ರಾಹುಲ್‌ ಆಗಮನ; ಡಿಸಿ ಆದೇಶ ಉಲ್ಲಂಘಿಸಿದ ಕಾಂಗ್ರೆಸ್‌: ಬಿಜೆಪಿ ಆರೋಪ


Team Udayavani, Mar 20, 2018, 10:40 AM IST

BJP-Flag 600.jpg

ಮಂಗಳೂರು: ಬಿಜೆಪಿ ಇತ್ತೀಚಿಗೆ ಮಂಗಳೂರಿನಲ್ಲಿ ಆಯೋಜಿಸಿದ್ದ ಜನಸುರಕ್ಷಾ ಯಾತ್ರೆಯ ವೇಳೆ ಬ್ಯಾನರ್‌, ಫ್ಲೆಕ್ಸ್‌ ಹಾಕಿದ್ದನ್ನು ದ.ಕ. ಜಿಲ್ಲಾಧಿಕಾರಿ ಮನಪಾ ಆಯುಕ್ತರಿಗೆ ನೊಟೀಸ್‌ ನೀಡಿ ತತ್‌ಕ್ಷಣ ತೆರವುಗೊಳಿಸಿದ್ದರು. ನಗರದಲ್ಲಿ ಫ್ಲೆಕ್ಸ್‌ -ಬ್ಯಾನರ್‌ ಕಾನೂನುಬಾಹಿರವಾಗಿ ಅಳವಡಿಸದಂತೆ ಜಿಲ್ಲಾಧಿಕಾರಿ ಆದೇಶ ನೀಡಿದ್ದರು. ಆದರೆ ಈ ಆದೇಶವನ್ನು ಉಲ್ಲಂಘಿಸಿ ನಗರದಲ್ಲಿ ಕಾಂಗ್ರೆಸ್‌ ಜನಾಶೀರ್ವಾದ ಯಾತ್ರೆಯ ಫ್ಲೆಕ್ಸ್‌ ಬ್ಯಾನರ್‌ಗಳನ್ನು ಅಳವಡಿಸಲಾಗಿದೆ ಎಂದು ದ.ಕ. ಜಿಲ್ಲಾ ಬಿಜೆಪಿ ವಕ್ತಾರ ಜಿತೇಂದ್ರ ಕೊಟ್ಟಾರಿ ಆರೋಪಿಸಿದ್ದಾರೆ.

ಮಂಗಳೂರು ಬಿಜೆಪಿ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಸುರಕ್ಷಾ ಯಾತ್ರೆಯ ಮುನ್ನಾದಿನ ಬಿಜೆಪಿ ಅಳವಡಿಸಿದ್ದ ಬ್ಯಾನರ್‌, ಫ್ಲೆಕ್ಸ್‌ಗಳನ್ನು ಮಾ. 5ರಂದು ಜಿಲ್ಲಾಧಿಕಾರಿ ಮೂಲಕ ತೆರವುಗೊಳಿಸಲು ಸಚಿವ ರಮಾನಾಥ ರೈ, ಸಚಿವ ಯು.ಟಿ. ಖಾದರ್‌, ಶಾಸಕ ಜೆ.ಆರ್‌. ಲೋಬೋ ಅವರ ಒತ್ತಡದ ಮೇರೆಗೆ ಕೆಲಸ ನಡೆದಿದೆ. ಜಿಲ್ಲಾಧಿಕಾರಿಯ ಆದೇಶ ಈಗಲೂ ಊರ್ಜಿತದಲ್ಲಿದೆ. ಆದರೆ ಕಾಂಗ್ರೆಸ್‌ನವರು ಫ್ಲೆಕ್ಸ್‌, ಬ್ಯಾನರ್‌ ಅಳವಡಿಸುವ ಮೂಲಕ ಜಿಲ್ಲಾಧಿಕಾರಿ ನೀಡಿರುವ ಆದೇಶ ಉಲ್ಲಂ ಸಿದ್ದಾರೆ ಎಂದು ಆರೋಪಿಸಿದರು. 

ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಬಿಜೆಪಿಯ ಸಮಾವೇಶದ ಬ್ಯಾನರ್‌ಗಳನ್ನು ತೆಗೆಸಲು ಯತ್ನಿಸಿದ್ದರು. ಜತೆಗೆ ಮಂಗಳೂರು ವ್ಯಾಪ್ತಿಯ ಧಾರ್ಮಿಕ ಕಾರ್ಯಕ್ರಮಗಳ ಬ್ಯಾನರ್‌ಗಳನ್ನು ತೆಗೆಸಲಾಗಿತ್ತು. ಆದರೆ ಈಗ ಕಾಂಗ್ರೆಸ್‌ನವರೇ ಫ್ಲೆಕ್ಸ್‌ ಅಳವಡಿಸಿದ್ದು, ಇತರರಿಗೆ ಒಂದು ಕಾನೂನು, ಕಾಂಗ್ರೆಸ್‌ಗೆ ಒಂದು ಕಾನೂನು ಎಂಬುದನ್ನು ಬಹಿರಂಗಪಡಿಸಿದಂತಾಗಿದೆ ಎಂದರು.

ಕ್ರೈಸ್ತರ ಉದ್ಯಮ ಸಂಘಟನೆಯೊಂದರ ವತಿಯಿಂದ ಇತ್ತೀಚೆಗೆ ಮಂಗಳೂರಿನಲ್ಲಿ ಆಯೋಜಿಸಲಾದ ಒಂದು ಕಾರ್ಯಕ್ರಮಕ್ಕೆ ಕೇವಲ ಕಾಂಗ್ರೆಸ್‌ ನಾಯಕರನ್ನಷ್ಟೇ ಆಹ್ವಾನಿಸಿ, ಬಿಜೆಪಿಯನ್ನು ಟೀಕಿಸಲಾಗಿದೆ. ಸಂಘಟನೆಯಲ್ಲಿರುವ ಬಿಜೆಪಿ ಅಲ್ಪಸಂಖ್ಯಾಕ ಮೋರ್ಚಾದ ಪದಾಧಿಕಾರಿಗಳನ್ನು ಕಡೆಗಣಿಸಲಾಗಿದೆ. ಇಂತಹ ಸಂಘಟನೆಯು ಬಿಜೆಪಿ ಅವಹೇಳನ ಮಾಡುವ ಬದಲು ಜಪ್ಪು ಮಿಷನರಿ ಕಂಪೌಂಡ್‌ನ‌ಲ್ಲಿರುವ ಕ್ರೈಸ್ತ ಕುಟುಂಬಗಳಿಗೆ ನ್ಯಾಯ ಒದಗಿಸುವ ಪ್ರಯತ್ನ ನಡೆಸಲಿ ಎಂದು ಅವರು ಒತ್ತಾಯಿಸಿದರು.

ಪಾಲಿಕೆ ವಿಪಕ್ಷ ನಾಯಕ ಪ್ರೇಮಾನಂದ ಶೆಟ್ಟಿ, ಸದಸ್ಯರಾದ ಗಣೇಶ್‌ ಹೊಸಬೆಟ್ಟು, ಸುಧೀರ್‌ ಶೆಟ್ಟಿ ಕಣ್ಣೂರು, ರೂಪಾ ಡಿ. ಬಂಗೇರ, ದಕ್ಷಿಣ ಮಂಡಲ ಬಿಜೆಪಿ ಅಲ್ಪಸಂಖ್ಯಾಕ ಮೋರ್ಚಾದ ಲ್ಯಾಡಿನ್‌ ಡಿ’ಸಿಲ್ವಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

6

Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫ‌ಲ

5

Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್‌

4

Mangaluru: ಮತ್ತೆ ಫ್ಲೆಕ್ಸ್‌ , ಬ್ಯಾನರ್‌ಗಳ ಉಪಟಳ

1

Ullal: ಸೋಮೇಶ್ವರ ಬೀಚ್‌; ಮೂಲಸೌಕರ್ಯ ಕಣ್ಮರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.