ಸುನಿಲ್ ಕುಮಾರ್ ವಿರುದ್ಧ ಸ್ಪರ್ಧೆಗೆ ಬಿಜೆಪಿ ಸಚಿವರಿಂದಲೇ ಸಹಕಾರ: ಪ್ರಮೋದ್ ಮುತಾಲಿಕ್
Team Udayavani, Feb 13, 2023, 12:24 PM IST
ಮಂಗಳೂರು: ಕಾರ್ಕಳದಲ್ಲಿ ಸ್ಪರ್ಧಿಸಲು ಬಿಜೆಪಿ ಸಚಿವರು, ಶಾಸಕರು ತನುಮನ ಧನದ ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸ್ಪೋಟಕ ಹೇಳಿಕೆ ನೀಡಿದ್ದಾರೆ,
ಮಂಗಳೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುನಿಲ್ ಕುಮಾರ್ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸಲ್ಪಡುತ್ತಿದ್ದು, ಮುಖ್ಯಮಂತ್ರಿ ರೇಸ್ ನಲ್ಲಿರುವ ಇತರ ಕೆಲವು ಬಿಜೆಪಿ ಮುಖಂಡರು ನನಗೆ ಸಹಕಾರದ ಭರವಸೆ ನೀಡಿದ್ದಾರೆ. ಕಾರ್ಕಳದಲ್ಲಿ ನನ್ನ ಗೆಲುವು ಖಚಿತ. ನಕಲಿ ಹಿಂದುತ್ವ ಮತ್ತು ಭ್ರಷ್ಟಾಚಾರದ ವಿರುದ್ದ ನನ್ನ ಸ್ಪರ್ಧೆ ಎಂದರು.
ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಕಾರ್ಕಳ ವಿಧಾನಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಈಗಾಗಲೇ ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ:ಅಸಾಂವಿಧಾನಿಕ ಒತ್ತಡಗಳು ಸರ್ಕಾರವನ್ನು ನಿಯಂತ್ರಣ ಮಾಡುತ್ತಿವೆ: ವಿಶ್ವನಾಥ್ ಆರೋಪ
ಪ್ರೇಮಿಗಳ ದಿನಾಚರಣೆಗೆ ಈ ಬಾರಿಯೂ ವಿರೋಧವಿದೆ. ಪೊಲೀಸರ ಜತೆ ಸೇರಿ ಕಾನೂನು ಬದ್ದವಾಗಿ ತಡಯುತ್ತೇವೆ. ಪ್ರೇಮಿಗಳ ದಿನ ಆಚರಣೆ ನೆಪದಲ್ಲಿ ಅನೈತಿಕತೆ, ಡ್ರಗ್ಸ್ ಮಾಫಿಯಾ ಸೆಕ್ಸ್ ಮಾಫಿಯಾಕ್ಕೆ ಅವಕಾಶ ನೀಡುವುದಿಲ್ಲ ಎಂದು ಮುತಾಲಿಕ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.