ಎಂದು ಎಎನ್ಐ ವರದಿ ಮಾಡಿತ್ತು.
ರನ್ ವೇ ಸಮೀಪವೇ ಟ್ರ್ಯಾಕ್ಟರ್ ವೊಂದು ನಿಲ್ಲಿಸಲಾಗಿತ್ತು, ಆಗ ಮುಂಬೈಯತ್ತ ಸಾಗಬೇಕಾಗಿದ್ದ ವಿಮಾನವೊಂದು ಟೇಕಾಫ್ ಆಗುತ್ತಿತ್ತು. ಇದು ಏರ್ ಟ್ರಾಫಿಕ್ ಕಂಟ್ರೋಲರ್ ಗಮನಕ್ಕೆ ಬಂದಿತ್ತು, ಎಟಿಎಸ್ ಸಿಬ್ಬಂದಿ ಕೂಡಲೇ ವಿಮಾನದ ಪೈಲಟ್ ಗೆ ಸಂದೇಶ ರವಾನಿಸಿದ್ದಾರೆ. ಇದರಿಂದಾಗಿ ಭಾರೀ ಅನಾಹುತ ತಪ್ಪಿದಂತಾಗಿದೆ ಎಂದು ವರದಿ ವಿವರಿಸಿತ್ತು.
ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ನಿರ್ದೇಶಕರು, ವಿಮಾನ ಟೇಕಾಫ್ ಆಗುವ ವೇಳೆ ರನ್ ವೇ ಯಲ್ಲಿ ಯಾವುದೇ ಟ್ರ್ಯಾಕ್ಟರ್ ಆಗಲಿ ವಸ್ತುವಾಗಲಿ ಇರಲಿಲ್ಲವಾಗಿತ್ತು. ವಿಮಾನ ಟೇಕ್ ಆಫ್ ಆಗುವ ಮುನ್ನವೇ ರನ್ ವೇ ಗಿಂತ ತುಂಬಾ ದೂರದಲ್ಲಿ ಟ್ರ್ಯಾಕ್ಟರ್ ಇದ್ದಿರುವುದನ್ನು ಏರ್ ಟ್ರಾಫಿಕ್ ಕಂಟ್ರೋಲರ್ ಗಮನಕ್ಕೆ ಬಂದಿತ್ತು, ಕೂಡಲೇ ಟ್ರ್ಯಾಕ್ಟರ್ ಅನ್ನು ತೆಗೆಯಿಸಿದ ಬಳಿಕ ವಿಮಾನ ಸುರಕ್ಷಿತವಾಗಿ ಟೇಕಾಫ್ ಆಗಿದೆ ಎಂದು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.