ಸಮುದ್ರದಲೆಯಲ್ಲಿ ನೀಲಿ ಬೆಳಕಿನಾಟ: ತಡರಾತ್ರಿಯವರೆಗೂ ಬೀಚ್ ನಲ್ಲಿ ಕುತೂಹಲಿಗರ ದಂಡು
Team Udayavani, Nov 24, 2020, 12:16 PM IST
ಉಳ್ಳಾಲ: ಸೋಮೇಶ್ವರ, ಉಚ್ಚಿಲ ಸಮುದ್ರ ತೀರದಲ್ಲೂ ನೀಲಿ ತೆರೆಗಳು ದಡಕ್ಕೆ ಅಪ್ಪಳಿಸಲು ಆರಂಭಿಸಿದ್ದು, ಸೋಮವಾರ ತಡರಾತ್ರಿವರೆಗೂ ಕುತೂಹಲಿಗರು ಸಮುದ್ರ ತಟದಲ್ಲಿ ನಿಂತು ಅಲೆಗಳ ಕೌತುಕವನ್ನು ವೀಕ್ಷಣೆ ನಡೆಸಿದರು.
ಅರಬ್ಬಿ ಸಮುದ್ರದ ಮಲ್ಪೆಯ ಪಡುಕೆರೆ,ಕಾರವಾರ ಉದ್ದಕ್ಕೂ ನೀಲಿ ಬೆಳಕು ಕಾಣಿಸಿಕೊಳ್ಳುತ್ತಿರುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುದ್ಧಿ ಹರಡುತ್ತಿದ್ದಂತೆ , ಸೋಮೇಶ್ವರ ಸಮುದ್ರ ತೀರದಲ್ಲಿ ಸೋಮವಾರ ರಾತ್ರಿ ಜನ ಜಮಾಯಿಸಿ ನೀಲಿ ಬೆಳಕು ದಡಕ್ಕೆ ಅಪ್ಪಳಿಸುವುದನ್ನು ಕಂಡು ಬೆರಗಾದರು.
ಉಳ್ಳಾಲ, ಮುಕ್ಕಚ್ಚೇರಿ, ಸೋಮೆಶ್ವರ, ಉಚ್ಚಿಲ, ತಲಪಾಡಿ ಭಾಗಗಳಲ್ಲಿ ಸಮುದ್ರದ ಅಲೆಗಳಲ್ಲಿ ನೀಲಿ ಬೆಳಕು ಕಾಣಿಸಿಕೊಂಡಿದೆ. ಹಲವು ದಿನಗಳಿಂದ ಬೆಳಕು ಕಾಣುತ್ತಿದ್ದರೂ, ಕಾರವಾರ ಮಲ್ಪೆ ಸಮುದ್ರ ತೀರದ ಬೆಳಕಿನ ಸುದ್ಧಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಉಳ್ಳಾಲ ಭಾಗದಲ್ಲಿಯೂ ಕುತೂಹಲಿಗರು ಸಮುದ್ರ ತೀರದಲ್ಲಿ ತಡರಾತ್ರಿವರೆಗೂ ಉಳಿದು ಅಲೆಗಳ ಜತೆಗೆ ನೀಲಿಬೆಳಕಿನ ಆಟವನ್ನು ಮೊಬೈಲ್ ಹಾಗೂ ಕ್ಯಾಮರಾಗಳ ಮೂಲಕ ಸೆರೆಹಿಡಿದರು.
ಸಮುದ್ರ ನೀರಿನ ಹಸುರು, ನೀಲಿ ರಂಗಿನಾಟ
ಎರಡು – ಮೂರು ದಿನಗಳಿಂದ ಅರಬ್ಬಿ ಸಮುದ್ರದಲ್ಲಿ ವಿಚಿತ್ರ ವಿದ್ಯಮಾನ ಜರಗುತ್ತಿದ್ದು, ಹಗಲು ಹೊತ್ತು ಪಾಚಿ ಬಣ್ಣದ ಹಸುರು ನೀರು, ರಾತ್ರಿ ನೀಲಿ ಬಣ್ಣ ನೀರು ಕಂಡುಬರುತ್ತಿದ್ದು ಭಾರೀ ಸಂಖ್ಯೆಯಲ್ಲಿ ಜನರನ್ನು ಆಕರ್ಷಿಸುತ್ತಿದೆ.
ಕಳೆದ ಸೆ.15ರಿಂದ ಮೂರ್‍ನಾಲ್ಕು ದಿನಗಳ ಕಾಲ ಸಮುದ್ರ ಇದೇ ಬಣ್ಣಕ್ಕೆ ತಿರುಗಿತ್ತು. ಈ ಸಂದರ್ಭ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸಮುದ್ರದ ನೀರನ್ನು ಪರೀಕ್ಷೆಗಾಗಿ ಲ್ಯಾಬ್ ಗೆ ಕಳುಹಿಸಿಕೊಟ್ಟದನ್ನು ಸ್ಮರಿಸಬಹುದು. ಇದೀಗ ಮತ್ತೂಮ್ಮೆ ಸಮುದ್ರದಾಳದ ಪಾಚಿಗಳು ಮೇಲೆ ಬಂದು ಈ ಬಣ್ಣಕ್ಕೆ ತಿರುಗಿರಬಹುದೆಂದು ತಜ್ಞರ ಅಭಿಪ್ರಾಯ. ರಾತ್ರಿ ಚಂದ್ರನ ಬೆಳಕಿಗೆ ಪ್ರತಿಫಲನಗೊಳ್ಳುವ ಸಂದರ್ಭ ಸಮುದ್ರ ನೀಲಿ ಬಣ್ಣದಿಂದ ಕಂಗೊಳಿಸುತ್ತಿದೆ.
ಚಿತ್ರಗಳು: ವಸಂತ್ ಕೊಣಾಜೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.