ಬಿಲ್ಲವ ಮುಖಂಡ ಹರಿಕೃಷ್ಣ ಬಂಟ್ವಾಳ ಬಿಜೆಪಿಗೆ- ಘೋಷಣೆ


Team Udayavani, Oct 23, 2017, 8:52 AM IST

23-13.jpg

ಮಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ, ಬಿಲ್ಲವ ಮುಖಂಡ ಹರಿಕೃಷ್ಣ ಬಂಟ್ವಾಳ ಅವರು ಅಧಿಕೃತವಾಗಿ ಬಿಜೆಪಿಗೆ ಸೇರುವುದಾಗಿ ಘೋಷಿಸಿದ್ದಾರೆ. ನ. 10ರಂದು ನಡೆಯಲಿರುವ ಪಕ್ಷದ ಪರಿವರ್ತನಾ ರ್ಯಾಲಿಯಲ್ಲಿ ಬಿಜೆಪಿ ಸೇರುವುದಾಗಿ ಸ್ವತಃ ಹರಿಕೃಷ್ಣ ಅವರೇ ಹೇಳಿದ್ದಾರೆ. 

ರವಿವಾರ ಸಂಜೆ ಮಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಿಲ್ಲವ ಸಂಘಟನೆಗಳ ಮುಖಂಡರೊಡನೆ ನಡೆಸಿದ ಸಮಾಲೋಚನ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಿದ್ದಾರೆ.  “ವರ್ಷಗಳ ಹಿಂದೆ ಅತ್ಯಧಿಕ ಬಿಲ್ಲವ ಸಮುದಾಯದ ಶಾಸಕರು, ಸಚಿವರು ಜಿಲ್ಲೆಯಲ್ಲಿದ್ದರು. ಕ್ರಮೇಣ ರಾಜಕೀಯ ಷಡ್ಯಂತ್ರಕ್ಕೆ ಪೂಜಾರಿ ಸೇರಿದಂತೆ ಬಿಲ್ಲವ ಸಮುದಾಯದವರು ಬಲಿಪಶುಗಳಾದರು. ದ.ಕ. ಜಿಲ್ಲೆಯಲ್ಲಿ ಬಿಲ್ಲವ ಸಮುದಾಯದ ಮತದಾರರು ಅಧಿಕ ಸಂಖ್ಯೆಯಲ್ಲಿದ್ದಾರೆ. ಆದರೆ ಒಂದು ಎಂಎಲ್‌ಸಿ ಸೀಟಿಗೂ ಬೇಡುವ ಪರಿಸ್ಥಿತಿ ಬಂದಿದೆ. ಈ ನಿಟ್ಟಿನಲ್ಲಿ ಸಮುದಾಯದ ಜನರು ಒಗ್ಗಟ್ಟಾಗಬೇಕಾಗಿದೆ’ ಎಂದು ಹೇಳಿದರು.

“ಬಿಲ್ಲವ ಸಮುದಾಯವಾಗಲಿ, ಕಾಂಗ್ರೆಸ್‌ ಪಕ್ಷವಾಗಲಿ ಯಾವುದೇ ಕಾರಣಕ್ಕೂ ಇನ್ನೊಂದು ಜನಾರ್ದನ ಪೂಜಾರಿ ಅವರನ್ನು ಸೃಷ್ಟಿಸಲು ಸಾಧ್ಯವಿಲ್ಲ. ಬಹುತೇಕ ಮಂದಿ ನಾಯಕರನ್ನು ರಾಜಕೀಯಕ್ಕೆ ತಂದ ಪೂಜಾರಿ ಅವರು ಇಂದು ಯಾರಿಗೂ ಬೇಡವಾಗಿದ್ದಾರೆ. ಇಂದು ಬಿಲ್ಲವ ಸಮುದಾಯವನ್ನೇ ರಾಜಕೀಯದಿಂದ ದೂರ ಇಡುವ ಪ್ರಯತ್ನವಾಗುತ್ತಿದೆ. ಇದಕ್ಕೆ ಉತ್ತರ ನೀಡುವ ನಿಟ್ಟಿನಲ್ಲಿ ಬಿಜೆಪಿಗೆ ತೆರಳುತ್ತಿದ್ದೇನೆ’ ಎಂದು ತಿಳಿಸಿದರು.

