ಕಂಬಳದ ಮಹತ್ವಕ್ಕೆ ಮಾನ್ಯತೆ ನೀಡಿರಿ : ಚಂದ್ರಶೇಖರ ನಾನಿಲ್

Team Udayavani, Dec 28, 2019, 5:28 PM IST

mulki

ಹಳೆಯಂಗಡಿ: ಸಂಪ್ರದಾಯಿಕವಾಗಿ ನಡೆಯುತ್ತಿರುವ ಮೂಲ್ಕಿ ಸೀಮೆ ಅರಸು ಕಂಬಳಕ್ಕೆ ಸಮಸ್ತ ಜನರು ಮಾನ್ಯತೆ ನೀಡಿದಲ್ಲಿ ಮಾತ್ರ ಕೃಷಿ ಬದುಕಿನ ಕೊಂಡಿಯಾಗಿರುವ ಕಂಬಳವನ್ನು ಉಳಿಸಬಹುದು ಎಂದು ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ ನಾನಿಲ್ ಹೇಳಿದರು.

ಅವರು ಮೂಲ್ಕಿ ಸೀಮೆಯ ಅರಸು ಕಂಬಳ ಸಮಿತಿಯ ಸಂಯೋಜನೆಯಲ್ಲಿ ಶನಿವಾರ ನಡೆದ ಮೂಲ್ಕಿ ಸೀಮೆ ಅರಸು ಕಂಬಳದ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಮೂಲ್ಕಿ ಸೀಮೆ ಆರಸರಾದ ಎಂ.ದುಗ್ಗಣ್ಣ ಸಾವಂತರು ಬೆಳಿಗ್ಗೆ ಧರ್ಮಚಾವಡಿಯಲ್ಲಿ ಸಮಿತಿಗೆ ಕಂಬಳ ನಡೆಸಲು ಸೂಚನೆ ನೀಡಿದ ನಂತರ ಕಂಬಳದ ಪ್ರಕ್ರಿಯೆ ನಡೆಯಿತು.

ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ದೇವಳದ ಆಡಳಿತ ಮೊಕ್ತೇಸರ ಎಂ. ಶಶೀಂದ್ರಕುಮಾರ್ ಅವರು ಉದ್ಘಾಟಿಸಿದರು.

ಪಕ್ಷಿಕೆರೆ ಸೈ.ಜೂಡ್ ಚಚರ್್ನ ಮೆಲ್ಪಿನ್ ನೊರೊನ್ಹಾ, ಹಳೆಯಂಗಡಿಯ ಉದ್ಯಮಿ ಬಿ. ಸೂರ್ಯಕುಮಾರ್, ಉಳೆಪಾಡಿ ಶ್ರೀ ದುಗರ್ಾಪರಮೇಶ್ವರೀ ದೇವಸ್ಥಾನದ ಮೋಹನ್ದಾಸ ಸುರತ್ಕಲ್, ಎಂ.ಗೌತಮ್ ಜೈನ್, ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಪಿ.ಆರ್.ಶೆಟ್ಟಿ, ಬಳ್ಕುಂಜೆಗುತ್ತು ನಾರಾಯಣ ಮಾಣಿ, ಸಮಿತಿಯ ಪಂಜದ ಗುತ್ತು ಶಾಂತಾರಾಮ ಶೆಟ್ಟಿ, ಎಂ.ಎಚ್.ಅರವಿಂದ ಪೂಂಜಾ ಕಾರ್ನಾಡು, ಕೊಲ್ನಾಡು ಉತ್ರುಂಜೆ ಭುಜಂಗ ಎಂ. ಶೆಟ್ಟಿ, ಶಶೀಂದ್ರ ಮುದ್ದು ಸಾಲ್ಯಾನ್, ಚಂದ್ರಶೇಖರ್ ಜಿ., ವಿನೋದ್ ಎಸ್. ಸಾಲ್ಯಾನ್ ಬೆಳ್ಳಾಯರು, ಅಧ್ಯಕ್ಷ ಕೋಲ್ನಾಡುಗುತ್ತು ರಾಮಚಂದ್ರ ನಾಯ್ಕ್, ನವೀನ್ಕುಮಾರ್ ಶೆಟ್ಟಿ ಎಡ್ಮೆಮಾರ್ ಇದ್ದರು.

