ಮಂಗಳೂರು: ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸಾರಿಗೆಗೆ ಸಂಸದ ನಳಿನ್ ಕುಮಾರ್ ಚಾಲನೆ
Team Udayavani, Nov 1, 2022, 12:39 PM IST
ಮಂಗಳೂರು: ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸಾರಿಗೆಗೆ ನವೆಂಬರ್ 1 ಕನ್ನಡ ರಾಜ್ಯೋತ್ಸವದಂದು ನಗರದ ಬಿಜೈನಲ್ಲಿರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಕರಾವಳಿ ಕನ್ನಡ ತೇರು ಹೆಸರಿನ ಮೂರು ಬಸ್ ಗಳಿಗೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಚಾಲನೆ ನೀಡಲಾಯಿತು.
ಈ ಬಸ್ ಗಳು ಮಂಗಳೂರು-ಏರ್ಪೋರ್ಟ್, ಏರ್ಪೋರ್ಟ್- ಮಣಿಪಾಲ ಮಾರ್ಗವಾಗಿ ಕಾರ್ಯಚರಿಸಲಿವೆ.
ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಡಾ.ವೈ.ಭರತ್ ಶೆಟ್ಟಿ, ಉಮಾನಾಥ್ ಕೊಟ್ಯಾನ್, ವಿಧಾನ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ್, ಕೆ.ಎಸ್.ಆರ್.ಟಿ.ಸಿ ವಿಭಾಗಿಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಸೇರಿದಂತೆ ಇತರೆ ಜನಪ್ರತಿನಿಧಿಗಳು, ಸಾರಿಗೆ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.