ಗ್ರಾಮೀಣ ಭಾಗಗಳಲ್ಲಿ ಬಸ್ ಕೊರತೆ
Team Udayavani, Jul 27, 2017, 8:55 AM IST
ಬೆಳ್ತಂಗಡಿ – ಕೊಯ್ಯೂರು ಬಸ್‌ನಲ್ಲಿ ವಿದ್ಯಾರ್ಥಿಗಳ ಅಪಾಯಕಾರಿ ಪ್ರಯಾಣ
ಬೆಳ್ತಂಗಡಿ: ಬೆಳ್ತಂಗಡಿ ಬಸ್ ನಿಲ್ದಾಣದಿಂದ ಕೊಯ್ಯೂರು ಕಡೆ ಹೋಗುವ ಸರಕಾರಿ ಬಸ್ಸಿನಲ್ಲಿ ವಿದ್ಯಾರ್ಥಿಗಳು ನೇತಾಡಿಕೊಂಡು ಹೋಗುತ್ತಿರುವುದು ಸಾಮಾನ್ಯ ಎಂಬಂತಾಗಿದೆ. ಇತರ ಕೆಲವು ಕಡೆಗಳಿಗೆ ತೆರಳುವ ಬಸ್‌ಗಳಲ್ಲಿಯೂ ಇದೇ ಸ್ಥಿತಿ ಕಾಣಲು ಸಿಗುತ್ತಿದೆ.
ಕೊಯ್ಯೂರಿಗೆ ಬಸ್‌ಗಳ ಕೊರತೆ ಇರುವುದರಿಂದ ಇರುವ ಒಂದೇ ಬಸ್ಸಿನಲ್ಲಿ ವಿದ್ಯಾರ್ಥಿಗಳು ಈ ಪರಿ ಹೋಗಬೇಕಾದ ಸ್ಥಿತಿ ಬಂದಿದೆ. ಕೊಯ್ಯೂರು ಕಡೆ ಹೋಗುವ ರಸ್ತೆ ಕೂಡ ಹೊಂಡ ಗುಂಡಿಗಳಿಂದ ಕೂಡಿದೆ. ಈ ರೀತಿ ನೇತಾಡಿಕೊಂಡು ಪ್ರಯಾಣ ಮಾಡುವ ಸಂದರ್ಭ ಉಂಟಾಗಬಹುದಾದ ಅಪಘಾತಕ್ಕೆ ಯಾರು ಹೊಣೆ ಎಂದು ಪ್ರಶ್ನಿಸುವಂತಾಗಿದೆ. ಬಸ್‌ಗಳ ಕೊರತೆ ಇರುವುದರಿಂದ ವಿದ್ಯಾರ್ಥಿಗಳಿಗೆ ಇಂತಹ ಪ್ರಯಾಣ ಅನಿವಾರ್ಯ ಎಂದಾಗಿದೆ.
ಕೊಯ್ಯೂರು ಕಡೆಯಿಂದ ಪ್ರತಿನಿತ್ಯ ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬೆಳ್ತಂಗಡಿ, ಉಜಿರೆ, ಮಡಂತ್ಯಾರು ಮೊದಲಾದೆಡೆ ಶಿಕ್ಷಣ ಸಂಸ್ಥೆಗಳಿಗೆ ತೆರಳುತ್ತಾರೆ. ಬೆಳಗ್ಗೆ ಹಾಗೂ ಸಂಜೆಯ ವೇಳೆ ವಿದ್ಯಾರ್ಥಿಗಳಿಗೆ ಅನುಕೂಲಕರವಾಗುವಂತೆ ಬಸ್‌ಗಳ ವ್ಯವಸ್ಥೆಯನ್ನು ಸಂಬಂಧಪಟ್ಟ ಇಲಾಖೆ ಮಾಡಬೇಕು ಎಂಬುದು ವಿದ್ಯಾರ್ಥಿಗಳ ಮನವಿ. ಕೆಲವೊಂದು ಕಡೆಗಳಿಗೆ ಖಾಸಗಿ ಬಸ್‌ಗಳು ಮಾತ್ರ ಇವೆ. ಸರಕಾರಿ ಬಸ್ಸಿನ ವ್ಯವಸ್ಥೆ ಇಲ್ಲ.
ಇತರ ಕಡೆಗಳಿಗೂ ಕೊರತೆ
ಬಂಗಾಡಿ – ಕೊಲ್ಲಿ, ಕಾಜೂರು- ಡಿಡುಪೆ, ಚಾರ್ಮಾಡಿ, ಅಣಿಯೂರು- ಗಂಡಿಬಾಗಿಲು- ನೆರಿಯ, ಕೊಯ್ಯೂರು- ಬೆ„ಪಾಡಿ- ಬಂದಾರು, ಬೆಳಾಲು, ಸವಣಾಲು, ಕೊಕ್ಕಡ, ಶಿಶಿಲ ಮೊದಲಾದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಬಸ್ಸಿನ ವ್ಯವಸ್ಥೆ ಸರಿಯಾಗಿ ಮಾಡಬೇಕಾಗಿದೆ. ಸಾರ್ವಜನಿಕರು, ವಿದ್ಯಾರ್ಥಿ ಸಂಘಟನೆಯವರು ಸಂಬಂಧಪಟ್ಟ ಇಲಾಖೆಗೆ ಹಲವಾರು ಬಾರಿ ಮನವಿ ಮಾಡಿದರೂ ಗ್ರಾಮೀಣ ಪ್ರದೇಶಕ್ಕೆ ಸರಕಾರಿ ಬಸ್ಸಿನ ಸರಿಯಾದ ವ್ಯವಸ್ಥೆಯಾಗಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಅವಘಡ ಸಂಭವಿಸುವ ಮುನ್ನವೇ ಇಲಾಖೆ ಬೆಳಗ್ಗೆ ಹಾಗೂ ಸಂಜೆ ವೇಳೆ ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಹೆಚ್ಚುವರಿ ಬಸ್‌ನ್ನು ನಿಯೋಜಿಸಲಿ ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.