ಕಾರು ಢಿಕ್ಕಿ: ಬೈಕ್ ಸವಾರ ಸಾವು ಇನ್ನೋರ್ವ ಗಂಭೀರ
Team Udayavani, Jul 31, 2017, 7:25 AM IST
ವಿಟ್ಲ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿಯಲ್ಲಿ ಕಾರು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿದ್ದಾರೆ. ಮತ್ತೋರ್ವ ತೀವ್ರವಾಗಿ ಗಾಯಗೊಂಡಿದ್ದಾರೆ.
ಬೆಳ್ತಂಗಡಿ ತಾಲೂಕು ಕರಾಯ ಬದ್ಯಾರು ನಿವಾಸಿ ಎಲಿಯಾಸ್ ಅವರ ಪುತ್ರ ಜಾಫರ್ ಶರೀಫ್ (18) ಮೃತಪಟ್ಟವರು. ಬೆಳ್ತಂಗಡಿಯ ಖಾಸಗಿ ಐಟಿಐ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದ ಅವರು ತಂದೆ, ತಾಯಿ ನಾಲ್ವರು ಸಹೋದರಿಯರನ್ನು ಅಗಲಿದ್ದಾರೆ. ತಂದೆ ವಿದೇಶದಲ್ಲಿ ಉದ್ಯೋಗಿಯಾಗಿದ್ದಾರೆ.
ಬೆಳ್ತಂಗಡಿ ತಾಲೂಕು ಪುತ್ತಿಲ ನಿವಾಸಿ ಉಸ್ಮಾನ್ ಅವರ ಪುತ್ರ ಮಹಮ್ಮದ್ ಇರ್ಷಾದ್ (23) ಗಂಭೀರ ಗಾಯಗೊಂಡವರು. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ.
ಇವರಿಬ್ಬರು ಮಂಗಳೂರಿನಿಂದ ಉಪ್ಪಿನಂಗಡಿಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಮಂಗಳೂರಿಗೆ ತೆರಳುತ್ತಿದ್ದ ಆಲ್ಟೋ ಕಾರು ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಒಬ್ಬ ಸವಾರನ ಹಲ್ಲು ಮುರಿದು ಕಾರಿನೊಳಗೆ ಹಾರಿದೆ. ಗಾಯಾಳು
ವನ್ನು ಮಾಣಿಯ 108 ವಾಹನದ ಮೂಲಕ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಯಿತು. ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.