ಕಾಡಬೆಟ್ಟು: ಸಂಪರ್ಕ ಸೇತುವೆಗೆ ಆಗ್ರಹ
Team Udayavani, Jul 9, 2018, 2:25 AM IST
ಪುಂಜಾಲಕಟ್ಟೆ: ಕಾವಳಪಡೂರು ಗ್ರಾ.ಪಂ. ವ್ಯಾಪ್ತಿಯ ಕಾಡಬೆಟ್ಟು ಗ್ರಾಮದ ಮಾರಿಬೆಟ್ಟು- ಜಾರಬೆಟ್ಟು ತೋಡಿನ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಈ ಸೇತುವೆಯು ಕಾಡಬೆಟ್ಟು ಗ್ರಾಮದ ಪಾದಚಾರಿಗಳಿಗೆ ತನ್ನ ದೈನಂದಿನ ವ್ಯವಹಾರಕ್ಕಾಗಿ ವಗ್ಗ ಪೇಟೆಗೆ ಹೋಗಲು ಮತ್ತು ಮಕ್ಕಳಿಗೆ ಶಾಲೆಗೆ ಹೋಗಲು ಅತೀ ಹತ್ತಿರದ ಸಂಪರ್ಕ ಸೇತುವೆಯಾಗಿದೆ. ಇಲ್ಲಿ ಈ ಹಿಂದೆ ಸ್ಥಳೀಯರಾದ ಜಾರಬೆಟ್ಟು ನಾರಾಯಣ ಮೂಲ್ಯಅವರು ವೈಯಕ್ತಿಕ ನೆಲೆಯಲ್ಲಿ ಗ್ರಾಮಸ್ಥರ ಆವಶ್ಯಕತೆ ಮನಗಂಡು ಮರದ ಸೇತುವೆ ನಿರ್ಮಿಸಿ ಅದರ ನಿರ್ವಹಣೆಯನ್ನೂ ನಡೆಸುತ್ತಿದ್ದರು. ಆದರೆ ಈ ಬಾರಿಯ ಪ್ರಥಮ ಮಳೆಗೆ ಈ ಮರದ ಸೇತುವೆ ಕೊಚ್ಚಿಕೊಂಡು ಹೋಗಿದ್ದು, ಜನರು ಸುತ್ತು ಬಳಸಿ ಹೋಗುವಂತಾಗಿತ್ತು.ಸ್ಥಳೀಯ ನಾಗರಿಕರು ಪಡುವ ಕಷ್ಟವನ್ನರಿತ ಸ್ಥಳೀಯ ಮನೆಯವರು ಹೊಸತಾಗಿ ಬಿದಿರಿನ ತಾತ್ಕಾಲಿಕ ಸೇತುವೆಯನ್ನು ನಿರ್ಮಿಸಿದ್ದರು. ಆದರೆ ಈ ಸೇತುವೆಯೂ ನೀರಿನ ರಭಸಕ್ಕೆ ಪುನಃ ಕೊಚ್ಚಿಕೊಂಡು ಹೋಗುವ ಭೀತಿಯಲ್ಲಿದೆ.
ಈ ಹಿಂದೆ ಇಲ್ಲಿಗೆ ಕಿಂಡಿ ಅಣೆಕಟ್ಟು ನಿರ್ಮಿಸುವ ವ್ಯವಸ್ಥೆಯಾಗಿತ್ತು. ಆದರೆ ರಾಜಕೀಯ ಮೇಲಾಟದಿಂದ ಅದು ಬೇರೆಡೆ ಸ್ಥಳಾಂತರಗೊಂಡಿದ್ದು, ಇಲ್ಲಿನ ಪರಿಸರದವರ ಬೇಡಿಕೆಯು ಕನಸಾಗಿ ಉಳಿದಿದೆ. ಆದುದರಿಂದ ಶೀಘ್ರ ಇಲ್ಲಿ ಕಾಂಕ್ರೀಟ್ ಸೇತುವೆ ನಿರ್ಮಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.