ಕೊಟ್ಟಾರಚೌಕಿ; ರಾಜಕಾಲುವೆ ಒತ್ತುವರಿ ತೆರವು ಆರಂಭ


Team Udayavani, Jun 5, 2018, 3:55 AM IST

rajakaluve-4-6.jpg

ಮಂಗಳೂರಿನಲ್ಲಿ ನೆರೆ ನೀರು ನಿಂತು ಆವಾಂತರ ಸೃಷ್ಟಿಯಾದ ಹಿನ್ನೆಲೆಯಲ್ಲಿ ‘ಉದಯವಾಣಿ ಸುದಿನ’ ಮೇ 31ರಿಂದ ‘ನಾವು ಎಡವಿದ್ದು ಎಲ್ಲಿ?’ ಎಂಬ ವಿಷಯದೊಂದಿಗೆ ರಾಜಕಾಲುವೆಯ ರಿಯಾಲಿಟಿ ಚೆಕ್‌ ನಡೆಸುತ್ತಿದ್ದು, ಜೂ. 2ರಂದು ಕೊಟ್ಟಾರ ರಾಜಕಾಲುವೆಯ ಒತ್ತುವರಿ ಹಾಗೂ ಅಡೆತಡೆಗಳ ಬಗ್ಗೆ ಸುದೀರ್ಘ‌ವಾಗಿ ಬೆಳಕು ಚೆಲ್ಲಲಾಗಿತ್ತು.

ಮಹಾನಗರ: ನಗರದಲ್ಲಿ ಕಳೆದ ಮಂಗಳವಾರ ಸುರಿದ ಭಾರೀ ಮಳೆಯಿಂದಾಗಿ ಸೃಷ್ಟಿಯಾದ ಆವಾಂತರದಿಂದ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಈಗ ರಾಜಕಾಲುವೆ ಒತ್ತುವರಿ ಹಾಗೂ ರಾಜಕಾಲುವೆಯಲ್ಲಿ ನೀರು ಹರಿಯಲು ಎದುರಾಗಿರುವ ಕೆಲವು ಅಡೆತಡೆ ಸರಿಪಡಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ಆರಂಭಿಸಿದೆ. ಕೊಟ್ಟಾರಚೌಕಿ ವ್ಯಾಪ್ತಿಯಲ್ಲಿ ಪೊಲೀಸ್‌ ಬಿಗಿ ಭದ್ರತೆಯ ಮೂಲಕ ತೆರವು ಕಾರ್ಯಾಚರಣೆಯನ್ನು ಸೋಮವಾರ ಕೈಗೊಳ್ಳಲಾಯಿತು. ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ಅವರ ಸೂಚನೆ ಮೇರೆಗೆ ಪಾಲಿಕೆ ಆಯುಕ್ತರಾದ ಮೊಹಮ್ಮದ್‌ ನಝೀರ್‌ ಅವರ ನೇತೃತ್ವದಲ್ಲಿ ನಗರದ ಕೊಟ್ಟಾರ ಚೌಕಿ ವ್ಯಾಪ್ತಿಯಲ್ಲಿ ತೆರವು ಕಾರ್ಯಾ ಆರಂಭಿಸಲಾಗಿದೆ. ಜತೆಗೆ ರಾಜ ಕಾಲುವೆಯಲ್ಲಿ ಸರಾಗವಾಗಿ ನೀರು ಹರಿಯಲು ಅನುಕೂಲವಾಗುವಂತೆ ಜೇಸಿಬಿ ಮೂಲಕ ಹೂಳು ತೆಗೆಯಲಾಯಿತು. ಕಾಲುವೆ ಒತ್ತುವರಿ ಮಾಡಿರುವ ಕುರಿತ ಸಂಪೂರ್ಣ ವರದಿ ನೀಡುವಂತೆ, ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಈಗಾಗಲೇ ಮೂಡಾ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು, ಅದರ ವರದಿ ಜಿಲ್ಲಾಧಿಕಾರಿಗೆ ಸಲ್ಲಿಸುವ ಮುನ್ನವೇ ಪಾಲಿಕೆಯಿಂದ ಕಾರ್ಯಾಚರಣೆ ಆರಂಭಿಸಿರುವುದು ಗಮನಾರ್ಹ ಸಂಗತಿ.


