ನಗರದ 2 ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ; 1ರಲ್ಲಿ ಕಾಂಗ್ರೆಸ್‌ ಮೇಲುಗೈ

ದಕ್ಷಿಣ- ಉತ್ತರದಲ್ಲಿ ಜಾಸ್ತಿಯಾದ ಬಿಜೆಪಿ ಲೀಡ್‌; ಮಂಗಳೂರು ಕ್ಷೇತ್ರದಲ್ಲಿ ಕುಸಿದ ಕಾಂಗ್ರೆಸ್‌ !

Team Udayavani, May 25, 2019, 6:00 AM IST

2305MLR52-BJP

ಮಹಾನಗರ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ 7ರಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್‌ ಕುಮಾರ್‌ ಕಟೀಲು ಅವರು ಮುನ್ನಡೆ ಕಾಯ್ದುಕೊಂಡಿದ್ದು, ಆ ಮೂಲಕ ಅಲ್ಲಿನ ಶಾಸಕರ ವರ್ಚಸ್ಸು, ರಾಜಕೀಯವಾಗಿ ಬಲಾಬಲವನ್ನು ಹೆಚ್ಚಿಸುವಂತೆ ಮಾಡಿದೆ.

ಮಂಗಳೂರು ವ್ಯಾಪ್ತಿಯ 3 ಕ್ಷೇತ್ರಗಳಲ್ಲಿ ಕಳೆದ ವಿಧಾನಸಭೆ ಚುನಾವಣೆಗೆ ಹೋಲಿಸಿದರೆ, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಪ್ರಮುಖ ಪ್ರತಿಸ್ಪರ್ಧಿ ಗಳಾಗಿರುವ ಬಿಜೆಪಿ, ಕಾಂಗ್ರೆಸ್‌ ಪರಸ್ಪರ ಹಂಚಿಕೊಂಡಿರುವ ಒಟ್ಟು ಮತಗಳ ಸಂಖ್ಯೆಯಲ್ಲಿ ಗಮನಾರ್ಹವಾದ ವ್ಯತ್ಯಾಸವಾಗಿಲ್ಲ. ನಿರೀಕ್ಷೆಯಂತೆ ಮಂಗಳೂರು ದಕ್ಷಿಣ, ಮಂಗಳೂರು ಉತ್ತರದಲ್ಲಿ ನಳಿನ್‌ ಕುಮಾರ್‌ ಕಟೀಲು ಅವರಿಗೆ ಹೆಚ್ಚಿನ ಮತಗಳು ಚಲಾವಣೆಯಾಗಿವೆ. ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಮಿಥುನ್‌ ರೈ ಅವರಿಗೆ ಹೆಚ್ಚಿನ ಮತಗಳು ಚಲಾವಣೆಯಾಗಿವೆ.

ಕಾಂಗ್ರೆಸ್‌ನತ್ತ ಮತದಾರರ ನಿಷ್ಠೆ
2007ರ ವಿಧಾನಸಭಾ ಉಪ ಚುನಾವಣೆಯಿಂದ ಹಿಡಿದು 2018ರ ವರೆಗಿನ ಒಟ್ಟು 4 ವಿಧಾನಸಭಾ ಚುನಾವಣೆಗಳಲ್ಲಿ ಮಂಗಳೂರು (ಉಳ್ಳಾಲ) ಕ್ಷೇತ್ರದಲ್ಲಿ ಬಿಜೆಪಿ ಒಂದು ಬಾರಿಯೂ ಗೆದ್ದಿಲ್ಲ; ಬದಲಿಗೆ, ಕಾಂಗ್ರೆಸ್‌ ಅಭ್ಯರ್ಥಿಯೇ ಗೆದ್ದು ಬಂದಿದ್ದಾರೆ.

