ಕೋಳಿ ತ್ಯಾಜ್ಯ ಎಸೆದರೆ ಕೇಸ್: ತಹಶೀಲ್ದಾರ್ ಎಚ್ಚರಿಕೆ
Team Udayavani, Jun 30, 2019, 5:02 AM IST
ಸುಳ್ಯ : ತಾಲೂಕಿನ ಬೆಂಗಮಲೆ, ಸಂಪಾಜೆ, ಜಾಲ್ಸೂರು, ಆನೆಗುಂಡಿ ಸಹಿತ ಹಲವು ಕಡೆಗಳಲ್ಲಿ ಕೋಳಿ ತ್ಯಾಜ್ಯ ಎಸೆಯುತ್ತಿರುವ ಪ್ರಕರಣ ನಿರಂತರ ನಡೆಯುತ್ತಿರುವ ಬಗ್ಗೆ ದೂರು ಬರುತ್ತಿದ್ದು, ಸ್ಥಳ ಪರಿಶೀಲನೆ ಸಂದರ್ಭ ಅದು ದೃಢಪಟ್ಟಿದೆ. ಈ ರೀತಿ ತ್ಯಾಜ್ಯ ಎಸೆಯುವವರು ಪತ್ತೆಯಾದಲ್ಲಿ ಅವರ ವಿರುದ್ಧ ಸೆಕ್ಷನ್ 133 ಅಡಿ ಪ್ರಕರಣ ದಾಖಲಿಸಲಾಗುವುದು ಮತ್ತು ತ್ಯಾಜ್ಯ ನೀಡಿದ ಅಂಗಡಿ ಪರವಾನಿಗೆ ಪತ್ರ ರದ್ದುಪಡಿಸಲಾಗುವುದು ಎಂದು ತಹಶೀಲ್ದಾರ್ ಕುಂಞಿ ಅಹ್ಮದ್ ಎಚ್ಚರಿಕೆ ನೀಡಿದ್ದಾರೆ.
ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವ ಪ್ರಕರಣ ಕಂಡು ಬಂದ ಹಿನ್ನೆಲೆಯಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ತಾಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ನಗರದ ಕೋಳಿ ಅಂಗಡಿ ಮಾಲಕರ ಸಭೆ ನಡೆದು, ಈ ಎಚ್ಚರಿಕೆ ನೀಡಲಾಯಿತು.
ಪರಿಸರ ಕಲುಷಿತಗೊಳಿಸುವ ಇಂತಹ ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ. ಕೆಲವೆಡೆ ಸಿಸಿ ಕೆಮರಾ ಅಳವಡಿಸಲಾಗಿದೆ. ತಪ್ಪಿತಸ್ಥರು ಯಾರೆನ್ನುವ ಸುಳಿವು ಸಿಗಲಿದ್ದು, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಹೇಳಿದರು.
ವಲಯ ಅರಣ್ಯಾಧಿಕಾರಿ ಎನ್. ಮಂಜುನಾಥ, ತಾ.ಪಂ. ಸದಸ್ಯೆ ಪುಷ್ಪಾ ಮೇದಪ್ಪ, ನ.ಪಂ. ಎಂಜಿನಿಯರ್ ಶಿವಕುಮಾರ್, ಪಿಎಸ್‌ಐ ಹರೀಶ್ ಕುಮಾರ್ ಉಪಸ್ಥಿತರಿದ್ದರು. ಕೋಳಿ ಅಂಗಡಿ ಮಾಲಕರು ಸಭೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.