ಜಪ್ಪಿನಗೊಗರು: ಬೈಕ್ ಢಿಕ್ಕಿ ; ಪಾದಚಾರಿ ಸಾವು
Team Udayavani, Aug 29, 2017, 9:30 AM IST
ಮಂಗಳೂರು: ಜಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರವಿವಾರ ತಡರಾತ್ರಿ ಮೋಟಾರ್ ಬೈಕ್ ಢಿಕ್ಕಿ ಹೊಡೆದು 35 – 40 ವರ್ಷದ ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ್ದಾರೆ.
ಮೃತ ವ್ಯಕ್ತಿ ಉದ್ದ ತೋಳಿನ ಗೆರೆಯ ಕ್ರಿಮ್ ಮಾಸಿದ ಬಿಳಿ ಬಣ್ಣದ ಅಂಗಿ ಮತ್ತು ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಸಾಧಾರಣ ಮೈಕಟ್ಟು, ಎಣ್ಣೆ ಕಪ್ಪು ಮೈಬಣ್ಣ, ಕೋಲು ಮುಖ ಹೊಂದಿರುತ್ತಾರೆ. ಮೃತ ದೇಹವನ್ನು ವೆನಾÉಕ್ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ವಾರಸುದಾರರಿದ್ದರೆ ಕಂಕನಾಡಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಕೋರಲಾಗಿದೆ.
ಅಪಘಾತದಲ್ಲಿ ಬೈಕ್ ಸವಾರ ಕಡಬ ಮರ್ದಾಳದ ಸಿರಿಲ್ (21) ಅವರ ಮುಖ ಮತ್ತು ದೇಹದ ಇತರ ಭಾಗಗಳಿಗೆ ಗಾಯಗಳಾಗಿದ್ದು, ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಿರಿಲ್ ಅವರು ಮಂಗಳೂರಿನ ಕ್ಯಾಟರಿಂಗ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ತೊಕ್ಕೊಟ್ಟಿನಲ್ಲಿರುವ ಅಕ್ಕನ ಮನೆಯಲ್ಲಿ ವಾಸ್ತವ್ಯ ಮಾಡುತ್ತಿದ್ದಾರೆ. ರವಿವಾರ ರಾತ್ರಿ ನಗರದ ಬಿಜೈಯಲ್ಲಿ ಕ್ಯಾಟರಿಂಗ್ ಕೆಲಸ ಮುಗಿಸಿ ಬೈಕ್‌ನಲ್ಲಿ ತೊಕ್ಕೊಟ್ಟು ಕಡೆಗೆ ಹೋಗುತ್ತಿದ್ದಾಗ ಜಪ್ಪಿನಮೊಗರು ಈಸ್ಟ್ ವೆಸ್ಟ್ ನರ್ಸರಿ ಎದುರು ಅಪಘಾತ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್
ಕ್ಯುಆರ್ ಕೋಡ್ ಬದಲಿಸಿ ಬಂಕ್‌ಗೆ ಲಕ್ಷಾಂತರ ರೂ. ವಂಚನೆ
Tannirbhavi: ಜ. 11, 12ರ ಬೀಚ್ ಉತ್ಸವ, ಸ್ವಚ್ಛತೆ ಸುರಕ್ಷತೆಗೆ ಗರಿಷ್ಠ ಆದ್ಯತೆ: ಡಿಸಿ
Mangaluru ಎಚ್‌ಎಂಪಿ ವೈರಸ್; ಆತಂಕದ ಅಗತ್ಯವಿಲ್ಲ, ಚಳಿಗಾಲದಲ್ಲಿ ಶೀತ, ಜ್ವರ ಸಾಮಾನ್ಯ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Yakshagana: ಕಾಲಮಿತಿ, ಕಾಲಗತಿಯ ಕಾಲದ ಯಕ್ಷಗಾನ-ಚಿಂತನೆ
ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.