ಮುಂದೆ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ವರದಿಯ ಆಧಾರದಲ್ಲಿ ಪಾಲಿಕೆ ಕ್ರಮ ಕೈಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಪಾಲಿಕೆ ಆಯುಕ್ತರಾದ ಮಹಮ್ಮದ್‌ ನಝೀರ್‌ ಅವರು ಸೋಮವಾರ ಬೆಳಗ್ಗೆ ಕೊಟ್ಟಾರ ಚೌಕಿ ವ್ಯಾಪ್ತಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಯಾವೆಲ್ಲ ಭಾಗದಲ್ಲಿ ಒತ್ತುವರಿ ಆಗಿದೆ ಹಾಗೂ ಎಲ್ಲಿ ತೆರವು ಕೈಗೊಳ್ಳಬೇಕು ಎಂಬುದರ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಆ ಬಳಿಕ ಎರಡು ಜೇಸಿಬಿ ಸಹಾಯದಿಂದ ಸುಮಾರು 10ರಷ್ಟು ಕಾರ್ಮಿಕರು ತೆರವು ಕಾರ್ಯಾಚರಣೆಯಲ್ಲಿ ಪಾಲ್ಗೊಂಡರು. ಯಾವುದೇ ಸಮಸ್ಯೆ ಆಗದಂತೆ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಬ್ಯಾರಿಕೇಡ್‌ ಹಾಕಿ ಕಾರ್ಯಾಚರಣೆ
ಕೊಟ್ಟಾರಚೌಕಿ ವ್ಯಾಪ್ತಿಯಲ್ಲಿ ರಾಜ ಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಳ್ಳುವ ಸಂದರ್ಭ ವ್ಯಾಪಕ ಭದ್ರತೆ ಕೈಗೊಳ್ಳಲಾಗಿತ್ತು. ಬೃಹತ್‌ ಗಾತ್ರದ ಜೇಸಿಬಿ ಮೂಲಕ ಮೊದಲಿಗೆ ರಾಜಕಾಲುವೆಯ ಮೇಲಾºಗದಲ್ಲಿ ಹಾಕಲಾಗಿದ್ದ ಸ್ಲ್ಯಾಬ್‌ ಗಳನ್ನು ತೆರವುಗೊಳಿಸಿ ರಸ್ತೆಯ ಇನ್ನೊಂದು ಪಾರ್ಶ್ವದಲ್ಲಿ ಜೋಡಿಸಿಡಲಾಯಿತು. ಈ ಸಂದರ್ಭ ಜೇಸಿಬಿ ಸಂಚಾರ ಹಾಗೂ ಕಾರ್ಯಾಚರಣೆಗೆ ತೊಂದರೆ ಆಗದಂತೆ ರಸ್ತೆಯ ಎರಡೂ ಭಾಗದಲ್ಲಿ ಬ್ಯಾರಿಕೇಡ್‌ ಗಳನ್ನು ಜೋಡಿಸಿ ವಾಹನ ಸಂಚಾರಕ್ಕೆ ತಡೆನೀಡಲಾಯಿತು. ಆದರೂ, ಕಾರ್ಯಾಚರಣೆ ನಡೆಯುವ ಸಂದರ್ಭ ಕೆಲವು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಯಿತು. 

