ತನಿಖೆ ವೇಳೆ ಕೈ ಕೊಡುತ್ತಿರುವ ಸಿಸಿ ಕೆಮರಾಗಳು : ಕಾಯಿದೆ ಪ್ರಕಾರ ಸಿಸಿ ಕೆಮರಾ ಹೀಗಿರಬೇಕು 

ಸಾರ್ವಜನಿಕ ಸುರಕ್ಷೆ ಅಧಿನಿಯಮ ಕಟ್ಟುನಿಟ್ಟುಗೊಳಿಸಲು ನಿರ್ಧಾರ

Team Udayavani, Aug 7, 2022, 10:39 AM IST

thumb cctv 1

ಮಂಗಳೂರು : ಅಪರಾಧ ಕೃತ್ಯ ಗಳನ್ನು ಪತ್ತೆಹಚ್ಚಿ ಪ್ರಕರಣ ಭೇದಿಸಲು ನೆರವಾಗ ಬೇಕಾದ ಸಿಸಿ ಕೆಮರಾಗಳು ತನಿಖೆ ವೇಳೆ ಪೊಲೀಸರಿಗೆ ಕೈ ಕೊಡುತ್ತಿವೆ. ಇದಕ್ಕೆ ಕಾರಣ ಕಡಿಮೆ ಗುಣಮಟ್ಟದ ಕೆಮರಾಗಳು ಮತ್ತು ನಿರ್ವಹಣೆಯಲ್ಲಿ ನಿರ್ಲಕ್ಷ್ಯ.

ಸಾರ್ವಜನಿಕ ಸ್ಥಳ, ವಾಣಿಜ್ಯ ಕಟ್ಟಡಗಳಲ್ಲಿ ಅಳವಡಿಸಿರುವ ಕೆಮರಾಗಳ ಪೈಕಿ ಹೆಚ್ಚಿನವುಗಳಲ್ಲಿ ದೃಶ್ಯಗಳು ಸೆರೆಯಾಗುತ್ತಿಲ್ಲ. ಸೆರೆಯಾಗಿದ್ದರೂ ಅಸ್ಪಷ್ಟವಾಗಿರುತ್ತದೆ. ಹಾಗಾಗಿ ಪೊಲೀಸರು “ಕರ್ನಾಟಕ ಸಾರ್ವಜನಿಕ ಸುರಕ್ಷೆಯ (ಕ್ರಮಗಳ) ಜಾರಿ ಅಧಿನಿಯಮ 2017’ನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಂದಾಗಿದ್ದು, ಅಲ್ಲಿ ಸೂಚಿಸಿರುವ ಮಾದರಿಯಲ್ಲೇ ಸಿಸಿ ಕೆಮರಾ ಅಳವಡಿಕೆಯಾಗುವಂತೆ ಕ್ರಮ ಕೈಗೊಳ್ಳಲಿದ್ದಾರೆ.

30 ದಿನ ಮಾಹಿತಿ ಸಂಗ್ರಹವಿರಬೇಕು
ಅಧಿನಿಯಮದ ಪ್ರಕಾರ ದಿನಕ್ಕೆ ಸುಮಾರು 500ಕ್ಕಿಂತ ಹೆಚ್ಚು ಬಾರಿ ಜನರ ಓಡಾಟವಿರುವ ಅಥವಾ ಒಂದೇ ಬಾರಿಗೆ 100 ಮಂದಿಯ ಓಡಾಟವಿರುವ ಕಟ್ಟಡ/ಮಳಿಗೆಗಳಲ್ಲಿ ಹೈ ರೆಸೊಲ್ಯೂಷನ್‌ನ, 30 ದಿನಗಳವರೆಗೆ ದೃಶ್ಯಾವಳಿ ಸಂಗ್ರಹಿಸಿಟ್ಟುಕೊಳ್ಳಬಲ್ಲ ಸಿಸಿ ಕೆಮರಾ ಕಡ್ಡಾಯ.