ಈಗ ಈ ಲೋಕಸಭೆ ಚುನಾವಣೆಯೂ ಸಹಿತ 3 ಲೋಕಸಭಾ ಚುನಾವಣೆಗಳಲ್ಲಿ ಬಿಜೆಪಿ ಗೆದ್ದರೂ ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾತ್ರ ಕಾಂಗ್ರೆಸ್‌ ತನ್ನ ಮುನ್ನಡೆ ಕಾಯ್ದುಕೊಂಡಿದೆ.

2009ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಜನಾರ್ದನ ಪೂಜಾರಿ ಅವರು ಬಿಜೆಪಿಯ ನಳಿನ್‌ ಕುಮಾರ್‌ ಕಟೀಲು ವಿರುದ್ಧ ಸ್ಪರ್ಧಿಸಿ ಸೋತಿದ್ದರೂ, ಮಂಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ 15,358 ಮತಗಳ ಮುನ್ನಡೆ ಲಭಿಸಿತ್ತು.

2013ರ ವಿಧಾನಸಭಾ ಚುನಾವಣೆ ಯಲ್ಲಿ ಕಾಂಗ್ರೆಸ್‌ನ ಯು.ಟಿ. ಖಾದರ್‌ (69,450) ಬಿಜೆಪಿಯ ಚಂದ್ರಹಾಸ ಉಳ್ಳಾಲ (40,339) ಅವರನ್ನು ಪರಾಜಯಗೊಳಿಸಿದ್ದರು. ಬಳಿಕ 2014ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ನಳಿನ್‌ ಕುಮಾರ್‌ ಗೆದ್ದರೂ, ಕಾಂಗ್ರೆಸ್‌ನ ಜನಾರ್ದನ ಪೂಜಾರಿ ಅವರು ನಳಿನ್‌ ಅವರಿಗಿಂತ 13,035 ಮತಗಳ ಮುನ್ನಡೆಯನ್ನು ಪಡೆದಿದ್ದರು. ಆ ಬಳಿಕ 2018ರ ವಿಧಾನಸಭಾ ಚುನಾವಣೆಯಲ್ಲಿ ಯು.ಟಿ. ಖಾದರ್‌ (80,813) ಅವರು ಸಂತೋಷ್‌ ಕುಮಾರ್‌ ರೈ ಬೋಳಿಯಾರು (61,074) ಅವರ ವಿರುದ್ಧ 19,739 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಮಂಗಳೂರು ದಕ್ಷಿಣ ಕ್ಷೇತ್ರ
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಂದ ಫಲಿತಾಂಶದಂತೆಯೇ, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿಯೂ ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ತನ್ನ ಮುನ್ನಡೆ ಕಾಯ್ದುಕೊಂಡಿದೆ.
2009ರಲ್ಲಿ ನಳಿನ್‌ ಅವರಿಗೆ ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಜನಾರ್ದನ ಪೂಜಾರಿ ಅವರಿಗಿಂತ ಕಡಿಮೆ ಮತ ಬಂದಿತ್ತು. ಪೂಜಾರಿ 65,042, ನಳಿನ್‌ 60,460 ಮತ ಗಳಿಸಿದ್ದರು. ಪೂಜಾರಿ 4,582 ಮತಗಳ ಲೀಡ್‌ ದಾಖಲಿಸಿದ್ದರು. 2014ರ ಲೋಕಸಭೆ ಚುನಾವಣೆಯಲ್ಲಿ ನಳಿನ್‌ 79,150 ಮತ, ಜನಾರ್ದನ ಪೂಜಾರಿ 66,070 ಮತ ಪಡೆದಿದ್ದರು. ಈ ಮೂಲಕ ಬಿಜೆಪಿ ಇಲ್ಲಿ 13,086 ಮತಗಳ ಲೀಡ್‌ ದಾಖಲಿಸಿತ್ತು.