ಅಧಿಕಾರಿಗಳು ಗಪ್‌ ಚುಪ್‌!
ತೆರವು ಕಾರ್ಯಾಚರಣೆ ನಡೆಯುತ್ತಿದ್ದ ಪ್ರದೇಶಕ್ಕೆ ‘ಉದಯವಾಣಿ ಸುದಿನ’ ತಂಡ ಭೇಟಿ ನೀಡಿದಾಗ ಅಲ್ಲಿದ್ದ ಪಾಲಿಕೆ ಅಧಿಕಾರಿಯೋರ್ವರಲ್ಲಿ ವಿಚಾರಿಸಿದಾಗ ಅವರು ಮಾತನಾಡಲು ನಿರಾಕರಿಸಿದರು. ‘ಅವರಲ್ಲಿ ಕೇಳಿ’ ಎಂದು ಇನ್ನೊಬ್ಬ ಅಧಿಕಾರಿಯವರತ್ತ ಬೆರಳು ತೋರಿಸಿದರು. ಅವರಲ್ಲಿ ಮಾಹಿತಿ ಕೇಳಲು ಹೋದಾಗ ‘ನಾವೇನು ಮಾತನಾಡಲ್ಲ. ಪಾಲಿಕೆ ಆಯುಕ್ತರನ್ನೇ ಕೇಳಿ’ ಎಂದು ಅವರು ಮಾತು ನಿಲ್ಲಿಸಿದರು. ಉಳಿದ ಅಧಿಕಾರಿಗಳು ಕೂಡ ಯಾವ ಪ್ರಶ್ನೆಗೂ ಉತ್ತರ ನೀಡದೆ ಮೌನವಾಗಿದ್ದರು. 


‘ಸುದಿನ’ ವರದಿ ಆಧರಿತ ಕ್ರಮ

ರಾಜಕಾಲುವೆ ಒತ್ತುವರಿ ಆಗಿರುವ ಹಾಗೂ ಕಾಲುವೆಯಲ್ಲಿ ನೀರು ಹರಿಯಲು ಸೂಕ್ತ ವ್ಯವಸ್ಥೆ ಇಲ್ಲದಿರುವ ವಿಚಾರ ಪಾಲಿಕೆಯ ಗಮನಕ್ಕೆ ಬಂದಿದೆ. ಜತೆಗೆ, ‘ಉದಯವಾಣಿ ಸುದಿನ’ ಕೂಡ ಈ ಬಗ್ಗೆ ವಿಸ್ತೃತ ವರದಿಯನ್ನು ರಿಯಾಲಿಟಿ ಚೆಕ್‌ ಮೂಲಕ ಪ್ರತಿದಿನವೂ ಪ್ರಸ್ತುತಪಡಿಸುತ್ತಿದೆ. ಇದರನ್ವಯ ಸೋಮವಾರದಿಂದಲೇ ಪಾಲಿಕೆ ನೇತೃತ್ವದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ. ಇದು ನಿರಂತರ ಕಾರ್ಯಾಚರಣೆಯಾಗಿ ಮುಂದುವರಿಯಲಿದೆ.
– ಭಾಸ್ಕರ್‌,ಮೇಯರ್‌

ತೆರವು – ಅಡೆತಡೆ ನಿವಾರಣೆ
ಕೊಟ್ಟಾರಚೌಕಿ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ಮಾಡುವ ಮೂಲಕ ಕಾಲುವೆಯಲ್ಲಿ ನೀರು ಹರಿಯಲು ಇದ್ದ ಅಡೆತಡೆಗಳನ್ನು ಸರಿಪಡಿಸುವ ಕೆಲಸವನ್ನು ಆರಂಭಿಸಲಾಗಿದೆ. ದ.ಕ. ಜಿಲ್ಲಾಧಿಕಾರಿಯವರ ಸೂಚನೆಯ ಮೇರೆಗೆ ಈಗಾಗಲೇ ಕಾರ್ಯಾಚರಣೆ ನಡೆಸಲಾಗಿದ್ದು, ಮುಂದೆ ನಗರದ ಇತರ ಕಡೆಗಳಲ್ಲಿ ಒತ್ತುವರಿಯನ್ನು ತೆರವುಗೊಳಿಸಲಾಗುತ್ತದೆ.
– ಮಹಮ್ಮದ್‌ ನಝೀರ್‌, ಪಾಲಿಕೆ ಆಯುಕ್ತರು

ಟಾಪ್ ನ್ಯೂಸ್

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

courts

Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.