ಮುಡಿಪು: ರಸ್ತೆ ಬದಿ ನಿಂತಿದ್ದ ಬಾಲಕನಿಗೆ ಕಾರು ಢಿಕ್ಕಿ
Team Udayavani, Dec 27, 2022, 5:01 PM IST
ಉಳ್ಳಾಲ: ರಸ್ತೆ ಬದಿ ನಿಂತಿದ್ದ ಎಂಟನೇ ತರಗತಿ ವಿದ್ಯಾರ್ಥಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸಂಭವಿಸಿದೆ.
ಬೋಳಿಯಾರು ಭಟ್ರಬೈಲು ನಿವಾಸಿ ಹರಿಶ್ಚಂದ್ರ -ಅರುಣಾಕ್ಷಿ ದಂಪತಿ ಪುತ್ರ ಕಾರ್ತಿಕ್ (14) ಮೃತ ಬಾಲಕ. ಮುಡಿಪು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದನು. ಶಾಲೆ ಬಿಟ್ಟು ಮನೆಗೆ ತೆರಳಲು ರಸ್ತೆಬದಿಯಲ್ಲಿ ನಿಂತಿದ್ದ ಬಾಲಕನಿಗೆ ಮುಡಿಪು ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ.
ಇದನ್ನೂ ಓದಿ:ಕೃಷ್ಣಾಪುರ ಜಲೀಲ್ ಪ್ರಕರಣ: ಮತ್ತೋರ್ವ ಆರೋಪಿಯನ್ನು ಬಂಧಿಸಿದ ಪೊಲೀಸರು
ಕಾರು ಚಾಲಕನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಬಾಲಕನಿಗೆ ಢಿಕ್ಕಿ ಹೊಡೆದ ಕಾರು ನಂತರ ಸಮೀಪದಲ್ಲೇ ಇದ್ದ ರಿಕ್ಷಾಗೂ ಢಿಕ್ಕಿ ಹೊಡೆದಿದೆ.
ಕಾರು ಮಾಲೀಕ ಟ್ರಯಲ್ ನೋಡಲು ಇನ್ನೋರ್ವ ಗೆಳೆಯನಿಗೆ ಕಾರು ನೀಡಿದ್ದ ಸಂದರ್ಭ ಘಟನೆ ಸಂಭವಿಸಿದೆ ಎನ್ನಲಾಗಿದೆ.
ನಿಂತಿದ್ದ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಕಾರು ಸವಾರ ಎದುರುಗಡೆಯಿದ್ದ ರಿಕ್ಷಾ, ಬ್ಯಾರಿಕೇಡ್ ಗೆ ಢಿಕ್ಕಿ ಹೊಡೆದು ನಂತರ ಬಾಲಕನಿಗೆ ಢಿಕ್ಕಿ ಹೊಡೆದಿದೆ. ತಲೆಗೆ ಗಂಭೀರ ಗಾಯಗೊಂಡು ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಾಲಾ-ಕಾಲೇಜು ಮುಂಭಾಗದಲ್ಲಿ ವಾಹನಗಳ ಅತಿವೇಗದ ಚಾಲನೆಯ ಕಡಿವಾಣಕ್ಕೆ ರಸ್ತೆಯಲ್ಲಿ ಉಬ್ಬುಗಳನ್ನು ಅಳವಡಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದರೂ, ಈವರೆಗೆ ಅಳವಡಿಸದೆ ಸಂಬಂಧಪಟ್ಟ ಅಧಿಕಾರಿಗಳು ತೋರಿಸಿರುವ ಬೇಜವಾಬ್ದಾರಿಯೇ ಬಾಲಕನ ಸಾವಿಗೆ ಕಾರಣ ಅನ್ನುವ ಆರೋಪವನ್ನು ಸ್ಥಳದಲ್ಲಿ ಸೇರಿದವರು ಮಾಡಿದ್ದಾರೆ.
ಮಂಗಳೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
MUST WATCH
ಹೊಸ ಸೇರ್ಪಡೆ
Karnataka: ಅರ್ಹರಿಗಷ್ಟೇ ಬಿಪಿಎಲ್ ಕಾರ್ಡ್: ಸಿಎಂ ಸಿದ್ದರಾಮಯ್ಯ
Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ
Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್
Eden Gardens; ‘ಬಿ’ ಬ್ಲಾಕ್‌ಗೆ ಜೂಲನ್ ಗೋಸ್ವಾಮಿ ಹೆಸರಿಡಲು ನಿರ್ಧಾರ
Karnataka Lokayukta: ನಾಲ್ವರಿಗೆ ಲೋಕಾ ಶಾಕ್: 27 ಕೋಟಿ ರೂ. ಆಸ್ತಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.