ಮನೆಯಿಂದ ನಗ-ನಗದು ಕಳವು ಪ್ರಕರಣ: ಆರೋಪಿಗೆ ಷರತ್ತುಬದ್ದ ಜಾಮೀನು ಮಂಜೂರು
Team Udayavani, Aug 2, 2023, 11:11 PM IST
ಮೂಡುಬಿದಿರೆ: ಮೂಲ್ಕಿ ಠಾಣಾ ವ್ಯಾಪ್ತಿಯ ತಾಳಿಪ್ಪಾಡಿ ಗ್ರಾಮದ ಗುತ್ತಕಾಡು ನಲ್ಲಿರುವ ಐಕಳ ಹರೀಶ್ ಶೆಟ್ಟಿ ಅವರ ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಹಾಗೂ ನಗದನ್ನು ಕಳವುಗೈದ ಪ್ರಕರಣದಲ್ಲಿ ಮೂರನೇ ಆರೋಪಿಗೆ ಮೂಡುಬಿದಿರೆ ನ್ಯಾಯಾಲಯ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ.
ಕಳೆದ ಜನವರಿ ತಿಂಗಳಲ್ಲಿ ಘಟನೆ ನಡೆದಿದ್ದು, ಅರ್ಧ ಕಿಲೋ ಬಂಗಾರ ಸಹಿತ ಬೆಳ್ಳಿ ಆಭರಣಗಳನ್ನು ಕಳವುಗೈದಿದ್ದರು. ಗಂಭೀರ ಪ್ರಕರಣವಾಗಿದ್ದ ಕಾರಣ ಮಂಗಳೂರು ಸಿಸಿಬಿ ಪೊಲೀಸರಿಗೆ ಪ್ರಕರಣದ ತನಿಖೆ ವರ್ಗಾವಣೆಗೊಂಡಿತ್ತು.
ಸಿಸಿಬಿ ಪೊಲೀಸರು ಕಳೆದ ತಿಂಗಳು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಇಬ್ಬರೂ ಆರೋಪಿಗಳ ಜಾಮೀನು ಮೂಡುಬಿದಿರೆ ನ್ಯಾಯಾಲಯ ಮತ್ತು ಜಿಲ್ಲಾ ನ್ಯಾಯಾಲಯದಲ್ಲಿ ತಿರಸ್ಕೃತಗೊಂಡಿತ್ತು. ಇತ್ತೀಚೆಗೆ ಮೂರನೇ ಆರೋಪಿ ಮಹಮ್ಮದ್ ಶರೀಫ್ನನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಶರೀಫ್ಗೆ ಮೂಡುಬಿದಿರೆ ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಆರೋಪಿ ಶರೀಫ್ ಪರವಾಗಿ ಮಂಗಳೂರು ವಕೀಲರಾದ ವೇಣುಕುಮಾರ್, ಯುವರಾಜ್ ಮತ್ತು ಮೂಡುಬಿದಿರೆ ವಕೀಲ ವೇಣುಗೋಪಾಲ್ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.