Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು
ಬೋಳಂತೂರು ಕ್ರೈಂ - ಫಾಲೋಅಪ್
Team Udayavani, Jan 11, 2025, 12:20 AM IST
ಬಂಟ್ವಾಳ: ತಾಲೂಕಿನ ಬೋಳಂತೂರಿನ ನಾರ್ಶದ ಉದ್ಯ ಮಿಯ ಮನೆಗೆ ಇಡಿ ಅಧಿಕಾರಿ ಗಳೆಂದು ದಾಳಿ ನಡೆಸಿ 30 ಲಕ್ಷ ರೂ.ಗಳಿಗಿಂತಲೂ ಹೆಚ್ಚಿನ ಹಣವನ್ನು ದೋಚಿದ ಘಟನೆ ನಡೆದು ಒಂದು ವಾರ ಪೂರ್ತಿಗೊಂಡಿದ್ದರೂ ಈತನಕ ಆರೋಪಿಗಳ ಪತ್ತೆಗೆ ಸಂಬಂಧಿಸಿ ಯಾವುದೇ ಮಹತ್ವದ ಸುಳಿವು ಲಭ್ಯವಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿದೆ.
ಈಗಾಗಲೇ ಪೊಲೀಸರು ಕೇರಳದ ವಿವಿಧ ಭಾಗಗಳಲ್ಲಿ ತನಿಖೆ ನಡೆಸಿದ್ದು, ಆರೋಪಿಗಳ ಸುಳಿವಿನ ಕುರಿತು ಯಾವುದೇ ಮಾಹಿತಿ ಹೊರ ಹಾಕಿಲ್ಲ. ಇಡಿ ಅಧಿಕಾರಿಗಳ ಹೆಸರಿನಲ್ಲಿ ದಾಳಿ ನಡೆಸಿ ದರೋಡೆ ಮಾಡಿರು ವುದು ವಿಶೇಷ ಪ್ರಕರಣವಾಗಿದ್ದು, ಹೀಗಾಗಿ ಇಂತಹ ಕೃತ್ಯವನ್ನು ಯಾರುಮಾಡಿರಬಹುದು ಎಂಬ ಕುತೂಹಲವೂ ಜನತೆಯಲ್ಲಿದೆ. ಜತೆಗೆ ಆರೋಪಿಗಳ ಪತ್ತೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಊಹಾಪೋಹದ ಮಾತುಗಳು ಕೂಡ ಕೇಳಿ ಬರುತ್ತಿದ್ದು, ಆದರೆ ಪ್ರಕರಣ ಬೇಧಿಸಿದ ಬಳಿಕವೇ ಅವುಗಳಿಗೆಲ್ಲ ಸ್ಪಷ್ಟ ಉತ್ತರ ಸಿಗಲಿದೆ.
ಬಂಟ್ವಾಳ ಡಿವೈಎಸ್ಪಿಯವರ ನೇತೃತ್ವದ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಪಿಎಸ್ಐಗಳ ತಂಡಗಳು ಪ್ರಕರಣದ ತನಿಖೆಯನ್ನು ತೀವ್ರಗೊ ಳಿಸಿದ್ದು, ವಿವಿಧ ಆಯಾಮಗಳಲ್ಲಿ ಪ್ರಕರಣದ ಸುಳಿವನ್ನು ಕಲೆ ಹಾಕುವ ಕಾರ್ಯ ಮಾಡುತ್ತಿವೆ.
ತನಿಖೆ ಪ್ರಗತಿಯಲ್ಲಿದೆ
ದರೋಡೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಮುಂದುವರಿದಿದ್ದು, ಯಾವುದೇ ಮಹತ್ವದ ಸುಳಿವು ಲಭ್ಯವಾಗಿಲ್ಲ. ಪೊಲೀಸ್ ತಂಡಗಳು ತನಿಖಾ ಕಾರ್ಯದಲ್ಲಿ ತೊಡಗಿದ್ದು, ಆರೋಪಿಗಳ ಕುರಿತು ಮಾಹಿತಿ ಸಿಕ್ಕ ಬಳಿಕ ಪೂರ್ತಿ ವಿವರ ನೀಡುತ್ತೇವೆ.
– ಯತೀಶ್ ಎನ್. ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alankaru ಅಸೌಖ್ಯದಿಂದ ಎರಡು ತಿಂಗಳ ಬಾಣಂತಿ ಸಾವು
National Highway ಕಾಮಗಾರಿ ಪರಿಶೀಲನೆ: ಮಾರ್ಚ್ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ
Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
Uppinangady: ನೇಜಿಕಾರ್ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.