ಬಿಜೆಪಿಗೆ ಸಚಿವ ಜಾರ್ಜ್‌ ರಾಜೀನಾಮೆ ಕೇಳುವ ನೈತಿಕತೆಯಿಲ್ಲ: ರೈ


Team Udayavani, Oct 31, 2017, 8:53 AM IST

31-2.jpg

ಮಂಗಳೂರು: ಡಿವೈಎಸ್‌ಪಿ ಗಣಪತಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯು ವಿನಾ ಕಾರಣ ಸಚಿವ ಕೆ.ಜೆ. ಜಾರ್ಜ್‌ ಅವರ ರಾಜೀನಾಮೆ ಕೇಳುವ ಮೂಲಕ ಕಾಂಗ್ರೆಸ್‌ನ ನೈತಿಕ ಸ್ಥೈರ್ಯ ಕುಗ್ಗಿಸುವ ಪ್ರಯತ್ನ ಮಾಡುತ್ತಿದೆ. ಕೇಂದ್ರದ ಕೆಲವು ಸಚಿವರ ವಿರುದ್ಧವೂ ಎಫ್‌ಐಆರ್‌ ದಾಖಲಾದ್ದು, ಅವರು ಸಚಿವರ ಸ್ಥಾನದಲ್ಲಿ ಮುಂದುವರಿದಿರುವಾಗ ಬಿಜೆಪಿಗೆ ಜಾರ್ಜ್‌ ರಾಜೀನಾಮೆ ಕೇಳುವ ನೈತಿಕತೆ ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಹೇಳಿದರು.

ಸೋಮವಾರ ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು, ಗಣಪತಿ ಸಾವಿನ ಕುರಿತು ಸಿಒಡಿ ತನಿಖೆಯ ವೇಳೆ ರಾಜೀನಾಮೆ ನೀಡಿದ್ದ ಜಾರ್ಜ್‌ ಅವರು, ತಪ್ಪಿತಸ್ಥರು ಅಲ್ಲ ಎಂದು ವರದಿ ಬಂದ ಬಳಿಕ ಮತ್ತೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದರು. ಈಗ ಸಿಬಿಐ ಎಫ್‌ಐಆರ್‌ ದಾಖಲಿಸಿದ ತತ್‌ಕ್ಷಣ ರಾಜೀನಾಮೆ ಕೊಡಬೇಕೆಂದಿಲ್ಲ ಎಂದರು.

ಹಿಂದೆ ಸಿಬಿಐ ಮೇಲೆ ಬಿಜೆಪಿಗೆ ನಂಬಿಕೆ ಇರಲಿಲ್ಲ. ಈಗ ಕಾಂಗ್ರೆಸ್‌ ಸಚಿವರ ವಿರುದ್ಧ ಆದಾಯ ತೆರಿಗೆ ದಾಳಿಯಂತಹ ತಂತ್ರಗಾರಿಕೆ ಮೂಲಕ ಅಧಿಕಾರ ದುರುಪಯೋಗ ಮಾಡುತ್ತಿದೆ. ಬಳ್ಳಾರಿಯಲ್ಲಿ  ಶೇ. 60 ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿ ಗಣಿಗಾರಿಕೆ ನಡೆಸಿದ್ದ ಜನಾರ್ದನ ರೆಡ್ಡಿ ವಿರುದ್ಧದ ಪ್ರಕರಣಗಳನ್ನು ಈಗ ಸಡಿಲಿಕೆ ಮಾಡಲಾಗಿದೆ. ಈ ಕುರಿತು ಬುದ್ಧಿವಂತ ಜನತೆ ತಿಳಿದುಕೊಳ್ಳಬೇಕು ಎಂದು ರೈ ಹೇಳಿದರು.

