ಲಂಚ ಸ್ವೀಕಾರ:ಮಂಗಳೂರು ಜೈಲರ್ಗೆ ಶಿಕ್ಷೆ
Team Udayavani, Feb 9, 2018, 11:45 AM IST
ಮಂಗಳೂರು: ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ 2011ರಲ್ಲಿ ಅಸೌಖ್ಯದಿಂದಿದ್ದ ಕೈದಿಯನ್ನು ಆಸ್ಪತ್ರೆಗೆ ದಾಖಲಿಸಲು ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಜೈಲರ್ (ಈಗ ನಿವೃತ್ತ) ಕೆ.ಬಿ. ತಿಪ್ಪಾ ನಾಯ್ಕ ಅವರಿಗೆ ಮಂಗಳೂರು ಲೋಕಾಯುಕ್ತ ನ್ಯಾಯಾಲಯವು 1 ವರ್ಷ ಸಾದಾ ಸಜೆ ಹಾಗೂ 3 ಸಾವಿರ ರೂ. ದಂಡ ವಿಧಿಸಿದೆ.
2011 ಜ.3ರಂದು ಅಸ್ವಸ್ಥ ವಿಚಾರಣಾಧೀನ ಕೈದಿಯನ್ನು ಆಸ್ಪತ್ರೆಗೆ ದಾಖಲಿಸಲು ಕಾರಾಗೃಹದ ಪ್ರಭಾರ ಉಪ ಅಧೀಕ್ಷಕರಾಗಿದ್ದ ಕೆ.ಬಿ. ತಿಪ್ಪಾ ನಾಯ್ಕ ಅವರು ಪ್ರಮೋದ್ ಆಳ್ವ ಅವರಿಂದ 1,000 ರೂ. ಲಂಚಕ್ಕೆ ಬೇಡಿಕೆ ಮಂಡಿಸಿದ್ದರು ಎಂದು ಆರೋಪಿಸಲಾಗಿತ್ತು. ಲೋಕಾಯುಕ್ತ ಪೊಲೀಸರು ಆರೋಪಿಯನ್ನು ತಮ್ಮ ಬಲೆಗೆ ಕೆಡಹಲು ವ್ಯೂಹ ರಚಿಸಿದ್ದರು. ಅದರ ಪ್ರಕಾರ ಆಗಿನ ಲೋಕಾಯುಕ್ತ ಇನ್ಸ್ಪೆಕ್ಟರ್ ದಿಲೀಪ್ ಕುಮಾರ್ ನೇತೃತ್ವದಲ್ಲಿ ಲಂಚ ಸ್ವೀಕರಿಸುತ್ತಿದ್ದಾಗಲೇ ಬಂಧಿಸಲಾಗಿತ್ತು.
ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಮಂಗಳೂರಿನ 3ನೇ ಜಿಲ್ಲಾ ಮತ್ತು ಸೆಷನ್ಸ್ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ. ಮುರಳೀಧರ ಪೈ ಗುರುವಾರ ಶಿಕ್ಷೆ ವಿಧಿಸಿದರು. ಲೋಕಾಯುಕ್ತ ಪರವಾಗಿ ವಿಶೇಷ ಅಭಿಯೋಜಕ ಕೆ.ಎಸ್.ಎನ್. ರಾಜೇಶ್ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.