ಕಾರು-ಬಸ್ ಢಿಕ್ಕಿ ಪ್ರಕರಣ: ಕಾರು ಚಾಲಕ ಸಾವು
Team Udayavani, Nov 3, 2022, 11:25 PM IST
ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ 169 ಹಾದುಹೋಗುವ ಅಲಂಗಾರ್‌ನಲ್ಲಿ ಬಸವನಕಜೆ ಬಳಿ ಶಾಲಾ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕಾರಿನ ಚಾಲಕ ಕಾರ್ಕಳ ನಿ ರಾಜೇಶ್ ಆಚಾರ್ಯ (39) ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮಧ್ಯ ರಾತ್ರಿ ವೇಳೆಗೆ ಮೃತಪಟ್ಟ ಘಟನೆ ನಡೆದಿದೆ.
ಆಲಂಗಾರಿನ ಸೆ„ಂಟ್ ಥೋಮಸ್ ಆಂಗ್ಲ ಮಾಧ್ಯಮ ಶಾಲೆಯ ಬಸ್‌ಗೆ ಕಾರ್ಕಳದ ಕಡೆಯಿಂದ ಬರುತ್ತಿದ್ದ ಕಾರು ಗುದ್ದಿ ಎರಡೂ ವಾಹನಗಳು ಜಖಂಗೊಂಡಿದ್ದವು. ಶಾಲಾ ಮಕ್ಕಳು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದರು.
ಕಾರಿನಲ್ಲಿದ್ದ ಇನ್ನೋರ್ವ ವ್ಯಕ್ತಿಗೂ ಗಾಯಗಳಾಗಿದ್ದು ಅವರು ಚೇತರಿಸಿಕೊಳ್ಳುತ್ತಿದ್ದಾರೆನ್ನಲಾಗಿದೆ.
ಮೃತ ರಾಜೇಶ್ ಅವರು ಕೊಡ್ಯಡ್ಕ, ಪೊಳಲಿ, ಕಟೀಲು ಕ್ಷೇತ್ರಗಳಿಗೆ ರಥ ನಿರ್ಮಾಣ ಮಾಡಿಕೊಟ್ಟ ರಥಶಿಲ್ಪಿ ಎಕ್ಕಾರು ಅಪ್ಪು ಆಚಾರ್ಯ ಕಾರ್ಕಳ ಆವರ ಪುತ್ರ. ಮೊದಲು ಮರದ ಕೆಲಸ ಮಾಡಿಕೊಂಡಿದ್ದು ಬಳಿಕ ಮಂಗಳೂರಿನಲ್ಲಿ ಟೂರಿಸ್ಟ್ ಕಾರು ವ್ಯವಹಾರ ನಿರತರಾಗಿದ್ದರು. ಕಾರ್ಕಳದಲ್ಲಿರುವ ತಾಯಿಕಡೆಯ ಮನೆಗೆ ಹೋಗಿ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ರಾಜೇಶ್ ವಿವಾಹಿತ, ಪತ್ನಿ, ಹಾಗೂ 14ರ ಹರೆಯದ ಪುತ್ರಿ ಇದ್ದಾರೆ. ರಾಜೇಶ್ ಆಚಾರ್ಯ ಅವರು ಮಂಗಳೂರು ಅತ್ತಾವರದಲ್ಲಿ ಸ್ವಂತ ಮನೆ ಕಟ್ಟಿಕೊಂಡು ವಾಸವಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.