ಮಂಗಳೂರು ಉತ್ತರ ಕ್ಷೇತ್ರ
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿಯೂ ಈ ಸಲದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಮತಗಳು ಲಭಿಸಿದ್ದು, ಆ ಮೂಲಕ ನಳಿನ್‌ ಅವರಿಗೆ ಮುನ್ನಡೆ ತಂದುಕೊಟ್ಟಿದೆ. 2009ರ ಲೋಕಸಭೆ ಚುನಾವಣೆಯಲ್ಲಿ ನಳಿನ್‌ 65,402, ಜನಾರ್ದನ ಪೂಜಾರಿ 63,019 ಮತಗಳಿಸಿದ್ದು, ನಳಿನ್‌ 2,383 ಮತಗಳ ಲೀಡ್‌ ದಾಖಲಿಸಿದ್ದರು. 2014ರಲ್ಲಿ ನಳಿನ್‌ 87,843, ಜನಾರ್ದನ ಪೂಜಾರಿ 64,404 ಮತ ಪಡೆದಿದ್ದು, ನಳಿನ್‌ ಇಲ್ಲಿ 23,439 ಮತಗಳ ಲೀಡ್‌ ಪಡೆದಿದ್ದರು.

ಮಂಗಳೂರು ಉತ್ತರ ಹಾಗೂ ದಕ್ಷಿಣದಲ್ಲಿ ಕಾಂಗ್ರೆಸ್‌ಗೆ ಹೋಲಿಸಿದರೆ, ಬಿಜೆಪಿಯ ಮತಗಳ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದೆ. ಉತ್ತರ ಕ್ಷೇತ್ರದಲ್ಲಿ 2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ 98,648 ಮತಗಳು ಲಭಿಸಿದ್ದರೆ, ಕಾಂಗ್ರೆಸ್‌ಗೆ 72,000 ಮತಗಳು ಬಂದಿತ್ತು. ಹಾಗೆಯೇ, ಮಂಗಳೂರು ದಕ್ಷಿಣದಲ್ಲಿ ಬಿಜೆಪಿಗೆ 86,545 ಮತಗಳು, ಕಾಂಗ್ರೆಸ್‌ಗೆ 70,470 ಮತಗಳು ಬಂದಿತ್ತು. ಈ ಮತಗಳಿಗೆ ಹೋಲಿಸಿದರೆ, 2019ರ ಚುನಾವಣೆಯಲ್ಲಿ ನಳಿನ್‌ಗೆ ಮಂಗಳೂರು ಉತ್ತರದಲ್ಲಿ 1,07,501, ಮಿಥುನ್‌ ರೈ 61,413 ಮತ ಗಳಿಸಿದ್ದು, ನಳಿನ್‌ ಅವರು ಇಲ್ಲಿ 46,088 ಮತಗಳ ಲೀಡ್‌ ದಾಖಲಿಸಿದ್ದಾರೆ. ಹಾಗೆಯೇ ದಕ್ಷಿಣದಲ್ಲಿ ಈ ಬಾರಿ ನಳಿನ್‌ 98,041, ಮಿಥುನ್‌ ರೈ ಅವರಿಗೆ 65,206 ಮತ ಬಂದಿದ್ದು, ನಳಿನ್‌ ಅವರು 32,835 ಲೀಡ್‌ ದಾಖಲಿಸಿದ್ದಾರೆ.

2018ರ ವಿಧಾನ ಸಭಾ ಚುನಾವಣೆ ವೇಳೆ ಶರತ್‌ ಮಡಿವಾಳ ಮತ್ತು ದೀಪಕ್‌ ರಾವ್‌ ಕೊಲೆ ಪ್ರಕರಣಗಳು ಜಿಲ್ಲೆಯಲ್ಲಿ ಬಿಜೆಪಿ ಪರ ಅಲೆಗೆ ಕಾರಣ ವಾಗಿತ್ತು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಇಂತಹ ಯಾವುದೇ ಗಂಭೀರವಾದ ಪ್ರಕರಣಗಳು ಚರ್ಚೆಗೆ ಬಂದಿಲ್ಲ. ಅಲ್ಲದೆ ತೊಕ್ಕೊಟು ಮತ್ತು ಪಂಪ್‌ವೆಲ್‌ ಫ್ಲೆ$çಓವರ್‌ ಕಾಮಗಾರಿಗಳು 10 ವರ್ಷಗಳಾದರೂ ಪೂರ್ಣ ಗೊಳ್ಳದಿರುವ ವಿಷಯ ನಳಿನ್‌ ಅವರ ವಿಜಯದ ನಾಗಾಲೋಟಕ್ಕೆ ತಡೆಯಾಗಲಿಲ್ಲ ಎನ್ನುವುದು ಗಮನಾರ್ಹ.

