ಕಾವ್ಯಾ ಸಾವು ಪ್ರಕರಣ: ಸಿಬಿಐ ತನಿಖೆಗೆ ಆಗ್ರಹ


Team Udayavani, Aug 1, 2017, 3:05 PM IST

29-MLR-1.jpg

ಮಂಗಳೂರು: ಕಾವ್ಯಾ ಅಸಹಜ ಸಾವಿನ ಕುರಿತು ಹಲವಾರು ಸಂಶಯಗಳು ಇರುವುದರಿಂದ ಈ ಬಗ್ಗೆ ಉನ್ನತ ಮಟ್ಟದ ತನಿಖೆಯನ್ನು ನಡೆಸುವ ಆವಶ್ಯಕತೆ ಇದ್ದು, ಸ್ವತಃ ಆಳ್ವಾಸ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಮೋಹನ್‌ ಆಳ್ವ ಅವರು ಮುಂದೆ ಬಂದು ಸಿಬಿಐ ತನಿಖೆಗೆ ಒಪ್ಪಿಸಲು ಮುಂದಾಗ ಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ (ಟಿ.ಎ.ನಾರಾಯಣ ಗೌಡ ಬಣ) ದ.ಕ. ಜಿಲಾಧ್ಯಕ್ಷ ಅನಿಲ್‌ ದಾಸ್‌ ಒತ್ತಾಯಿಸಿದ್ದಾರೆ. 

ಕಾವ್ಯಾ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಆ. 1 ರಂದು ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಸಿ ಪೊಲೀಸ್‌ ಆಯುಕ್ತರಿಗೆ ಹಾಗೂ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯ ಮಂತ್ರಿ ಮತ್ತು ಗೃಹ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದವರು ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. 

ಆಳ್ವಾಸ್‌ ಶಿಕ್ಷಣ ಸಂಸ್ಥೆಗೆ ವಿವಿಧ ರಾಜ್ಯಗಳಿಂದ ಮತ್ತು ದೇಶಾದ್ಯಂತದಿಂದ ವಿದ್ಯಾರ್ಥಿಗಳು ಬರುತ್ತಿದ್ದಾರೆ. ಆದರೆ ವಿದ್ಯಾರ್ಥಿಗಳ ಭದ್ರತೆಯ ಬಗೆಗೆ ಆಡಳಿತ ಮಂಡಳಿ ನಿರ್ಲಕ್ಷ  ವಹಿಸುತ್ತಿದೆ ಎಂದು ಆರೋಪಿಸಿದ ಅವರು ಶಾಲಾ ಆಡಳಿತ ಮಂಡಳಿಯಲ್ವಿ ರಕ್ಷಕ- ಶಿಕ್ಷಕ ಸಂಘವನ್ನು ರಚಿಸ ಬೇಕು, ವಿದ್ಯಾರ್ಥಿಗಳ ಘಟಕ ಸ್ಥಾಪಿಸಲು ಅನುಮತಿ ನೀಡ ಬೇಕು, ತಿಂಗಳಿಗೊಮ್ಮೆ ವಿದ್ಯಾರ್ಥಿಗಳ ಜತೆ ಸಂವಾದ ನಡೆಸಿ ಅವರ ಅಭಿಪ್ರಾಯ ಸಂಗ್ರಹಿಸುವ ವ್ಯವಸ್ಥೆ ಮಾಡ ಬೇಕೆಂದು ಒತ್ತಾಯಿಸಿದರು. 

ಹಿಂದಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಕಾರಣಕ್ಕಾಗಿ ಮನನೊಂದು ಕಾವ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆಡಳಿತ ಮಂಡಳಿ ಪ್ರತಿಪಾದಿಸುತ್ತಿದೆ. ಆದರೆ ಆಕೆಯ ಸಾವಿನ ಬಗ್ಗೆ ಹತ್ತು ಹಲವು ಸಂಶಯಗಳನ್ನು ಆಕೆಯ ಕುಟುಂಬದವರು ವ್ಯಕ್ತಪಡಿಸುತ್ತಿದ್ದಾರೆ. ಆದ್ದರಿಂದ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಉಪಾಧ್ಯಕ್ಷ ನಜೀರ್‌ ಮೊದಿನ್‌, ಮಂಗಳೂರು ತಾಲೂಕು ಅಧ್ಯಕ್ಷ ಮಧುಸೂದನ ಗೌಡ, ಪ್ರಧಾನ ಕಾರ್ಯದರ್ಶಿ ನಜೀರ್‌ ಹುಸೈನ್‌ ಬೆಂಗ್ರೆ, ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾದ ಲತಾಶ್ರೀ, ಬಂಟ್ವಾಳ ತಾಲೂಕು ಅಧ್ಯಕ್ಷ ಅಬ್ದುಲ್‌ ಜಲೀಲ್‌, ಆಟೋ ರಿಕ್ಷಾ ಘಟಕದ ಅಧ್ಯಕ್ಷ ಜೆರಾಲ್ಡ್‌ ಡಿ’ಕುನ್ಹಾ,  ಜಯರಾಜ್‌ ಜಪ್ಪಿನಮೊಗರು, ಎ.ಕೆ. ಜಮಾಲ್‌ ಅವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-mng-2

Mangaluru: ಹೆಲಿಕಾಪ್ಟರ್ ಸಂಚಾರ: ಸ್ಥಳ ಬದಲಾವಣೆ

6

Mangaluru; ನಗರದ ಇನ್ನಷ್ಟು ಕಡೆ ಬೀದಿ ಬದಿ ವ್ಯಾಪಾರಸ್ಥರ ವಲಯ: ಮೇಯರ್‌

5

Mangaluru: ಇಂದು ಕ್ರಿಸ್ಮಸ್‌ ಜಾಗರಣೆ ವಿಶೇಷ ಬಲಿಪೂಜೆ

2

Mangaluru; ಒಡಿಶಾದ ಗುಜ್ಜೆದೋಸೆ ಈಗ ಕರಾವಳಿಯಲ್ಲೂ ಪ್ರಯೋಗ

1

Kinnigoli-ಗುತ್ತಕಾಡು ರಸ್ತೆಯಂಚಿನಲ್ಲಿ ಅಪಾಯಕಾರಿ ಹೊಂಡಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.