ಬಿಜೆಪಿಯಿಂದ ಸಾವಿರ ಸುಳ್ಳು
ಪ್ರಸ್ತುತ ಜಿಎಸ್‌ಟಿ ಜಾರಿಯಲ್ಲಿ ತೊಂದರೆ ಇದೆ ಎಂದು ತಿಳಿದಾಗ ಅದರಲ್ಲಿ ಕಾಂಗ್ರೆಸ್‌ನ ಪಾತ್ರವೂ ಇದೆ ಎಂದು ಬಿಜೆಪಿ ಆರೋಪಿಸುತ್ತಿದೆ. ಹಿಂದೆ ಕಾಂಗ್ರೆಸ್‌ ಜಿಎಸ್‌ಟಿ ಯಲ್ಲಿ ಶೇ. 18 ತೆರಿಗೆ ವಿಧಿಸಲು ನಿರ್ಧರಿಸಿದ್ದು, ಪ್ರಸ್ತುತ ಅದನ್ನು ಶೇ. 28ಕ್ಕೆ ಏರಿಸಲಾಗಿದೆ. ಪ್ರಜಾತಾಂತ್ರಿಕ ವ್ಯವಸ್ಥೆ ಮೂಲಕ ಗೆಲ್ಲಲು ಸಾಧ್ಯವಾಗದ ಬಿಜೆಪಿ ಪ್ರಸ್ತುತ ಸಾವಿರ ಸುಳ್ಳು ಹೇಳಿ ಪಕ್ಷ ಕಟ್ಟುವ ಪ್ರಯತ್ನ ಮಾಡುತ್ತಿದೆ.

ಕಲ್ಲಡ್ಕದ ಶಾಲೆಯು ಅನುದಾನಿತ ಶಾಲೆಯಾಗಿದ್ದು, ಅದಕ್ಕೆ ಬಿಸಿಯೂಟ ಯೋಜನೆ ನೀಡಲು ಅವಕಾಶವಿದೆ. ದೇವಸ್ಥಾನದ ಪರಿಸರದ ಶಾಲೆಗಳಿಗೆ ಊಟ ನೀಡು ವುದು ಸರಿಯಾದ ಕ್ರಮ. ಆದರೆ 150 ಕಿ.ಮೀ. ದೂರದ ದೇವಸ್ಥಾನದಿಂದ ಊಟಕ್ಕೆ ಅನುದಾನ ನೀಡು ವುದು ಅಧಿಕಾರದ ದುರುಪಯೋಗವಾಗಿದೆ. ಟಿಪ್ಪು ಜಯಂತಿ ಯಲ್ಲಿ ಭಾಗವಹಿಸಲು ಇಷ್ಟವಿಲ್ಲದವರು ದೂರ ನಿಲ್ಲಲಿ. ಅದನ್ನು ಬಿಟ್ಟು ಕೋಮು ಗಲಭೆಯನ್ನು ಸೃಷ್ಟಿಸದಿರಲಿ. ಈ ವೇಳೆ ಅಹಿತಕರ ಘಟನೆಗೆ ಕಾರಣವಾಗುವವರ ವಿರುದ್ಧ ಪೊಲೀಸ್‌ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ರೈ ಅವರು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹರೀಶ್‌ ಕುಮಾರ್‌, ಪ್ರಮುಖರಾದ ಬಿ.ಎಚ್‌. ಖಾದರ್‌, ಪಿ.ವಿ. ಮೋಹನ್‌, ಶಶಿಧರ್‌ ಹೆಗ್ಡೆ, ಮಮತಾ ಗಟ್ಟಿ, ಪ್ರತಿಭಾ ಕುಳಾ, ಶ್ಯಾಲೆಟ್‌ ಪಿಂಟೊ, ಅಪ್ಪಿ, ಆರ್‌.ಕೆ. ಪೃಥ್ವಿರಾಜ್‌, ವಿಶ್ವಾಸ್‌ ಕುಮಾರ್‌, ಪುರುಷೋತ್ತಮ ಚಿತ್ರಾಪುರ, ಸಂತೋಷ್‌ ಕುಮಾರ್‌ ಶೆಟ್ಟಿ, ಸಲೀಂ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ  ಸೇವೆ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

4-mng-2

Mangaluru: ಹೆಲಿಕಾಪ್ಟರ್ ಸಂಚಾರ: ಸ್ಥಳ ಬದಲಾವಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arest

Kundapura: ಅಂಬರ್‌ ಗ್ರೀಸ್‌ ಮಾರಾಟ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

7

Kasaragod: ಅಂಗಡಿಗೆ ನುಗ್ಗಿದ ಕಾಡು ಹಂದಿ

5

Kadaba: ಮೇಯಲು ಬಿಟ್ಟ ದನದ ಕಾಲು ಕಡಿದ ವ್ಯಕ್ತಿ; ದೂರು

dw

Siddapura: ವಿದ್ಯುತ್‌ ಲೈನಿಗೆ ಕೊಕ್ಕೆ ತಾಗಿ ಕಾರ್ಮಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.