ಕಾಂಗ್ರೆಸ್‌ ಮತ ಕುಸಿತ
20 ವರ್ಷಗಳಲ್ಲಿ ನಡೆದ 6 ವಿಧಾನ ಸಭಾ ಚುನಾವಣೆಗಳಲ್ಲಿ ಮತ್ತು ಮೂರು (2009, 2014, 2019) ಲೋಕಸಭಾ ಚುನಾವಣೆಗಳಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಕಾಯ್ದುಕೊಂಡು ಬಂದಿದೆ. ಆದರೆ ಗಮನಿಸಬಹುದಾ ಅಂಶವೆಂದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಇಲ್ಲಿ ಕಾಂಗ್ರೆಸ್‌ಗೆ ಒಟ್ಟು 19,739 ಮತಗಳು ಬಂದಿದ್ದರೆ, ಈ ಲೋಕಸಭೆ ಚುನಾವಣೆಯಲ್ಲಿ 11,392 ಮತಗಳು ಲಭಿಸುವ ಮೂಲಕ ಬರೋಬರಿ 8,347 ಮತಗಳನ್ನು ಕಾಂಗ್ರೆಸ್‌ ಕಳೆದುಕೊಂಡಿದೆ.

 ಮೋದಿ ನಾಯಕತ್ವ ಕಾರಣ
ಭಾರತವನ್ನು ಸಮರ್ಥವಾಗಿ ಮುನ್ನಡೆಸ ಬಲ್ಲ ಶಕ್ತಿ ನರೇಂದ್ರ ಮೋದಿ ಅವರಿಗಿದೆ ಎಂಬ ಭಾವನೆ ಜನರಲ್ಲಿ ಆಳವಾಗಿ ಬೇರೂರಿದ್ದು, ಇದಕ್ಕೆ ಪೂರಕವಾಗಿ ಬಿಜೆಪಿ ಕಾರ್ಯಕರ್ತರು ಸತತ ಪರಿಶ್ರಮ ಬಿಜೆಪಿ ಅಭ್ಯರ್ಥಿ ನಳಿನ್‌ ಗೆಲುವಿಗೆ ಮುಖ್ಯ ಕಾರಣ.
– ವೇದವ್ಯಾಸ ಕಾಮತ್‌, ಶಾಸಕರು, ಮಂಗಳೂರು ದಕ್ಷಿಣ

ಮೋದಿ ಸುನಾಮಿ ಕಾರಣ
ಈ ಬಾರಿಯ ಚುನಾವಣೆಯಲ್ಲಿ ಕಳೆದ (2014) ಬಾರಿಗಿಂತ ಜಾಸ್ತಿ ಮತ ಪಡೆಯಲು ಮೋದಿ ಸುನಾಮಿ ಪ್ರಮುಖ ಕಾರಣ. ಜತೆಗೆ ಕ್ಷೇತ್ರದಲ್ಲಿ ಮತದಾರರೇ ಕಾರ್ಯಕರ್ತರಾಗಿ ಮನೆ ಮನೆಗೆ ತೆರಳಿ ಮೋದಿ ಪರ ಮತ ಹಾಕುವಂತೆ ಮನ ಒಲಿಸುವ ಕೆಲಸ ಮಾಡಿದ್ದಾರೆ.
– ಡಾ|ವೈ.ಭರತ್‌ ಶೆಟ್ಟಿ,
ಶಾಸಕರು, ಮಂಗಳೂರು ಉತ್ತರ

ಟಾಪ್ ನ್ಯೂಸ್

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.