ಪೊಳಲಿ: ಇಂದು ಬ್ರಹ್ಮಕಲಶಾಭಿಷೇಕ
Team Udayavani, Mar 13, 2019, 1:00 AM IST
ಪೊಳಲಿ: ಕರಾವಳಿಯ ಪ್ರಮುಖ ಶಕ್ತಿ ಪೀಠಗಳಲ್ಲಿ ಒಂದಾಗಿರುವ ಪೊಳಲಿ ಶ್ರೀ ರಾಜ ರಾಜೇಶ್ವರೀ ದೇವಸ್ಥಾನದಲ್ಲಿ ಮಾ. 13ರಂದು ಬೆಳಗ್ಗೆ 7.40ರಿಂದ ಬ್ರಹ್ಮಕಲಶಾಭಿಷೇಕ ನಡೆಯಲಿದೆ. 2 ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.
ದೇವಸ್ಥಾನದ ಒಳಗೆ ಬ್ರಹ್ಮಕಲಶೋತ್ಸವದ ವೈದಿಕ ವಿಧಿ ವಿಧಾನಗಳು ನಡೆಯುವುದರಿಂದ ಬೆಳಗ್ಗೆ 10 ಗಂಟೆಯ ವರೆಗೆ ಭಕ್ತರಿಗೆ ದೇಗುಲ ಪ್ರವೇಶಾವಕಾಶ ಇರುವುದಿಲ್ಲ. ಸಂಜೆ 5.30ರಿಂದ 8.30ರ ತನಕವೂ ಭಕ್ತರ ದೇಗುಲ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ.
ಭಾಗವಹಿಸಿದ ಭಕ್ತರೆಲ್ಲರೂ ದೇಗುಲದೊಳಗಿನ ಧಾರ್ಮಿಕ ವಿಧಿಗಳನ್ನು ವೀಕ್ಷಿಸಲು ಅನುಕೂಲವಾಗು ವಂತೆ ಅಲ್ಲಲ್ಲಿ 10ಕ್ಕೂ ಅಧಿಕ ಎಲ್‌ಇಡಿ ಪರದೆಗಳನ್ನು ಅಳವಡಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
ಕಾರ್ಯಕ್ರಮಗಳು
ಮಾ. 13ರಂದು ಮುಂಜಾನೆ 4ರಿಂದಲೇ ವೈದಿಕ ಕಾರ್ಯಕ್ರಮಗಳು ಆರಂಭವಾಗುತ್ತವೆ. ಬಳಿಕ ಬೆಳಗ್ಗೆ 7.40ರಿಂದ 8.10ರ ಮೀನ ಲಗ್ನ ಸುಮುಹೂರ್ತದಲ್ಲಿ ಬ್ರಹ್ಮಕಲಶಾಭಿಷೇಕ. 11.30ಕ್ಕೆ ಮಹಾಪೂಜೆ, ಮಧ್ಯಾಹ್ನ 12 ಗಂಟೆಗೆ ಪಲ್ಲಪೂಜೆ, ಬ್ರಾಹ್ಮಣ ಸುವಾಸಿನಿ ಆರಾಧನೆ ನಡೆಯಲಿದೆ. ಬ್ರಹ್ಮಕಲಶೋತ್ಸವದ ಪವಿತ್ರ ಅನ್ನಪ್ರಸಾದ ವಿತರಣೆ ಮಧ್ಯಾಹ್ನ 12.30ರಿಂದ ಆರಂಭವಾಗುತ್ತದೆ.
ಕ್ಷೇತ್ರದ ತಂತ್ರಿಗಳಾದ ವೇ|ಮೂ| ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ಪೊಳಲಿ ರಾಜರಾಜೇಶ್ವರೀ ದೇವಿಗೆ 501 ಕಲಶಾಭಿಷೇಕ, ದುರ್ಗಾಪರಮೇಶ್ವರೀ ದೇವಿಗೆ 501 ಕಲಶಾಭಿಷೇಕ ಹಾಗೂ ಪರಿವಾರ ದೇವರುಗಳಿಗೆ 108 ಕಲಶಗಳ ಅಭಿಷೇಕ ನಡೆಯಲಿದೆ. ಭಕ್ತರಿಗೆ ನಿರಂತರ ಊಟೋಪಚಾರದ ವ್ಯವಸ್ಥೆ ಇದೆ. ಬ್ರಹ್ಮಕಲಶಾಭಿಷೇಕದ ಹಿನ್ನೆಲೆಯಲ್ಲಿ ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ಉಚಿತ ಬಸ್ಸಿನ ವ್ಯವಸ್ಥೆ ಯನ್ನೂ ಕಲ್ಪಿಸಲಾಗಿದೆ.
ಅರ್ಧ ಶತಮಾನದ ಬಳಿಕ ಮಗೃಂತಾಯಿ ನೇಮ
ರಾತ್ರಿ ಶ್ರೀ ಕೊಡಮಣಿತ್ತಾಯ ಮತ್ತು ಅರ್ಕುಳ ಶ್ರೀ ಉಳ್ಳಾಕ್ಲು ದೈವಗಳ ನೇಮ ನಡೆಯಲಿದೆ. ಜತೆಗೆ ಅರ್ಧ ಶತಮಾನಕ್ಕೂ ಅಧಿಕ ಕಾಲದ ಬಳಿಕ ಇದೇ ಮೊದಲ ಬಾರಿಗೆ ನಡೆಯುವ ಮಗೃಂತಾಯಿ ದೈವದ ನೇಮವನ್ನು ಕಣ್ತುಂಬಿಕೊಳ್ಳಲು ಭಕ್ತರು ಕಾತರರಾಗಿದ್ದಾರೆ. ದಿನವಿಡೀ ಎರಡು ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಸುಮಾರು 5 ಸಾವಿರಕ್ಕೂ ಅಧಿಕ ಸ್ವಯಂಸೇವಕರು ಬ್ರಹ್ಮಕಲಶಾಭಿಷೇಕದ ಯಶಸ್ಸಿಗೆ ದುಡಿಯಲಿದ್ದು, ಎಷ್ಟೇ ಭಕ್ತರು ಆಗಮಿಸಿದರೂ ಅವರಿಗೆ ವ್ಯವಸ್ಥೆಗಳನ್ನು ಕಲ್ಪಿಸಲು ಕ್ಷೇತ್ರ ಸರ್ವಸನ್ನದ್ಧವಾಗಿದೆ ಎಂದು ಸಮಿತಿಯವರು ತಿಳಿಸಿದ್ದಾರೆ.
ವಾಹನ ಪಾರ್ಕಿಂಗ್ ವ್ಯವಸ್ಥೆಯನ್ನೂ ಅಚ್ಚಕಟ್ಟು ಗೊಳಿಸಲಾಗಿದ್ದು, 22 ಎಕರೆಗೂ ಅಧಿಕ ವಿಸ್ತೀರ್ಣದಲ್ಲಿ ವಾಹನ ನಿಲುಗಡೆಗೆ ಅವಕಾಶವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.