ಮೇಯರ್ ವಿರುದ್ಧ ಪಾಲಿಕೆ ಎದುರು ಬಿಜೆಪಿ ಪ್ರತಿಭಟನೆ
Team Udayavani, Nov 1, 2017, 12:33 PM IST
ಮಹಾನಗರ: ಮಹಾನಗರ ಪಾಲಿಕೆ ಆಡಳಿತದ ಅವ್ಯವಸ್ಥೆ ಹಾಗೂ ಫ್ಲ್ಯಾಟ್‌ನ ವಾಚ್‌ಮೆನ್ ಪತ್ನಿ ಮೇಲೆ ನಡೆಸಿರುವ ದೌರ್ಜನ್ಯ ನಡೆಸಿರುವ ಆರೋಪ ಎದುರಿಸುತ್ತಿರುವ ಮೇಯರ್ ಆವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ತತ್‌ಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ವತಿಯಿಂದ ಪಾಲಿಕೆ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿ ಮಂಗಳೂರು ದಕ್ಷಿಣ ಕ್ಷೇತ್ರದ ಅಧ್ಯಕ್ಷ ವೇದವ್ಯಾಸ ಕಾಮತ್ ಮಾತನಾಡಿ, ಬಡವರ ಪರವಾಗಿಯೇ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಹೇಳಿ ಅಧಿಕಾರಕ್ಕೆ ಬಂದ ಮೇಯರ್ ಅಭಿವೃದ್ಧಿ ಕೆಲಸ ಮಾಡುವುದನ್ನು ಬಿಟ್ಟು ಪ್ರಚಾರಗಿಟ್ಟಿಸುವ ಕೆಲಸವನ್ನೇ ಮಾಡುತ್ತಿದ್ದಾರೆ. ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಬಡವರ ಮೇಲೆ ದಬ್ಟಾಳಿಕೆ ನಡೆಸಲು ಹೊರಟಿದ್ದಾರೆ ಎಂದು ಆರೋಪಿಸಿದರು.
ಮನಪಾ ಸದಸ್ಯ ಸುಧೀರ್ ಶೆಟ್ಟಿ ಕಣ್ಣೂರು ಮಾತನಾಡಿ, ಪಾಲಿಕೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗುತ್ತಿವೆ. ನಗರದಲ್ಲಿ ನೂರಾರು ಮಸಾಜ್ ಸೆಂಟರ್‌ಗಳಿದ್ದರೂ ಕೆಲವು ಕೇಂದ್ರಗಳಿಗೆ ಮಾತ್ರವೇ ದಾಳಿ
ನಡೆಸುತ್ತಿದ್ದಾರೆ. 20 ಸಾವಿರಕ್ಕೂ ಅಧಿಕ ಅನಧಿಕೃತ ನೀರಿನ ಸಂಪರ್ಕ ಇದ್ದರೂ ಒಂದು ಅಪಾರ್ಟ್‌ಮೆಂಟ್‌ಗೆ ದಾಳಿ
ನಡೆಸಿ ಪ್ರಚಾರ ಪಡೆಯುತ್ತಿದ್ದಾರೆ ಎಂದು ಆರೋಪಿಸಿದರು.
ಮಾಜಿ ಮೇಯರ್ ಗಣೇಶ್ ಹೊಸಬೆಟ್ಟು, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಮಾಜಿ ಮೇಯರ್ ರಜನಿ ದುಗ್ಗಣ್ಣ, ಮೀನುಗಾರಿಕೆ ನಿಗಮದ ಮಾಜಿ ಅಧ್ಯಕ್ಷ ನಿತಿನ್ ಕುಮಾರ್, ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ಮಹಿಳಾ ಮೋರ್ಚಾ ಅಧ್ಯಕ್ಷೆ ಪೂಜಾ ಪೈ, ಮನಪಾ ಸದಸ್ಯೆ ರೂಪಾ ಡಿ. ಬಂಗೇರ, ಕ್ಯಾ| ಬ್ರಿಜೇಶ್ ಚೌಟ, ಜಿಪಂ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ, ಸಂಜಯ್ ಪ್ರಭು, ವಸಂತ ಪೂಜಾರಿ, ಸಂತೋಷ್ ಉಳ್ಳಾಲ್ ಮೊದಲಾದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
MUST WATCH
ಹೊಸ ಸೇರ್ಪಡೆ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.