“1972ರಲ್ಲಿ ಆರ್‌ಎಸ್‌ಎಸ್‌ ಮೂಲಕ ಸಾರ್ವಜನಿಕ ಕ್ಷೇತ್ರಕ್ಕೆ ಕಾಲಿರಿಸಿದ ನಾನು 1975ರಲ್ಲಿ ಜನಸಂಘದ ಬಂಟ್ವಾಳ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಗೊಂಡೆ. ತುರ್ತುಪರಿಸ್ಥಿತಿ ವೇಳೆ ಜೈಲುವಾಸ ಅನುಭವಿಸಿದ್ದೆ. 1982ರಲ್ಲಿ ಬಿಜೆಪಿ ತೊರೆದಿದ್ದು ಈಗ ಮತ್ತೆ ನಾನು ಬಿಜೆಪಿಗೆ ಸೇರುತ್ತಿದ್ದೇನೆ’ ಎಂದರು. ಬಿಲ್ಲವ ಮುಖಂಡರಾದ ಮೋಹನ್‌ ಅಮೀನ್‌ ವಾಮಂಜೂರು, ಲೋಕನಾಥ್‌ ಕೆ., ಗಂಗಾಧರ್‌ ಪೂಜಾರಿ ಮುಂಬಯಿ, ರೋಹಿನಾಥ್‌ ಪಾದೆ ಉಪಸ್ಥಿತರಿದ್ದರು.

ನಳಿನ್‌, ಪಾಲೆಮಾರ್‌ ಭೇಟಿ!
ಸಭೆ ಆರಂಭಕ್ಕೂ ಮುನ್ನ ಸಂಸದ ನಳಿನ್‌ ಕುಮಾರ್‌ ಕಟೀಲು ಹಾಗೂ ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್‌ ಅವರು ಹೊಟೇಲ್‌ಗೆ ಭೇಟಿ ನೀಡಿರುವುದು ವಿಶೇಷ. ಆದರೆ ಅವರಿಬ್ಬರು ಕೂಡ ಸಭೆಯಲ್ಲಿ ಪಾಲ್ಗೊಂಡಿರಲಿಲ್ಲ. ಬದಲಿಗೆ, ಹರಿಕೃಷ್ಣ ಬಂಟ್ವಾಳ ಹಾಗೂ ಬಿಲ್ಲವ ಮುಖಂಡರೊಂದಿಗೆ ಅನೌಪಚಾರಿಕವಾಗಿ ಮಾತನಾಡಿ ಅಲ್ಲಿಂದ ತೆರಳಿದರು.

ಟಾಪ್ ನ್ಯೂಸ್

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

Mangaluru: ಭಾರತ ಬಲಿಷ್ಠವಾಗಲು ಕೌಶಲಯುತ ಶಿಕ್ಷಣ ಅಗತ್ಯ: ಡಾ| ನಿರ್ಮಲಾನಂದನಾಥ ಸ್ವಾಮೀಜಿ

Mangaluru: ಭಾರತ ಬಲಿಷ್ಠವಾಗಲು ಕೌಶಲಯುತ ಶಿಕ್ಷಣ ಅಗತ್ಯ: ಡಾ| ನಿರ್ಮಲಾನಂದನಾಥ ಸ್ವಾಮೀಜಿ

8

Hampankatte: ಸಿಟಿ ಮಾರ್ಕೆಟ್‌ ರಸ್ತೆಗೆ ಬೇಕಿದೆ ಕಾಯಕಲ್ಪ

7

Mangaluru: ಪಿ.ಎಂ. ರಾವ್‌ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Amparu: ಬೈಕ್‌ ಸ್ಕಿಡ್‌; ಸವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವು

Amparu: ಬೈಕ್‌ ಸ್ಕಿಡ್‌; ಸವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವು

KAUP: ಸಂವಿಧಾನ ಉಳಿಸಿ ಬೃಹತ್‌ ಜಾಥಾ ಮತ್ತು ಸಾರ್ವಜನಿಕ ಸಭೆ

KAUP: ಧರ್ಮಗ್ರಂಥಗಳಷ್ಟೇ ಸಂವಿಧಾನವೂ ಪವಿತ್ರ: ನಿಕೇತ್‌ ರಾಜ್‌ ಮೌರ್ಯ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Tamil film Maharaja to be released in China on November 29

Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.