ಪೊಲೀಸರಿಗೆ ವೇದವ್ಯಾಸ ಕಾಮತ್ ತರಾಟೆ
Team Udayavani, Sep 11, 2018, 12:33 PM IST
ಮಂಗಳೂರು: ನಗರದ ಅಂಬೇಡ್ಕರ್ ವೃತ್ತದ ಬಳಿ ಕಾಂಗ್ರೆಸ್ ಹಾಗೂ ಇತರ ಸಂಘಟನೆಗಳು ಸೋಮವಾರ ಬೆಳಗ್ಗೆ ಮಾಜಿ ಶಾಸಕ ಜೆ.ಆರ್. ಲೋಬೋ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭ ಅದೇ ಹಾದಿಯಲ್ಲಿ ಸಾಗುತ್ತಿದ್ದ ಶಾಸಕ ವೇದವ್ಯಾಸ ಕಾಮತ್ ವಿರುದ್ಧ ಪ್ರತಿಭಟನೆಕಾರರು ಘೋಷಣೆ ಕೂಗಿದ್ದು, ತತ್‌ಕ್ಷಣ ಶಾಸಕರು ಕಾರು ನಿಲ್ಲಿಸಿ ಪೊಲೀಸರ ಬಳಿ ತೆರಳಿ ಆಕ್ಷೇಪ ವ್ಯಕ್ತಪಡಿಸಿದರು.
ಸ್ಥಳದಲ್ಲಿ ಸ್ವಲ್ಪಹೊತ್ತು ಗೊಂದಲ ನೆಲೆಸಿತ್ತು.ಶಾಸಕರ ಕಾರನ್ನು ಕಂಡು ಕಾರ್ಯಕರ್ತರು ಅವರ ವಿರುದ್ಧ ಘೋಷಣೆ ಕೂಗಿದ್ದಲ್ಲದೆ ಕೆಲವರು ಕಾರಿನತ್ತ ಧಾವಿಸಿದರು. ಕ್ರುದ್ಧರಾದ ಶಾಸಕರು ಕಾರಿನಿಂದ ಇಳಿದು ಬಂದರು. ಸ್ಥಳದಲ್ಲಿದ್ದ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಹಾಗೂ ಪೊಲೀಸ್‌ಅಧಿಕಾರಿಗಳು ಪರಿಸ್ಥಿತಿಯನ್ನು ತಿಳಿ ಗೊಳಿಸಲು ಪ್ರಯತ್ನಿಸಿದರು. ರಸ್ತೆಯಲ್ಲಿ ಧರಣಿ ನಡೆಸಿ ಸಾರ್ವಜನಿಕ ಸಂಚಾರಕ್ಕೆ ಅಡ್ಡಿ ಮಾಡುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳ ಜತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಮತ್ ಸರಕಾರ ಹಾಗೂ ಅಧಿಕಾರಿಗಳು ಬಂದ್ ಮಾಡುವವರಿಗೆ ಸಹಕಾರ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಬಳಿಕ ಪೊಲೀಸರು ಧರಣಿನಿರತನ್ನು ಸ್ಥಳದಿಂದ ತೆರವುಗೊಳಿಸಿದರು.
ಬಲವಂತದ ಬಂದ್
ಮಾಧ್ಯಮದವರೊಂದಿಗೆ ಮಾತನಾಡಿದ ವೇದವ್ಯಾಸ ಕಾಮತ್, ಇದು ಸ್ವಯಂಪ್ರೇರಿತ ಅಲ್ಲ; ಬಲವಂತದ ಬಂದ್. ರಾಜ್ಯದ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರಕಾರ ಅಧಿಕಾರವನ್ನು ದುರುಪಯೋಗ ಮಾಡುತ್ತಿದೆ ಎಂದು ಆರೋಪಿಸಿದರು. ಸಾರ್ವಜನಿಕರ ಹಿತದ ಬದಲು ಮುಂದಿನ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಟ್ಟುಕೊಂಡು ಕಾಂಗ್ರೆಸ್ ಮತ್ತು ಇತರರು ಈ ಬಂದ್‌ಗೆ ಕರೆ ನೀಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ
Pakshikere Case: ಚಿನ್ನಾಭರಣ ಕಳೆದುಕೊಂಡವರಿಂದ ಪೊಲೀಸರಿಗೆ ದೂರು
Mangaluru: ಕಾಲೇಜಿನಲ್ಲಿ ಕುಸಿದು ಬಿದ್ದಿದ್ದ ಉಪನ್ಯಾಸಕಿ ಸಾ*ವು
Mangaluru: ಯಾವುದೇ ರಾಜ್ಯಕ್ಕೂ ಕೇಂದ್ರ ಮಲತಾಯಿ ಧೋರಣೆ ಮಾಡಿಲ್ಲ: ನಿರ್ಮಲಾ ಸೀತಾರಾಮನ್
Padil ಹೆದ್ದಾರಿಗೆ ಡಾಮರು, ಜಂಕ್ಷನ್‌ಗೆ ಇಲ್ಲ !
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.