3,224 ಹೈ ರೆಸೊಲ್ಯುಷನ್‌ ಕೆಮರಾ
ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ 15 ಕಾನೂನು ಮತ್ತು ಸುವ್ಯವಸ್ಥೆಯ ಠಾಣೆಗಳು, 4 ಸಂಚಾರ ಠಾಣೆಗಳು ಮತ್ತು ಒಂದು ಮಹಿಳಾ ಠಾಣೆ ಇವೆ. ಈ ವ್ಯಾಪ್ತಿಯೊಳಗಿನ ವಿವಿಧ ಕಟ್ಟಡಗಳಲ್ಲಿ ಒಟ್ಟು 20,870 ಸಿಸಿ ಕೆಮರಾಗಳಿವೆ. ಆದರೆ ಇದರಲ್ಲಿ ಹೈ ರೆಸೊಲ್ಯೂಷನ್‌ ಹೊಂದಿರುವ ಸಿಸಿ ಕೆಮರಾಗಳು 3,224 ಮಾತ್ರ. ಒಂದು ತಿಂಗಳ ಸ್ಟೋರೇಜ್‌ ಸಾಮರ್ಥ್ಯ ಹೊಂದಿರುವ ಸಿಸಿ ಕೆಮರಾಗಳ ಸಂಖ್ಯೆ 1,074 ಮಾತ್ರ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಇತ್ತೀಚಿನ ದಿನಗಳಲ್ಲಿ ನಡೆದಿರುವ ಕೆಲವು ಅಪರಾಧ ಕೃತ್ಯಗಳನ್ನು ಭೇದಿಸುವ ಸಂದರ್ಭ ಸಿಸಿ ಕೆಮರಾಗಳಿಂದ ನಿರೀಕ್ಷಿತ ಪ್ರಯೋಜನ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಸಿಸಿ ಕೆಮರಾಗಳ ಅಳವಡಿಕೆಯ ಬಗ್ಗೆಯೂ ಹೆಚ್ಚು ಆದ್ಯತೆ ನೀಡಲು ಪೊಲೀಸರು ಮುಂದಾಗಿದ್ದಾರೆ.

ಇದನ್ನೂ ಓದಿ : ಮೈಸೂರು ದಸರಾ: ಮಳೆಯ ನಡುವೆಯೇ ಗಜ ಪಯಣಕ್ಕೆ ಸಂಭ್ರಮದ ಚಾಲನೆ

ಠಾಣೆ ವ್ಯಾಪ್ತಿಯಲ್ಲಿ ಗುಣಮಟ್ಟದ ಕೆಮರಾ
ಜಿಲ್ಲೆಯ ಎಲ್ಲ ಪೊಲೀಸ್‌ ಠಾಣೆ, ಸುತ್ತಮುತ್ತ ಉತ್ತಮ ಗುಣಮಟ್ಟದ ಸಿಸಿ ಕೆಮರಾಗಳನ್ನು ಅಳವಡಿಸಲಾಗಿದ್ದು, ಅವುಗಳ ನಿರ್ವಹಣೆಯನ್ನು ಕೂಡ ಸಮರ್ಪಕವಾಗಿ ನಡೆಸುವಂತೆ ಸೂಚಿಸಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಕಾಯಿದೆ ಪ್ರಕಾರ ಸಿಸಿ ಕೆಮರಾ ಹೀಗಿರಬೇಕು
– ರೆಸೊಲ್ಯೂಷನ್‌ – ಫ‌ುಲ್‌ ಎಚ್‌ಡಿ 1920ಗಿ1080 ಅಥವಾ ಅದಕ್ಕಿಂತ ಹೆಚ್ಚು
– ಕನಿಷ್ಠ ಇಲ್ಯುಮಿನೇಷನ್‌- 0.01 ಎಲ್‌ಯುಎಕ್ಸ್‌ ಅಥವಾ ಅದಕ್ಕಿಂತ ಹೆಚ್ಚು
– ಲೆನ್ಸ್‌- ಫೋಕಲ್‌ ಲೆಂತ್‌ 3.6 ಎಂಎಂ ಅಥವಾ ಅದಕ್ಕಿಂತ ಹೆಚ್ಚು
– ವ್ಯಾಪ್ತಿ- ಐಆರ್‌ ಎಲ್‌ಇಡಿ (ಇನ್‌ಬಿಲ್ಟ್ ಐಆರ್‌)- 50 ಯಾರ್ಡ್ಸ್‌ ಅಥವಾ ಹೆಚ್ಚು
– ಪ್ಲಾಟ್‌ಫಾರ್ಮ್ ವೀಡಿಯೋ ಫಾಮ್ಯಾìಟ್‌- ಒಎನ್‌ವಿಐಎಫ್ ಕಂಪ್ಲ ಯಂಟ್‌ ಆರ್‌ ಈಕ್ವಲೆಂಟ್‌ (ಎಚ್‌. 264 ಕಂಪ್ರಶನ್‌)
– ಸ್ಟೋರೇಜ್‌ ಸಾಮರ್ಥ್ಯ (ಎನ್‌ವಿಆರ್‌)- ಕನಿಷ್ಠ 30 ದಿನಗಳು
– ಭದ್ರತೆಗಾಗಿ ಅಳವಡಿಸುವ ಸಿಸಿಟಿವಿ ಕೆಮರಾ ಅಥವಾ ಇತರ ಉಪಕರಣಗಳ ನಿರ್ವಹಣೆಗೆ ಪ್ರತೀ ಸಂಸ್ಥೆಯು ತಜ್ಞ ಸಿಬಂದಿ ಅಥವಾ ಏಜೆನ್ಸಿಯ ಸಿಬಂದಿ ಯನ್ನು ಇಟ್ಟುಕೊಂಡಿರಬೇಕು.

