ಬೆಳುವಾಯಿ: ಟ್ರಾನ್ಸ್‌ಫಾರ್ಮರ್, ಬೈಕ್‌ಗಳಿಗೆ ಕಾರು ಢಿಕ್ಕಿ
Team Udayavani, Jun 20, 2019, 10:05 AM IST
ಮೂಡುಬಿದಿರೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ನಿಲ್ಲಿಸಲಾಗಿದ್ದ ಎರಡು ಬೈಕುಗಳಿಗೆ ಮತ್ತು ಟ್ರಾನ್ಸ್ ಫಾರ್ಮರ್‌ಗೆ ಢಿಕ್ಕಿ ಹೊಡೆದ ಘಟನೆ ಬುಧವಾರ ಬೆಳಗ್ಗೆ 8.30ರ ಸುಮಾರಿಗೆ ಬೆಳುವಾಯಿಯಲ್ಲಿ ಸಂಭವಿಸಿದೆ.
ಕಾರು ಮೊದಲು ಬೆಳುವಾಯಿ ಪೇಟೆಯಲ್ಲಿರುವ ಬ್ಲೋಸಂ ಶಾಲಾವರಣಕ್ಕೆ ಢಿಕ್ಕಿ ಹೊಡೆದಿದೆ. ಬಳಿಕ ಬೈಕುಗಳು ಮತ್ತು ಟ್ರಾನ್ಸ್ ಫಾರ್ಮರ್‌ಗೆ ಗುದ್ದಿದೆ. ಒಂದು ಬೈಕ್ ಮೆಸ್ಕಾಂ ಲೈನ್‌ಮ್ಯಾನ್‌ಗೆ ಸೇರಿದ್ದಾಗಿದೆ. ಕಾರಿಗೂ ತೀವ್ರ ಹಾನಿಯಾಗಿದ್ದು, ಅದರಲ್ಲಿ ಚಾಲಕ ಸಹಿತ ಮೂವರಿಗೆ ಗಾಯಗಳಾಗಿವೆ.
ಟ್ರಾನ್ಸ್‌ಫಾರ್ಮರ್‌ಗೆ ಸುಮಾರು 1 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ಮೆಸ್ಕಾಂ ಇಲಾಖೆಯಿಂದ ಮೂಡುಬಿದಿರೆ ಪೊಲೀಸರಿಗೆ ದೂರು ನೀಡಲಾಗಿದೆ.
ಜನಸಂಚಾರ ವಿರಳವಿತ್ತು
ಅಪಘಾತ ಸಂಭವಿಸಿದ ಸ್ಥಳದಲ್ಲಿ ಯಾವತ್ತೂ ಶಾಲಾ ಮಕ್ಕಳು ಮತ್ತು ಸಾರ್ವಜನಿಕರು ಹೆಚ್ಚಾಗಿರುತ್ತಿದ್ದರು. ಆದರೆ ಅದೃಷ್ಟವಶಾತ್ ಬುಧವಾರ ಅಪಘಾತದ ಹೊತ್ತು ಜನರ ಸಂಖ್ಯೆ ಕಡಿಮೆಯಾಗಿತ್ತು. ಇದರಿಂದಾಗಿ ಸಂಭಾವ್ಯ ಅಪಾಯ ತಪ್ಪಿದಂತಾಗಿದೆ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.