Belthangady ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ: ಬಿಜೆಪಿ ಖಂಡನೆ
Team Udayavani, Oct 18, 2023, 8:15 PM IST
ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸುದರ್ಶನ ಎಂ. ಖಂಡಿಸಿದ್ದಾರೆ.
ಅರಣ್ಯ ಇಲಾಖೆಯ ಅಧಿಕಾರಿಗಳಿಂದ ದೌರ್ಜನ್ಯಕ್ಕೊಳಗಾದ ಬಡ ಕುಟುಂಬದ ಪರವಾಗಿ ನಿಂತಿರುವ ಶಾಸಕರ ಮೇಲೆ ಸರಕಾರ ಅರಣ್ಯ ಇಲಾಖೆಯ ಅಧಿಕಾರಿಗಳ ಮುಖಾಂತರ ಪ್ರಕರಣ ದಾಖಲಿಸಿದೆ. ಅರಣ್ಯ ಅಧಿಕಾರಿಗಳ ದೌರ್ಜನ್ಯವನ್ನು ಕಂಡಾಗ ನಾವು ಪ್ರಜಾಪ್ರಭುತ್ವ ರಾಜ್ಯದಲ್ಲಿದ್ದೇವಾ ಅಥವಾ ಗೂಂಡಾ ಪ್ರವೃತಿಯ ರಾಜ್ಯದಲ್ಲಿದ್ದೇವಾ ಎಂದು ಸಂಶಯ ಬರುತ್ತಿದೆ.
ಕ್ಷೇತ್ರದ ಬಡ ಕುಟುಂಬದ ಪರವಾಗಿ ನಿಂತು ಅರಣ್ಯ ಅಧಿಕಾರಿಗಳ ದೌರ್ಜನ್ಯವನ್ನು ನಿಲ್ಲಿಸಿದ ಶಾಸಕ ಹರೀಶ್ ಪೂಂಜಾರ ನಡೆ ಸರಿಯಾಗಿದೆ. ಜನರ ಮೇಲೆ ಸರಕಾರಿ ಅಧಿಕಾರಿಗಳು ದೌರ್ಜನ್ಯವೆಸಗಿದಾಗ ಶಾಸಕರು ಕೈಕಟ್ಟಿ ಕೂರಬೇಕಾ? ಸರಕಾರಿ ಅಧಿಕಾರಿಗಳು ಜನರ ಪರವಾಗಿ ಕೆಲಸ ಮಾಡುವುದನ್ನು ಬಿಟ್ಟು ಸರಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿರುವುದು ದುರಾದೃಷ್ಟ.
ಶಿವಮೊಗ್ಗದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಮೇಲೆ ಕಲ್ಲು ಎಸೆದ ಮತಾಂಧರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲು ರಾಜ್ಯ ಸರಕಾರ ಹಿಂದೇಟು ಹಾಕಿದ್ದರು. ಸರಕಾರಿ ಅಧಿಕಾರಿಗಳಿಗೆ ಜನರೇ ರಕ್ಷಣೆ ನೀಡುವುದು ಹೊರತು ಸರಕಾರ ರಕ್ಷಣೆ ನೀಡುವುದಿಲ್ಲ. ಆದುದರಿಂದ ಜನರ ಜೊತೆ ನಿಂತ ಶಾಸಕ ಹರೀಶ್ ಪೂಂಜಾರವರ ಮೇಲೆ ದಾಖಲಿಸಿದ ಕರ್ತವ್ಯಕ್ಕೆ ಅಡ್ಡಿ ಮಾಡಿದರೆಂಬ ಸುಳ್ಳು ಪ್ರಕರಣವನ್ನು ಸರಕಾರ ಕೂಡಲೇ ಕೈಬಿಡಬೇಕೆಂದು ಸುದರ್ಶನ ಮೂಡುಬಿದಿರೆ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli: ಕಾಂಗ್ರೆಸ್‌ನವರಿಂದ ಹಾವು ತೋರಿಸಿ ಹೆದರಿಸುವ ಕೆಲಸ: ಶಾಸಕ ರಾಜುಗೌಡ
Bollywood: ʼಕಲ್ಕಿʼ ನಿರ್ದೇಶಕನ ಸಿನಿಮಾದಲ್ಲಿ ಬಿಟೌನ್ ಬ್ಯೂಟಿ ಆಲಿಯಾ?
Sasthana: ಸ್ಥಳೀಯರಿಗೆ ಟೋಲ್ ಬಗ್ಗೆ ಪ್ರತಿಭಟನೆ
Bantwala: ಪ್ರಿಯತಮೆಯನ್ನು ಭೇಟಿಯಾಗಲು ಬಂದ ಯುವಕನಿಗೆ ಸ್ಥಳೀಯರಿಂದ ಹಲ್ಲೆ: ಪ್ರಕರಣ ದಾಖಲು
Tollywood: ‘ಕಣ್ಣಪ್ಪʼ ಚಿತ್ರದ ಫೋಟೋ ಲೀಕ್; 5 ಲಕ್ಷ ರೂ. ಘೋಷಿಸಿದ ಬಳಿಕ ವ್ಯಕ್ತಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.