100ಕ್ಕೂ ಹೆಚ್ಚು ಜೋಡಿ ಕೋಣಗಳು…
ಸೀಮೆಯ ಅರಸರಾದ ಎಂ.ದುಗ್ಗಣ್ಣ ಸಾವಂತರು ಕಾಂತಾಬಾರೆ ಬೂದಾಬಾರೆಯರ ಧರ್ಮ ಚಾವಡಿಯಲ್ಲಿ ಕಂಬಳವನ್ನು ನಡೆಸಲು ಸಮಿತಿಗೆ ಅನುಮತಿ ನೀಡುವ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು. ನಾಗದೇವರಲ್ಲಿ ಅರಮನೆಯ ಪುರೋಹಿತರಾದ ಅತ್ತೂರು ಬೈಲು ಉಡುಪರು ವಿಶೇಷವಾಗಿ ಪ್ರಾರ್ಥಿಸಿ, ಅರಮನೆಯ ಚಂದ್ರನಾಥ ಸ್ವಾಮಿ ಬಸದಿ, ಪದ್ಮಾವತಿ ಅಮ್ಮನವರ ಬಸದಿಗಳಲ್ಲಿ ವಿಧಿ ವಿಧಾನ ನಡೆಸಿ, ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಪ್ರಾರ್ಥಿಸಿಕೊಂಡು ಬಂದಿರುವ ಕಂಬಳ ಕರೆಯಲ್ಲಿ ಪರಂಪರೆಯಿಂದ ನಡೆದುಕೊಂಡು ಬಂದಿರುವ ಬಪ್ಪನಾಡು ಬಡುಗುಹಿತ್ಲುವಿನ ದಿ.ಕಾಂತು ಪೂಜಾರಿ ಅವರ ಮನೆತನದ ಕಂಬಳದ ಕೋಣಗಳು ಕರೆಯಲ್ಲಿ ಇಳಿಯಲು ಸೂಚನೆ ನೀಡಿ, ಕೋಣಗಳ ಮೈಗೆ ಹಚ್ಚಲು ಅರಮನೆಯಿಂದ ಎಣ್ಣೆಯನ್ನು ನೀಡುವ ಸಂಪ್ರದಾಯ ನಡೆಸಿದರು. ಕಂಬಳದ ಕರೆಯಲ್ಲಿ ಮೂರು ಬಾರಿ ಸಾಂಪ್ರದಾಯಿಕ ಓಟ ನಡೆಸಿದ ಕೋಣಗಳಿಗೆ ವಿಶೇಷ ಪೂಜೆ ನಡೆಸಲಾಯಿತು.

ನಂತರ ಮೂಲ್ಕಿ ಅರಮನೆಯ ಗದ್ದುಗೆಯಲ್ಲಿ ಒಂಭತ್ತು ಮಾಗಣೆಯ ಕಂಬಳದ ರಾಜ ಮರ್ಯಾದೆಯ ಗೌರವವನ್ನು ಪಡೆದುಕೊಂಡು ಕಂಬಳಕ್ಕೆ ಧರ್ಮಚಾವಡಿಯಲ್ಲಿ ಚಾಲನೆ ನೀಡಲು ಸಮಿತಿಗೆ ಅರಸರು ಆದೇಶಿಸಿದರು.
ಎರುಬಂಟ ದೈವಗಳ ಜೊತೆಗೆ ಅರಮನೆಯ ಕೋಣಗಳನ್ನು ಡೋಲು, ತಾಸೆ , ಚಂಡೆಯ ನೀನಾದದೊಂದಿಗೆ ಅರಮನೆಯಿಂದ ಭವ್ಯ ಮೆರವಣಿಗೆಯಲ್ಲಿ ಕಂಬಳದ ಗದ್ದೆಗೆ ತೆರಳಿ ಜೋಡುಕರೆಯಲ್ಲಿ ತೆಂಗಿನಕಾಯಿ, ಹಾಲು ಅಭಿಷೇಕವನ್ನು ನಡೆಸಿ, ಹಿಂಗಾರದೊಂದಿಗೆ ಕಂಬಳದ ಕರೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಅರಮನೆಯ ಗೌರವದ ಸಂಕೇತವಾಗಿ ಅಲ್ಲಿನ ಜೋಡಿ ಕೋಣಗಳು ಕಂಬಳದ ಕರೆಯಲ್ಲಿ ಓಡಿದ ನಂತರ ಸ್ಪರ್ಧೆಗೆ ಆಗಮಿಸಿದ ಪ್ರತಿ ಕಂಬಳದ ಯಜಮಾನರಿಗೆ ಕಂಬಳ ಸಮಿತಿಯಿಂದ ವಿಶೇಷ ಗೌರವ ಸಲ್ಲಿಸಲಾಯಿತು.

