ಇಂದು ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ; ಯಡಿಯೂರಪ್ಪ ಭಾಗಿ


Team Udayavani, Jul 13, 2017, 3:55 AM IST

BSY-120017017.jpg

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತರು ಮತ್ತು ನಾಯಕರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಮತ್ತು ಸುಳ್ಳು ಕೇಸು ದಾಖಲಿಸಿ ಹಿಂದೂ ಸಂಘಟನೆಗಳನ್ನು ದಮನಿಸುವ ಪ್ರಯತ್ನವನ್ನು ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಜು. 13ರಂದು ನಗರದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.

ಬಿಜೆಪಿ ರಾಜ್ಯ ವಕ್ತಾರೆ ಸುಲೋಚನಾ ಜಿ.ಕೆ. ಭಟ್‌ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಭಾಗವಹಿಸಲಿದ್ದಾರೆ ಎಂದರು.

ದಮನಕಾರಿ ನೀತಿ
ಜಿಲ್ಲೆಯಲ್ಲಿ ಇಬ್ಬರು ಸಚಿವರಿದ್ದರೂ ತಮ್ಮ ಕ್ಷೇತ್ರದಲ್ಲಿ ಶಾಂತಿ ಕಾಪಾಡಲು ಸಾಧ್ಯವಾಗುತ್ತಿಲ್ಲ. ಶಾಂತವಾಗಿ ನಡೆಯುತ್ತಿದ್ದ ಶರತ್‌ ಶವಯಾತ್ರೆ ಸಂದರ್ಭದಲ್ಲಿ ಕಲ್ಲುತೂರಾಟ ನಡೆಸಿದವರನ್ನು ಬಂಧಿಸದೇ, ಮೆರವಣಿಗೆ ನೇತೃತ್ವ ವಹಿಸಿದ್ದ ಹಿಂದೂ ನಾಯಕರನ್ನೇ ಬಂಧಿಸಲು ಹೊರಟಿರುವುದು ರಾಜ್ಯ ಸರಕಾರದ ದಮನಕಾರಿ ನೀತಿಯನ್ನು ತೋರಿಸುತ್ತದೆ ಎಂದವರು ಆರೋಪಿಸಿದರು.

ಅವಕಾಶ ನೀಡಿದ್ದರೂ…
ಪ್ರತಿಭಟನೆಗೆ ಅವಕಾಶ ನೀಡದಿದ್ದರೆ ನಿಮ್ಮ ಮುಂದಿನ ನಡೆ ಏನು ಎಂಬ ಸುದ್ದಿಗಾರರ ಪ್ರಶ್ನೆಗೆ,
ಇದು ಹಿಂದೂ ಕಾರ್ಯಕರ್ತರ ಅಳವು-ಉಳಿವಿನ ಪ್ರಶ್ನೆ. ಪ್ರತಿಭಟನೆ ಜಿಲ್ಲಾಧಿಕಾರಿ ಕಚೇರಿ ಬಳಿ ಅಥವಾ ನೆಹರೂ ಮೈದಾನದಲ್ಲಿ ನಡೆಯಲಿದೆ. ಒಂದು ವೇಳೆ ಅವಕಾಶ ನೀಡದಿದ್ದರೂ ಪ್ರತಿಭಟನೆ ನಡೆಸಿಯೇ ಸಿದ್ಧ ಎಂದರು.
ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಪ್ರಭಾ ಮಾಲಿನಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಪೂಜಾ ಪೈ ಉಪಸ್ಥಿತರಿದ್ದರು.

ವಿವಿಧ ಸಂಘಟನೆಗಳ ಬೆಂಬಲ
ಜು. 13ರಂದು ಮಂಗಳೂರು ಮತ್ತು ಉಡುಪಿ ಯಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ವಿಶ್ವ ಹಿಂದೂ ಪರಿಷತ್‌, ಬಜರಂಗದಳ, ಮಾತೃಮಂಡಳಿ, ದುರ್ಗಾವಾಹಿನಿ ಸಂಘಟನೆಗಳು ಸಂಪೂರ್ಣ ಬೆಂಬಲ ನೀಡುವುದಾಗಿ ಆಯಾ ಸಂಘಟನೆಗಳ ಪ್ರಮುಖರು ತಿಳಿಸಿದ್ದಾರೆ.

ಹಿಂದೂಗಳ ಬಂಧನ ಪ್ರಯತ್ನ 
ವಿರುದ್ಧ ಪ್ರತಿಭಟನೆ

ಜಿಲ್ಲೆಯಲ್ಲಿ ಹಲವು ಪ್ರಕರಣಗಳು ಪೂರ್ಣ ವಿರಾಮ ಕಾಣದೆ ಬಾಕಿಯಾಗಿದ್ದರೂ ಕಾರಣಕರ್ತರನ್ನು ಬಂಧಿಸದೆ ಬಿಜೆಪಿ ಮುಖಂಡರನ್ನು, ಡಾ| ಕಲ್ಲಡ್ಕ ಪ್ರಭಾಕರ್‌ ಭಟ್‌ ಅವರನ್ನು ಬಂಧಿಸಲು ಪ್ರಯತ್ನಿಸಲಾಗುತ್ತಿದೆ. ಶರತ್‌ ಕೊಲೆಯಾಗಿ ಇಷ್ಟು ದಿನಗಳಾಗಿದ್ದರೂ ಆರೋಪಿ ಗಳ ಬಂಧನವಾಗಿಲ್ಲ. ಈ ಎಲ್ಲ ಪ್ರಕರಣಗಳನ್ನು ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವ ದಲ್ಲಿ ಪ್ರತಿಭಟನೆ ನಡೆಯಲಿದೆ. ಪ್ರತಿಭಟನೆಗೆ ಸ್ಥಳ ನಿಗದಿಯಾಗಬೇಕಷ್ಟೇ.
– ನಳಿನ್‌ಕುಮಾರ್‌ ಕಟೀಲು, ಸಂಸದ
 

ಟಾಪ್ ನ್ಯೂಸ್

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ  ಸೇವೆ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

4-mng-2

Mangaluru: ಹೆಲಿಕಾಪ್ಟರ್ ಸಂಚಾರ: ಸ್ಥಳ ಬದಲಾವಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

6

Bantwal: ತುಂಬೆ ಜಂಕ್ಷನ್‌; ಸರಣಿ ಅಪಘಾತ

Untitled-1

Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು

Brahmavar

Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.