“ಬುಡಾ’ ಅಧ್ಯಕ್ಷರಾಗಿ ಸದಾಶಿವ ಬಂಗೇರ ಅಧಿಕಾರ ಸ್ವೀಕಾರ
Team Udayavani, Mar 28, 2017, 12:00 PM IST
ಬಂಟ್ವಾಳ: ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ) ನೂತನ ಅಧ್ಯಕ್ಷರಾಗಿ ಪುರಸಭಾ ಸದಸ್ಯ ಸದಾಶಿವ ಬಂಗೇರ ಮಾ. 27ರಂದು ಪುರಸಭೆಯ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಅಧಿಕಾರ ಸ್ವೀಕಾರ ನಡೆಸಿದರು.
ಪುರಸಭಾ ಅಧ್ಯಕ್ಷ ಪಿ. ರಾಮಕೃಷ್ಣ ಆಳ್ವ ಪದಗ್ರಹಣ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ನೂತನ ಬುಡಾ ಅಧ್ಯಕ್ಷರು ಮಾತನಾಡಿ ಬಂಟ್ವಾಳವನ್ನು ಸುಂದರ ನಗರವಾಗಿ ರೂಪುಗೊಳಿಸುವ ಕೆಲಸ ಮಾಡಲಾಗುವುದು. ನಗರದ ಸಮಸ್ಯೆಗಳನ್ನು ನೀಗಿಸುವಲ್ಲಿ ಪ್ರಯತ್ನ ಪಡುವುದಲ್ಲದೆ ಅವಶ್ಯ ಯೋಜನೆಗಳನ್ನು ಅನುಷ್ಠಾನಿಸುವುದಾಗಿ ತಿಳಿಸಿದರು. ಸರಕಾರದ ಕಾನೂನಿನ ಮಿತಿಯಲ್ಲಿ ಪ್ರಾಮಾಣಿಕ ಕೆಲಸ ಮಾಡುವ ಮೂಲಕ ಜನರ ಅಪೇಕ್ಷೆಗಳಿಗೆ ಸ್ಪಂದಿಸುವುದಾಗಿ ತಿಳಿಸಿದರು.
ಪದಗ್ರಹಣ ಸಂದರ್ಭ ಉಪಸ್ಥಿತರಿದ್ದ ಜಿಲ್ಲಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಕೋಡಿಜಾಲ್ ಇಬ್ರಾಹಿಂ ಮಾತನಾಡಿ ಜನರಿಗೆ ಕುಡಿಯುವ ನೀರು, ನಗರದ ಸೌಂದರ್ಯ ಹೆಚ್ಚಿಸುವ ಯೋಜನೆಗಳು ಅನುಷ್ಠಾನಕ್ಕೆ ಬರಬೇಕು. ಪ್ರಸ್ತುತ ಸ್ಥಿತಿಯಲ್ಲಿ ಜನರಿಗೆ ನೀಡಬೇಕಾದ ಸೇವೆಯಲ್ಲಿ ಇನ್ನಷ್ಟು ಹೆಚ್ಚಿನ ಮುತುವರ್ಜಿ ವಹಿಸುವಂತೆ ಸೂಚನೆ ನೀಡಿದರು.
ಸಭೆಯನ್ನು ಉದ್ದೇಶಿಸಿ ನಿಕಟಪೂರ್ವ ಬುಡಾ ಅಧ್ಯಕ್ಷ ಪಿಯೂಸ್ ಎಲ್. ರೊಡ್ರಿಗಸ್ ಮಾತನಾಡಿ ಸಾಮಾಜಿಕ ಸೇವೆ ಸಲ್ಲಿಸಲು ಇದೊಂದು ಉತ್ತಮ ಅವಕಾಶವಾಗಿದ್ದು ಅದನ್ನು ಸದುಪಯೋಗ ಪಡಿಸಿ ಕೆಲಸ ಮಾಡಿದರೆ ಜನಸಾಮಾನ್ಯರಿಂದ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ , ತಾ.ಪಂ. ಉಪಾಧ್ಯಕ್ಷ ಅಬ್ಟಾಸ್ ಅಲಿ ಶುಭ ಹಾರೈಸಿದರು. ಸಭೆಯಲ್ಲಿ ಪ್ರಮುಖರಾದ ಜಿ.ಪಂ.ಸದಸ್ಯ ಬಿ. ಪದ್ಮಶೇಖರ ಜೈನ್, ಶಾಹುಲ್ ಹಮೀದ್, ಮಂಜುಳ ಮಾವೆ, ಎಂ.ಎಸ್.ಮಹಮ್ಮದ್, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಪರಮೇಶ್ವರ ಎಂ. , ವೆಂಕಪ್ಪ ಪೂಜಾರಿ, ಕೆ. ಹರಿಕೃಷ್ಣ ಬಂಟ್ವಾಳ್, ಪ್ರೊ| ತುಕರಾಂ ಪೂಜಾರಿ, ಚಂದ್ರಶೇಖರ ಪೂಜಾರಿ ಕೋರ್ಯ, ಪದ್ಮನಾಭ ನರಿಂಗಾನ, ಯನ್. ಪ್ರಕಾಶ್ ಕಾರಂತ , ಯೂಸುಫ್ ಕರಂದಾಡಿ ಸಹಿತ ಇತರ ಪ್ರಮುಖರು ಪಾಲ್ಗೊಂಡಿದ್ದರು.ಪ್ರತಿಪಕ್ಷ ಬಿಜೆಪಿ ಸದಸ್ಯರಾದ ಎ. ಗೋವಿಂದ ಪ್ರಭು, ದೇವದಾಸ ಶೆಟ್ಟಿ, ಬಾಸ್ಕರ ಟೈಲರ್, ಸುಗುಣ ಕಿಣಿ, ಜಿ.ಪಂ.ಸದಸ್ಯ ರವೀಂದ್ರ ಕಂಬಳಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಿ.ಆನಂದ ನೂತನ ಅಧ್ಯಕ್ಷರಿಗೆ ಶುಭ ಹಾರೈಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.