ಸಿಎಎ, ಎನ್‌ಆರ್‌ಸಿ ಸಂವಿಧಾನದ ವಿರೋಧಿ: ಬಿ.ಎಲ್‌. ಶಂಕರ್‌

Team Udayavani, Feb 7, 2020, 12:21 AM IST

big-36

ಮಂಗಳೂರು: ಜಾತಿ, ಮತ, ಧರ್ಮದ ಮೇಲೆ ಪೌರತ್ವವನ್ನು ನಿರ್ಧರಿಸುವ ಪೌರತ್ವ ತಿದ್ದುಪಡಿ ಕಾಯ್ದೆ 2019 ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಕಾಯ್ದೆಗಳು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿವೆ ಎಂದು ಕಾಂಗ್ರೆಸ್‌ ರಾಜ್ಯ ಉಪಾಧ್ಯಕ್ಷ ಬಿ.ಎಲ್‌. ಶಂಕರ್‌ ಹೇಳಿದರು.

ದ.ಕ. ಜಿಲ್ಲಾ ಕಾಂಗ್ರೆಸ್‌ ವತಿಯಿಂದ ನಗರದಲ್ಲಿ ಗುರುವಾರ ಸಿಎಎ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್‌ ವಿರೋಧಿಸಿ ಆಯೋಜಿಸಿದ್ದ ಜಾಗೃತಿ ಕಾರ್ಯಾಗಾರದಲ್ಲಿ ಮಾತನಾಡಿದರು. ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ ಉಲ್ಲೇಖೀಸಿರುವ 6 ಸಮುದಾಯಗಳಿಗೆ ಪೌರತ್ವ ನೀಡುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ನಿರ್ದಿಷ್ಟವಾಗಿ ಒಂದು ಸಮುದಾಯವನ್ನು ಕೈಬಿಟ್ಟಿರುವುದನ್ನು ವಿರೋಧಿಸುತ್ತೇವೆ. ಅಕ್ರಮವಾಗಿ ದೇಶದೊಳಗೆ ನುಸುಳಿ ವಾಸಿಸುತ್ತಿದ್ದರೆ ಅವರನ್ನು ಹೊರಹಾಕಿ. ಆದರೆ ಈ ದೇಶದಲ್ಲಿ ಬದುಕು ಕಟ್ಟಿಕೊಂಡು ನ್ಯಾಯ ಬದ್ಧವಾಗಿ ವಾಸಿಸುತ್ತಿರುವವರ ಹಕ್ಕನ್ನು ಕಸಿದುಕೊಳ್ಳುವುದಕ್ಕೆ ನಮ್ಮ ವಿರೋಧ ವಿದೆ ಎಂದು ಹೇಳಿದರು.

ದೇಶಕ್ಕಾಗಿ ಹೋರಾಟ
ಪ್ರಿಯದರ್ಶಿನಿ ಯವ ಮಹಿಳಾ ಘಟಕದ ಅಧ್ಯಕ್ಷೆ ಭವ್ಯಾ ನರಸಿಂಹ ಮೂರ್ತಿ ಅವರು ಮಾತನಾಡಿ, ವಿಭಾಜಕ ನೀತಿಯ ಸಿಎಎ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್‌ ವಿರುದ್ಧ ಎಲ್ಲರೂ ಒಗ್ಗಟ್ಟಿನಿಂದ ಹೋರಾಡುವ ಸಮಯ ಬಂದೊದಗಿದೆ. ಈ ಹೋರಾಟ ದೇಶಕೋಸ್ಕರ ನಡೆಯುವ ಹೋರಾಟ ಎಂದರು.

ದೇಶದಲ್ಲಿ ಸರಕಾರದ ವಿರುದ್ಧ ಧ್ವನಿಯೆತ್ತುತ್ತಿರುವರಲ್ಲಿ ಭಯವನ್ನು ಮೂಡಿಸುವ ಕಾರ್ಯ ನಡೆಯುತ್ತಿದೆ. ನಾಗರಿಕರ ಹಕ್ಕನ್ನು ಧಮನಿಸುವ ಕಾರ್ಯ ವ್ಯಾಪಕವಾಗಿ ನಡೆಯುತ್ತಿದೆ. ಯುವಕರನ್ನು ಪ್ರಚೋದಿಸಿ ಹಾದಿ ತಪ್ಪಿಸುವ ಕಾರ್ಯವನ್ನು ಬಿಜೆಪಿ ಮಾಡು ತ್ತಿದೆ ಎಂದು ಆರೋಪಿಸಿದರು.

