ಜನನ, ಮರಣ ನೋಂದಣಿ: ಶೇ. 100ರಷ್ಟು ದಾಖಲಿಸಲು ಡಿಸಿ ಸೂಚನೆ
Team Udayavani, Nov 1, 2022, 6:25 AM IST
ಮಂಗಳೂರು: ಜನನ ಮರಣ ನೋಂದಣಿ ಕಡ್ಡಾಯವಾಗಿ ಶೇ. 100ರಷ್ಟು ದಾಖಲಾಗುವಂತೆ ಹಾಗೂ ಈ ಪ್ರಕ್ರಿಯೆಯಲ್ಲಿ ಯಾವುದೇ ನೋಂದಣಿ ಬಿಟ್ಟು ಹೋಗದಂತೆ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್‌ನ ಸಿಇಓ ಡಾ| ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.
ದ.ಕ. ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಜನನ ಮರಣ ನೋಂದಣಿ ಕುರಿತ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮರಣದ ನೋಂದಣಿ ಮಾಡುವಾಗ ಮರಣ ಕಾರಣವನ್ನು ನಿಖರವಾಗಿ ದಾಖಲಿಸಬೇಕು ಹಾಗೂ ಮರಣ ನೋಂದಣಿ ಮಾಡುವಾಗ ನಮೂನೆ-4ಅನ್ನು ತಂತ್ರಾಂಶದಲ್ಲಿ ಅಪ್‌ಲೋಡ್ ಮಾಡಬೇಕು. ಕೃಷಿ ಅಂಕಿ ಅಂಶ ಸಮನ್ವಯ ಸಮಿತಿಗೆ ಸಂಬಂಧಿಸಿದಂತೆ 2022-23ನೇ ಸಾಲಿನ ಮುಂಗಾರು ಋತುವಿನ ಬೆಳೆ ಅಂದಾಜು ಸಮೀಕ್ಷೆ ಯೋಜನೆಯಡಿ ಬೆಳೆ ಕಟಾವು ಪ್ರಯೋಗಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಮುಖ್ಯವಾಗಿ ಯಾವುದೇ ಪ್ರಯೋ ಗಗಳು ವ್ಯತ್ಯಯವಾಗದಂತೆ ಕ್ರಮ ವಹಿಸುವಂತೆ ಅವರು ತಿಳಿಸಿದರು.
11ನೇ ಕೃಷಿ ಗಣತಿ ಕಾರ್ಯಕ್ಕೆ ಜಿಲ್ಲಾಧಿಕಾರಿಯವರು ಚಾಲನೆ ನೀಡಿ, ಮೂಲಕಾರ್ಯಕರ್ತರಾದ ಗ್ರಾಮಕರಣೀಕರು ಯಾವುದೇ ಸರ್ವೆ/ಸಬ್ ಸರ್ವೆ ನಂಬ್ರಗಳು ಬಿಟ್ಟು ಹೋಗದ ರೀತಿಯಲ್ಲಿ ಗಣತಿ ಕಾರ್ಯವನ್ನು ನಡೆಸಿ ಡಿ.31ರೊಳಗೆ ಪೂರ್ಣಗೊಳಿಸುವಂತೆ ಜಿಲ್ಲೆಯ ಎಲ್ಲಾ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.
ಎಡಿಸಿ ಕೃಷ್ಣಮೂರ್ತಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಸೀತಾ, ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ನಾಯಕ್, ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರವೀಣ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಕಿಶೋರ್ ಕುಮಾರ್ ಸಭೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
MUST WATCH
ಹೊಸ ಸೇರ್ಪಡೆ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.