ಸಾರ್ವಜನಿಕ ಸುರಕ್ಷ ಕ್ರಮಗಳ ಬಗ್ಗೆ ಈಗಾಗಲೇ ಕಟ್ಟಡ ಮಾಲಕರಿಗೆ ಸೂಚನೆ ನೀಡಲಾಗಿದೆ. ಉಲ್ಲಂಘನೆ ಮಾಡಿದವರಿಗೆ ನೋಟಿಸ್‌ ನೀಡಿ ಅಗತ್ಯ ಕ್ರಮ ಕೈಗೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ.
– ದಿನೇಶ್‌ ಕುಮಾರ್‌, ಡಿಸಿಪಿ, ಮಂಗಳೂರು

ಸಾರ್ವಜನಿಕ ಸುರಕ್ಷಾ ಕಾಯಿದೆ ಪಾಲಿಕೆ ಹಾಗೂ ಇತರ ನಗರ ಸ್ಥಳೀಯ ಸಂಸ್ಥೆಗಳಿಗೆ ಅನ್ವಯ ವಾಗುತ್ತದೆ. ಆದರೂ ಜಿಲ್ಲಾ ಪೊಲೀಸ್‌ ವ್ಯಾಪ್ತಿಯ ಇತರ ಕಡೆಗಳಲ್ಲಿಯೂ ಕಟ್ಟಡ ಮತ್ತಿತರ ಆಯಕಟ್ಟಿನ ಸ್ಥಳಗಳಲ್ಲಿ ಉತ್ತಮ ಗುಣಮಟ್ಟದ ಸಿಸಿ ಕೆಮರಾ ಅಳವಡಿಸಲು ಸಾರ್ವಜನಿಕರಿಗೆ ಮನವಿ ಮಾಡಿದ್ದೇವೆ.
-ಹೃಷಿಕೇಶ್‌ ಸೋನಾವಣೆ, ಎಸ್‌ಪಿ, ದ.ಕ.

ಮಂಗಳೂರು ನಗರದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆಯಡಿ 14 ಸ್ಮಾರ್ಟ್‌ಪೋಲ್‌ಗ‌ಳಲ್ಲಿ ತಲಾ 5ರಂತೆ ಒಟ್ಟು 70 ಹೈ ರೆಸೊಲ್ಯೂಷನ್‌ ಕೆಮರಾಗಳಿವೆ. ಇದರಲ್ಲಿ ಪಿಟಿಝೆಡ್‌ ಕೆಮರಾ ಕೂಡ ಇದೆ. ಅಲ್ಲದೆ ಮುಂದಿನ ಹಂತದಲ್ಲಿ ಎಎನ್‌ಪಿಆರ್‌ (ಆಟೋಮ್ಯಾಟಿಕ್‌ ನಂಬರ್‌ಪ್ಲೇಟ್‌ ರೆಕಾರ್ಡರ್‌) ಕೆಮರಾ, ಆರ್‌ಎಲ್‌ವಿಡಿ (ರೆಡ್‌ಲೈಟ್‌ ವಯಲೇಶನ್‌ ಡಿಟೆಕ್ಟರ್‌) ಮೊದಲಾದವುಗಳನ್ನು ಅಳವಡಿಸಲಾಗುವುದು. ಇದಕ್ಕಾಗಿ 12 ಸ್ಥಳಗಳನ್ನು ಗುರುತಿಸಲಾಗಿದೆ. ಹೆಚ್ಚಿನ ಕೆಮರಾ ಅಳವಡಿಕೆಗೆ ಪೊಲೀಸರು ಕೂಡ ಮನವಿ ಮಾಡಿದ್ದಾರೆ.
– ಅರುಣ್‌ ಪ್ರಭಾ, ಮಂಗಳೂರು ಸ್ಮಾರ್ಟ್‌ ಸಿಟಿ ಜನರಲ್‌ ಮ್ಯಾನೇಜರ್‌

– ಸಂತೋಷ್‌ ಬೆಳ್ಳಿಬೆಟ್ಟು

ಟಾಪ್ ನ್ಯೂಸ್

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವುMangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Mangaluru:ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ;ಅಧ್ಯಕ್ಷರಾಗಿ ಡಾ| ಪ್ರಭಾಕರ ಶಿಶಿಲ ಆಯ್ಕೆ

Mangaluru:ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ;ಅಧ್ಯಕ್ಷರಾಗಿ ಡಾ| ಪ್ರಭಾಕರ ಶಿಶಿಲ ಆಯ್ಕೆ

ಜ. 11,12: ಮಂಗಳೂರಿನಲ್ಲಿ ಬೀಚ್‌ ಉತ್ಸವ

ಜ. 11,12: ಮಂಗಳೂರಿನಲ್ಲಿ ಬೀಚ್‌ ಉತ್ಸವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.