![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 2, 2022, 10:15 PM IST
ಮಂಗಳೂರು: ಕಾಮಗಾರಿಯೊಂದರ ಬಿಲ್ ಮಂಜೂರು ಮಾಡುವುದಕ್ಕೆ ಲಂಚ ಪಡೆಯುತ್ತಿದ್ದ ಮಂಗಳೂರು ಮಹಾನಗರಪಾಲಿಕೆಯ ಎಂಜಿನಿಯರ್ ಅತಿಕ್ ರೆಹಮಾನ್‌ನನ್ನು ಭ್ರಷ್ಟಾಚಾರ ನಿಗ್ರಹದಳ-ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಈತ ಕಾಮಗಾರಿ ಬಿಲ್ ಮಂಜೂರು ಮಾಡಲು 3 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ದಳದವರು ದಾಳಿ ನಡೆಸಿದ್ದಾರೆ.
ಕೊಂಚಾಡಿ ದೇರೆಬೈಲು ಮಂದಾರಬೈಲು ಜಯಲಿಂಗಪ್ಪ ಅವರು ನಿರ್ವಹಿಸಿದ ಕಾಮಗಾರಿಯ ಬಿಲ್ ಮಂಜೂರು ಮಾಡಲು ಅತಿಕ್ ರೆಹಮಾನ್ 3 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಗುರುವಾರ ಸಂಜೆ ವೇಳೆ ಲಂಚವನ್ನು ಸ್ವೀಕರಿಸುವ ವೇಳೆ ದಕ್ಷಿಣ ಕನ್ನಡ ಭ್ರಷ್ಟಾಚಾರ ನಿಗ್ರಹದಳದ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಭ್ರಷ್ಟಾಚಾರ ನಿಗ್ರಹ ದಳದ ಪಶ್ಚಿಮ ವಲಯದ ಪೊಲೀಸ್ ಅಧೀಕ್ಷಕ ಸಿ.ಎ. ಸೈಮನ್ ಅವರ ಮಾರ್ಗದರ್ಶನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಉಪಾಧೀಕ್ಷಕ ಕೆ.ಸಿ. ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕ ಗುರುರಾಜ್, ಶ್ಯಾಮ್ ಸುಂದರ್ ಎಚ್. ಹಾಗೂ ಸಿಬಂದಿ ಹರಿಪ್ರಸಾದ್, ರಾಧಾಕೃಷ್ಣ ಕೆ. ರಾಧಾಕೃಷ್ಣ ಡಿ.ಎ., ಉಮೇಶ್, ವೈಶಾಲಿ, ಗಂಗಣ್ಣ, ಆದರ್ಶ, ರಾಕೇಶ್, ಭರತ್, ಮೋಹನ್ ಸಾಲಿಯಾನ್ ಕಾರ್ಯಾಚರಣೆ ನಡೆಸಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.