ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಇಂದು ಮಂಗಳೂರಿಗೆ
ಏರ್‌ಪೋರ್ಟ್‌ನಿಂದ ನಗರಕ್ಕೆ ಮೆರವಣಿಗೆ, ಸ್ವಾಗತ
Team Udayavani, Aug 29, 2019, 5:04 AM IST
ಮಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಮಂಗಳವಾರ ಬೆಂಗಳೂರಿ ನಲ್ಲಿ ಅಧಿಕಾರ ಸ್ವೀಕರಿಸಿದ ಅನಂತರ ನಳಿನ್ ಕುಮಾರ್ ಕಟೀಲು ಅವರು ಇದೇ ಮೊದಲ ಬಾರಿಗೆ ಆ.29ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಅವರನ್ನು ಸ್ವಾಗತಿಸಲು ದ.ಕ. ಬಿಜೆಪಿ ಸರ್ವ ಸಿದ್ಧತೆ ನಡೆಸಿದೆ.
ಬೆಳಗ್ಗೆ 9 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ನಳಿನ್ ಕುಮಾರ್ ಕಟೀಲು ಅವರನ್ನು ದ.ಕ. ಜಿಲ್ಲಾ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಸ್ವಾಗತಿಸಿ ವಾಹನಗಳ ಮೆರವಣಿಗೆ ಮೂಲಕ ನಗರಕ್ಕೆ ಕರೆತರಲಿದ್ದಾರೆ. ಸುಮಾರು 500ರಷ್ಟು ವಾಹನಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಬೆಳಗ್ಗೆ 10 ಗಂಟೆಗೆ ನಗರದ ಕೊಡಿಯಾಲಬೈಲ್ ಟಿ.ವಿ. ರಮಣ್ ಪೈ ಕನ್ವೆನ್ಶನ್ ಹಾಲ್‌ನಲ್ಲಿ ಅಭಿನಂದನ ಸಭೆ ಆಯೋಜಿಸಲಾಗಿದೆ. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವಿ. ಸುನಿಲ್ ಕುಮಾರ್ ಮತ್ತು ದ.ಕ. ಜಿಲ್ಲೆಯ ಎಲ್ಲ ಬಿಜೆಪಿ ಶಾಸಕರು, ಪ್ರಮುಖರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸುಮಾರು 2 ಸಾವಿರದಷ್ಟು ಬಿಜೆಪಿ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ, ಶಾಸಕ ಸಂಜೀವ ಮಠಂದೂರು”ಉದಯವಾಣಿ’ಗೆ ತಿಳಿಸಿದ್ದಾರೆ.
ಅಭಿನಂದನ ಸಭೆಯ ಬಳಿಕ ನಳಿನ್ ಕುಮಾರ್ ಕಟೀಲು ಅಧ್ಯಕ್ಷತೆಯಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಲಿದೆ. ಅನಂತರ ಬಿಜೆಪಿ ಪ್ರಮುಖರ ಸಭೆ ಆಯೋಜಿಸಲಾಗಿದೆ. ಸಂಜೆ ಸರ್ಕ್ಯುಟ್ ಹೌಸ್‌ನಲ್ಲಿ ಅವರು ಸಾರ್ವಜನಿಕ ಅಹವಾಲು ಸ್ವೀಕರಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.