ಮಂಗಳೂರು ಕುಕ್ಕರ್ ಪ್ರಕರಣ: ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ರಿಕ್ಷಾ ಹಸ್ತಾಂತರ
Team Udayavani, Mar 5, 2023, 6:38 PM IST
ಮಂಗಳೂರು: ಕಳೆದ ವರ್ಷ ನವೆಂಬರ್ 19ರಂದು ಕಂಕನಾಡಿ ಗರೋಡಿ ಬಳಿ ಆಟೋದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರ ಗಾಯಗೊಂಡು ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ನೂತನ ಆಟೋ ರಿಕ್ಷಾ ಮತ್ತು ಬಿಜೆಪಿ ವತಿಯಿಂದ 5 ಲಕ್ಷ ರೂ. ಮೌಲ್ಯದ ಚೆಕ್ ರವಿವಾರ ಹಸ್ತಾಂತರಿಸಲಾಯಿತು.
ಈ ವೇಳೆ ಮಾತನಾಡಿದ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಕುಕ್ಕರ್ ಬಾಂಬ್ ಸ್ಫೋಟಿಸುವ ಮೂಲಕ ಭಾರತವನ್ನು ಇಸ್ಲಾಮಿಕ್ ರಾಷ್ಟ್ರ ಮಾಡುವ ಹುನ್ನಾರ ಈಗಾಗಲೇ ಬಯಲಾಗಿದೆ. ಎನ್‌ಐಎ ಅಧಿಕಾರಿಗಳೇ ಇದನ್ನು ಬಹಿರಂಗ ಪಡಿಸಿದ್ದು, ಕೃತ್ಯದ ಕುರಿತು ಅಪಹಾಸ್ಯ ಮಾಡಿದವರು, ಸ್ಫೋಟ ಮಾಡಿದವರನ್ನು ಅಮಾಯಕರು ಎಂದು ಹೇಳಿದ್ದ ಕಾಂಗ್ರೆಸಿಗರು ಈಗ ಏನು ಹೇಳುತ್ತಾರೆ. ಮತಬ್ಯಾಂಕ್, ತುಷ್ಠೀಕರಣದ ರಾಜಕೀಯವನ್ನು ಬಿಜೆಪಿ ಸಹಿಸುವುದಿಲ್ಲ ಎಂದರು.
ಶಾಸಕ ವೇದವ್ಯಾಸ ಕಾಮತ್, ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ, ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ಪ್ರೇಮಾನಂದ ಶೆಟ್ಟಿ, ಸಂದೀಪ್ ಗರೋಡಿ, ಸುಧೀರ್ ಶೆಟ್ಟಿ, ಶರಣ್ ಪಂಪ್‌ವೆಲ್ ಮೊದಲಾದವರು ಉಪಸ್ಥಿತರಿದ್ದರು.
ಇದನ್ನೂ ಓದಿ: ಕಟಪಾಡಿ: ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ ಕಾರು; ಕೆಲವರಿಗೆ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.