ಬ್ರಹ್ಮಕುಂಭಾಭಿಷೇಕ; ಭಕ್ತ ಜನ ಸಾಗರ
Team Udayavani, Mar 24, 2018, 10:00 AM IST
ಮೂಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ದೇಗುಲ 2006ರಲ್ಲಿ ಪುನರ್ ನಿರ್ಮಿತವಾಗಿದ್ದು, ಅಲ್ಲಿ ಹನ್ನೆರಡು ವರ್ಷಗಳಿಗೊಮ್ಮೆ ನಡೆಯಬೇಕಾಗಿರುವ ಅಷ್ಟಬಂಧ ಪುನಃ ನಿರ್ಮಾಣ ಹಾಗೂ ದೇವರಿಗೆ ಬ್ರಹ್ಮಕುಂಭಾಭಿಷೇಕ ಶುಕ್ರವಾರ ಮುಂಜಾನೆ 5.45ರ ಕುಂಬಲಗ್ನದ ಸುಮುಹೂರ್ತದಲ್ಲಿ ವಿಜೃಂಭಣೆಯಿಂದ ಜರಗಿತು.
ಮಧ್ಯಾಹ್ನ ಬ್ರಹ್ಮಕಲಶದ ಸಲುವಾಗಿ ನಡೆದ ವಿವಿಧ ಧಾರ್ಮಿಕ ಕಾರ್ಯಕ್ರಮ, ವಿಶೇಷ ಹಗಲು ರಥೋತ್ಸವ ಹಾಗೂ ಪಲ್ಲಪೂಜೆಯ ಅನಂತರ ಸುಮಾರು 60 ಸಾವಿರಕ್ಕೂ ಮಿಕ್ಕಿದ ಭಕ್ತರು ಅನ್ನ ಪ್ರಸಾದ ಸ್ವೀಕರಿಸಿದರು. ಮುಂಜಾನೆ 3 ಗಂಟೆಯಿಂದಲೇ ಶ್ರೀ ದೇವಿಗೆ ಸಹಸ್ರಾರು ಕಲಶಗಳ ಅಭಿಷೇಕ ಆರಂಭಗೊಂಡು ಮುಂಜಾನೆ 5.45ರ ಸುಲಗ್ನದಲ್ಲಿ ಮಹಾ ಕುಂಭಾಭಿಷೇಕವನ್ನು ದೇಗುಲದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ ನೆರವೇರಿಸಿದರು.
ಕ್ಷೇತ್ರದಲ್ಲಿ ಉಡುಪಿ ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ಶ್ರೀಪಾದರು ಹಾಗೂ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ಶ್ರೀಪಾದರು ದೇವಸ್ಥಾನದಲ್ಲಿ ಉಪಸ್ಥಿತರಿದ್ದು, ವಿಶೇಷ ಪ್ರಾರ್ಥನೆ ಸಲ್ಲಿಸಿ ಭಕ್ತರನ್ನು ಹರಸಿದರು.
ದೇವಸ್ಥಾನದ ವಠಾರ ಎಲ್ಲೆಡೆ ವಾಹನ ನಿಲುಗಡೆಯನ್ನು ಸಂಯೋಜಕರು ನಿಷೇಧಿಸಲಾಗಿದ್ದು, ಅಲ್ಲಿ ಭಕ್ತ ಜನ ಸಾಗರವೇ ಸೇರಿತ್ತು. ಸಂಜೆ ಬ್ರಹ್ಮಕಲಶ ಸಲುವಾಗಿ ನಡೆದ ಶಯನೋತ್ಸವ ಕಾರ್ಯಕ್ರಮದಲ್ಲಿ ಲಕ್ಷಾಂತರ ಚೆಂಡು ಮಲ್ಲಿಗೆ ಹೂಗಳನ್ನು ಮಾಗಣೆಯ ಭಕ್ತರಲ್ಲದೆ ಇತರ ವ್ಯಾಪ್ತಿಯಿಂದ ಆಗಮಿಸಿದ ಭಕ್ತರು ಕೂಡ ಅರ್ಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.