ಸುಭದ್ರ ಭಾರತಕ್ಕಾಗಿ ಬಿಜೆಪಿ ಬೆಂಬಲಿಸಿ: ನಳಿನ್ ಕುಮಾರ್
Team Udayavani, Apr 9, 2019, 6:20 AM IST
ಮಹಾನಗರ: ಐದು ವರ್ಷಗಳಿಂದ ನರೇಂದ್ರ ಮೋದಿಯವರ ಕೈಯಲ್ಲಿ ಭಾರತ ಬಲಾಡ್ಯವಾಗಿ, ಸುಭದ್ರವಾಗಿ ವಿಶ್ವದೆದುರು ಎದೆಯುಬ್ಬಿಸಿ ನಿಂತಿದೆ ಎಂದು ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ನಾಗುರಿಯಲ್ಲಿ ನಡೆದ ಚುನಾವಣ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಈ ಹಿಂದೆ ಭಾರತಕ್ಕೆ ವಿಶ್ವದ ಬೇರೆ ಬೇರೆ ರಾಷ್ಟ್ರಗಳ ಪ್ರಮುಖರು ಭೇಟಿ ಕೊಟ್ಟಾಗ ಅವರಿಗೆ ಭಾರತವನ್ನು ಪರಿಚಯಿಸುವಲ್ಲಿ ಕಾಂಗ್ರೆಸ್ ನಿರಾಸಕ್ತಿ ತೋರಿಸಿದೆ. ಆದರೆ ಐದು ವರ್ಷಗಳಿಂದ ಪ್ರಧಾನಿ ಮೋದಿಜೀ ಅವರು ಭಾರತದ ಪರಂಪರೆ ಆಚಾರ ವಿಚಾರಗಳನ್ನು ಜಗತ್ತಿನ ಮುಂದೆ ತೆರೆದಿಡುವ ಮೂಲಕ ಭಾರತದ ಆಂತರಿಕ ಸತ್ವಗಳನ್ನು ಜಗತ್ತಿನೆಲ್ಲೆಡೆ ಪಸರಿಸಿದ್ದಾರೆ ಎಂದರು.
ಯಶಸ್ವಿ ರಾಜತಾಂತ್ರಿಕ ನೀತಿ, ಜನ ಸಾಮಾನ್ಯರ ಕರೆಗೂ ತತ್‌ಕ್ಷಣವೇ ಸ್ಪಂದಿಸುವ ಸಚಿವರನ್ನು ನರೇಂದ್ರ ಮೋದಿಯ ಹೊರತಾಗಿ ಬೇರಾವ ಸರಕಾರದಿಂದಲೂ ನಿರೀಕ್ಷಿಸಲಾಗದು ಎಂದು ಹೇಳಿದರು.
ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ
ಈ ಕಾರ್ಯಕ್ರಮದಲ್ಲಿ ಅಳಪೆ ಉತ್ತರ ವಾರ್ಡಿನ ಶಿವನಗರದ ಸುಮಾರು 12 ಜನ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ವಸಂತ್ ಜೆ. ಪೂಜಾರಿ, ಬಿಜೆಪಿ ಅಳಪೆ ಉತ್ತರ ವಾರ್ಡ್ ಅಧ್ಯಕ್ಷ ನರೇಶ್, ವಾರ್ಡ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ನಿಡ್ಡೇಲ್ ಅವರ ಮುಂದಾಳುತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡರು. ನಳಿನ್ ಕುಮಾರ್ ಕಟೀಲು ಅವರು ಪಕ್ಷದ ಧ್ವಜ ನೀಡುವ ಮೂಲಕ ಅವರನ್ನು ಬಿಜೆಪಿಗೆ ಸ್ವಾಗತಿಸಿದರು.
ಶಾಸಕ ಡಿ. ವೇದವ್ಯಾಸ ಕಾಮತ್, ಮಾಜಿ ಶಾಸಕ ಎನ್. ಯೋಗೀಶ್ ಭಟ್, ನಾಗರಾಜ್ ಶೆಟ್ಟಿ , ನಿತಿನ್ ಕುಮಾರ್, ರವಿಶಂಕರ್ ಮಿಜಾರ್, ಮೋನಪ್ಪ ಭಂಡಾರಿ, ರಮೇಶ್ ಕಂಡೇಟು, ಜಿತೇಂದ್ರ ಕೊಟ್ಟಾರಿ, ಪ್ರೇಮಾನಂದ ಶೆಟ್ಟಿ , ಭಾಸ್ಕರ್ ಚಂದ್ರ ಶೆಟ್ಟಿ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.