ಸುಮಾರು 100ಕ್ಕೂ ಹೆಚ್ಚು ಜೋಡಿ ಕೋಣಗಳು ಕನೆ ಹಲಗೆ, ಹಗ್ಗ ಕಿರಿಯ, ಹಿರಿಯ, ನೇಗಿಲು ಹಿರಿಯ, ಕಿರಿಯ, ಅಡ್ಡ ಹಲಗೆ ವಿಭಾಗದಲ್ಲಿ ಸ್ಪಧರ್ೆಯಲ್ಲಿ ಭಾಗವಹಿಸಿದೆವು. ಒಟ್ಟು 7.5 ಪವನ್ ಚಿನ್ನದ ಪದಕಗಳು ಬಹುಮಾನವಾಗಿ ಸಮಿತಿಯು ವಿಜೇತರಿಗೆ ನೀಡಲಿದೆ.

ಬಪ್ಪನಾಡು ಕಾಂತು ಪೂಜಾರಿ ಮನೆತನದಿಂದ…
ಬಪ್ಪನಾಡು ಬಡಗುಹಿತ್ಲು ಮನೆತನ ದಿ.ಕಾಂತು ಪೂಜಾರಿ ಮನೆತನದ ಕೋಣಗಳಿಗೆ ವಿಶೇಷ ಗೌರವ ಮೂಲ್ಕಿ ಸೀಮೆ ಅರಸು ಕಂಬಳಕ್ಕಿದೆ. ಬಪ್ಪನಾಡು ಶೇಖರ ಕೋಟ್ಯಾನ್ ಮನೆಯಿಂದ ಹೊರಟು, ಧೂಮಾವತಿ ಪಂಜುರ್ಲಿ ದೈವಸ್ಥಾನದಲ್ಲಿ ಪ್ರಾರ್ಥಿಸಿ, ಕಾಂತು ಪೂಜಾರಿಯವರ ಮನೆಯ ದೈವಗಳಲ್ಲಿ ಅಪ್ಪಣೆ ಕೇಳಿಕೊಂಡು, ಗ್ರಾಮದ ಕೋರ್ದಬ್ಬು ಹಾಗೂ ನಾಗದೇವರಲ್ಲಿ ಪ್ರಾರ್ಥಿಸಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಪ್ರಸಾದ ಸ್ವೀಕರಿಸಿಕೊಂಡು ಪಡುಪಣಂಬೂರಿನ ಪೂವಪ್ಪ ಪೂಜಾರಿಯವರ ಮನೆಯಲ್ಲಿ ಆಶ್ರಯ ಪಡೆದುಕೊಂಡು ಮೂಲ್ಕಿ ಸೀಮೆಯ ಅರಮನೆಗೆ ಬಂದು ಅಲ್ಲಿಂದ ಅರಸರ ಸೂಚನೆಯಂತೆ ಕಂಬಳದ ಕರೆಯಲ್ಲಿ ಜೋಡಿ ಕೋಣಗಳನ್ನು ಓಡಿಸಿದ ನಂತರವೇ ಉಳಿದ ಕೋಣಗಳು ಕರೆಗೆ ಇಳಿಯುವ ಸಂಪ್ರದಾಯ ನಡೆಯಿತು.

ಟಾಪ್ ನ್ಯೂಸ್

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

2

Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

1(1

Puttur ನಗರಕ್ಕೂ ಬೇಕು ಟ್ರಾಫಿಕ್‌ ಸಿಗ್ನಲ್‌

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.