Boliyar ಚೂರಿ ಇರಿತ ಪ್ರಕರಣ: ಇರಿತ: ಮತ್ತೋರ್ವನ ಬಂಧನ
Team Udayavani, Jun 12, 2024, 12:35 AM IST
ಉಳ್ಳಾಲ: ಬೋಳಿಯಾರ್ ಬಿಜೆಪಿ ವಿಜಯೋತ್ಸವದ ಸಂದರ್ಭದಲ್ಲಿ ಚೂರಿ ಇರಿತಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಒಟ್ಟು ಆರು ಆರೋಪಿಗಳನ್ನು ಬಂಧಿಸಿದಂತಾಗಿದೆ.
ಬಿಜೆಪಿ ಕಾರ್ಯಕರ್ತರಾದ ಹರೀಶ್ ಧರ್ಮ ನಗರ ಮತ್ತು ನಂದನ್ಗೆ ಚೂರಿ ಇರಿಯಲಾಗಿತ್ತು. ಈ ಸಂಬಂಧ ಬೋಳಿಯಾರ್ನ ಶಾಕೀರ್(28), ಅಬ್ದುಲ್ ರಜಾಕ್(40), ಅಬೂಬಕ್ಕರ್ ಸಿದ್ದಿಕ್(35), ಸವಾದ್(18) ಹಾಗೂ ಹಫೀಝ್(24) ಬಂಧಿಸಲಾಗಿತ್ತು. ಬಶೀರ್ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು ಒಟ್ಟು ಆರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹರೀಶ್ ಮತ್ತು ನಂದನ್ ಅವರನ್ನು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ಭರತ್ ಶೆಟ್ಟಿ, ಹರೀಶ್ ಪೂಂಜಾ, ರಾಜೇಶ್ ನಾೖಕ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಬೋಳಿಯಾರ್ನಲ್ಲಿ ಮಂಗಳವಾರವೂ ಪೊಲೀಸರ ಭದ್ರತೆ ಮುಂದು ವರಿದಿದ್ದು, ಕೆಎಸ್ಆರ್ಪಿ., ಮಂಗಳೂರು ನಗರ ಮೀಸಲು ಪಡೆ, ಮತ್ತು ಕೊಣಾಜೆ, ಉಳ್ಳಾಲ ಪೊಲೀಸರು ಬಂದೋಬಸ್ತ್ನಲ್ಲಿ ನಿರತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ranking: ಐಸಿಸಿ ನೂತನ ರ್ಯಾಂಕಿಂಗ್ ಪ್ರಕಟ: ಶಾಹೀನ್ ಅಫ್ರಿದಿ ಮತ್ತೆ ನಂ.1
Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.