ಮಾಜಿ ಸಚಿವ ಬಿ. ರಮಾನಾಥ ರೈ, ಮಾಜಿ ಶಾಸಕರಾದ ಜೆ.ಆರ್‌. ಲೋಬೋ, ಶಕುಂತಾಳ ಶೆಟ್ಟಿ, ಮೊದಿನ್‌ ಬಾವಾ, ರಾಜ್ಯಸಭಾ ಮಾಜಿ ಸದಸ್ಯ ಬಿ. ಇಬ್ರಾಹಿಂ, ಕೆಪಿಸಿಸಿ ಕಾರ್ಯದರ್ಶಿ ವಿಷ್ಣುನಾಥನ್‌, ಮುಖಂಡರಾದ ಕೋಡಿಜಾಲ್‌ ಇಬ್ರಾಹಿಂ, ಸುರೇಶ್‌ ಬಲ್ಲಾಳ್‌, ಶಶಿಧರ ಹೆಗ್ಡೆ, ಮಮತಾ ಗಟ್ಟಿ, ಶಾಲೆಟ್‌ ಪಿಂಟೋ, ಎಂ.ಎಸ್‌. ಮಹಮ್ಮದ್‌, ನವೀನ್‌ ಡಿ’ಸೋಜಾ, ವಿಶ್ವಾಸ್‌ದಾಸ್‌, ಸದಾಶಿವ ಉಳ್ಳಾಲ ಉಪಸ್ಥಿತರಿದ್ದರು. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹಾಗೂ ವಿಧಾನ ಪರಿಷತ್‌ಸದಸ್ಯ ಹರೀಶ್‌ ಕುಮಾರ್‌ ಸ್ವಾಗತಿಸಿದರು. ಶಾಹುಲ್‌ ಹಮೀದ್‌ ನಿರೂಪಿಸಿದರು.

ಬಿಜೆಪಿಯಿಂದ ಇನ್ನೊಂದು ಆಧ್ವಾನ
ನರೇಂದ್ರ ಮೋದಿ ಸರಕಾರ ಆರ್‌ಬಿಐ, ಆರ್ಥಿಕ ತಜ್ಞರ ಅಭಿಪ್ರಾಯಗಳನ್ನು ಧಿಕ್ಕರಿಸಿ ದಿಢೀರ್‌ ಆಗಿ ರೂಪಾಯಿ ಅಪನಗದೀಕರಣ ಕ್ರಮವನ್ನು ಜಾರಿಗೆ ತಂದು ದೇಶದ 130 ಕೋಟಿ ಜನರನ್ನು ಸರತಿಸಾಲಿನಲ್ಲಿ ನಿಲ್ಲುವಂತೆ ಮಾಡಿ ಅಧ್ವಾನ ಸೃಷ್ಟಿಸಿತು.ಇದರಲ್ಲಿ ಕಪ್ಪು ಹಣ ಬಯಲಿಗೆ ಬರಲಿಲ್ಲ. ಇದೀಗ ನುಸುಳುಕೋರರಾಗಿ ದೇಶಕ್ಕೆ ಬಂದ ಕೆಲವೇ ಜನರನ್ನು ಹುಡುಕುವುದಕ್ಕೋಸ್ಕರ ದೇಶದಲ್ಲಿರುವ 130 ಕೋಟಿ ಜನರನ್ನು ತೊಂದರೆ ಸಿಲುಕಿಸುವ ಇನ್ನೊಂದು ಆಧ್ವಾನ ಮಾಡಹೊರಟಿದ್ದು ಇನ್ನೊಂದು ವ್ಯರ್ಥ ಕಸರತ್ತು ಆಗಲಿದೆ ಎಂದು ಬಿ.ಎಲ್‌. ಶಂಕರ್‌ ಹೇಳಿದರು.

ಟಾಪ್ ನ್ಯೂಸ್

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-rb

ATP Finals Doubles; ಬೋಪಣ್ಣ ಜೋಡಿಗೆ 6ನೇ ಶ್ರೇಯಾಂಕ

1-weewq

Ranji; ಬಂಗಾಲ ಬಿಗಿ ಹಿಡಿತ : ಇನ್ನಿಂಗ್ಸ್‌ ಜಯದತ್ತ ಮುಂಬಯಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.