ಕಾರು -ರಿಕ್ಷಾ ಢಿಕ್ಕಿ: ಇಬ್ಬರ ಸಾವು
ಸಜೀಪಪಡು ಸಮೀಪ ಅಪಘಾತ
Team Udayavani, Apr 9, 2019, 6:11 AM IST
ಬಂಟ್ವಾಳ: ಸಜೀಪಪಡು ಗ್ರಾಮದ ಕಂಚಿಲದಲ್ಲಿ ಸೋಮ ವಾರ ಕಾರು ಮತ್ತು ರಿಕ್ಷಾ ಮುಖಾಮುಖೀ ಢಿಕ್ಕಿ ಹೊಡೆದು ರಿಕ್ಷಾ ಪ್ರಯಾಣಿಕರಾಗಿದ್ದ ಸಹೋದರಿಯರಿಬ್ಬರು ಆಸ್ಪತ್ರೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ.ಗಂಭೀರವಾಗಿ ಗಾಯಗೊಂಡಿರುವ ಚಾಲಕರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಚಿ ನಿವಾಸಿಗಳಾದ ಜೈನಬಾ (45) ಹಾಗೂ ಜೋಹರಾ (55) ಮೃತಪಟ್ಟವರು. ರಿಕ್ಷಾ ಚಾಲಕ ಮಂಚಿ ನಿವಾಸಿ ಆಶ್ರಫ್ ಹಾಗೂ ಕಾರು ಚಾಲಕ ಮಹಮ್ಮದ್ ಸಿರಾಜ್ ಗಾಯ ಗೊಂಡವರು.
ಅಸೌಖ್ಯದಿಂದಿದ್ದ ಜೋಹರಾರನ್ನು ಜೈನಬಾ ಅವರು ಮಂಚಿಯ ರಿಕ್ಷಾದಲ್ಲಿ ಚೇಲೂರಿನಲ್ಲಿರುವ ವೈದ್ಯರ ಬಳಿಗೆ ಕರೆದೊಯ್ಯು ತ್ತಿದ್ದಾಗ ಅಪಘಾತ ಸಂಭವಿಸಿದೆ.
ಕಾರು ಬೇರೊಂದು ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ರಿಕ್ಷಾಕ್ಕೆ ಢಿಕ್ಕಿಯಾಗಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಮೆಲ್ಕಾರ್ ಸಂಚಾರ ಠಾಣೆ ಎಸ್ಐ ಮಂಜುನಾಥ್ ಅವರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.