ಬಿ.ವಿ. ಕಾರಂತ ರಂಗಭೂಮಿಕಾ ಟ್ರಸ್ಟ್ : ನಾಟಕ ಸ್ಪರ್ಧೆ ಉದ್ಘಾಟನೆ
Team Udayavani, Dec 25, 2017, 12:14 PM IST
ವಿಟ್ಲ: ಮಂಚಿ-ಕುಕ್ಕಾಜೆ ಬಿ.ವಿ. ಕಾರಂತ ರಂಗಭೂಮಿಕಾ ಟ್ರಸ್ಟ್ ವತಿಯಿಂದ ವಿಟ್ಲ ವಿಟ್ಠಲ ವಿದ್ಯಾ ಸಂಘದ ಸಹಯೋಗದೊಂದಿಗೆ ರಂಗಭೂಮಿಕಾ ಟ್ರಸ್ಟ್‌ನ ದಶಮಾನೋತ್ಸ ವದ ಸಲುವಾಗಿ ವಿಟ್ಠಲ ಪ.ಪೂ. ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ಬಿ.ವಿ. ಕಾರಂತರ ನೆನಪಿನ ಅಂತರ ಕಾಲೇಜು ನಾಟಕ ಸ್ಪರ್ಧೆ ‘ರಂಗಭೂಮಿಕಾ-2017’ ಅನ್ನು ರವಿವಾರ ಉದ್ಘಾಟಿಸಲಾಯಿತು.
ವಿಟ್ಲ ವಿಟ್ಠಲ ವಿದ್ಯಾ ಸಂಘದ ಸಂಚಾಲಕ ಎಲ್.ಎನ್. ಕೂಡೂರು ಕಾರ್ಯಕ್ರಮ ಉದ್ಘಾಟಿಸಿದರು. ರಂಗಭೂಮಿಕಾ ಸಂಚಾಲಕ ಎಂ. ಅನಂತಕೃಷ್ಣ ಹೆಬ್ಟಾರ್ ವಿಟ್ಲ, ಯಶವಂತ ವಿಟ್ಲ, ವಿಟ್ಠಲ ಪ.ಪೂ. ಕಾಲೇಜಿನ ಪ್ರಾಂಶುಪಾಲ ಆದರ್ಶ ಎ.ಎಸ್. ಚೊಕ್ಕಾಡಿ, ಉಪಪ್ರಾಂಶುಪಾಲ ಕಿರಣ್ ಕುಮಾರ್ ಬ್ರಹ್ಮಾವರ ಮತ್ತಿತರರು ಉಪಸ್ಥಿತರಿದ್ದರು. ಟ್ರಸ್ಟ್ ಅಧ್ಯಕ್ಷ ಕಜೆ ರಾಮಚಂದ್ರ ಭಟ್ ಸ್ವಾಗತಿಸಿದರು. ಅರವಿಂದ್ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.
ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ಕುಣಿ ಕುಣಿ ನವಿಲೆ, ಬಂಟ್ವಾಳ ಎಸ್‌ವಿಎಸ್ ಕಾಲೇಜಿನ ತಂಡದಿಂದ
ಕರುಣಾನಿಧಿ, ಮಂಗಳೂರು ಪದುವಾ ಕಾಲೇಜು ತಂಡದಿಂದ ಮದರ್ ಕರೇಜ್ ನಾಟಕಗಳು ಪ್ರದರ್ಶನಗೊಂಡವು. ರಂಗನಟ ಚಂದ್ರಹಾಸ ಉಳ್ಳಾಲ, ರಂಗ ವಿಮರ್ಶಕ ಪ್ರಭಾಕರ ತುಮರಿ, ರಂಗಕರ್ಮಿ ಶೀನಾ ನಾಡೋಳಿ ಅವರು ತೀರ್ಪುಗಾರರಾಗಿ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು
Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.