CCB ಕಾರ್ಯಾಚರಣೆ: ಮಾದಕ ವಸ್ತು MDMA ಸಹಿತ ಇನ್ನೋರ್ವ ಡ್ರಗ್ ಪೆಡ್ಲರ್ ಸೆರೆ


Team Udayavani, Jul 26, 2023, 7:43 PM IST

M CCB ARR

ಮಂಗಳೂರು: ಮಂಗಳೂರು ನಗರದಾದ್ಯಂತ ಮಾದಕ ವಸ್ತುವಾದ MDMA ನ್ನು ಮಾರಾಟ ಮಾಡುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಗಳ ತಂಡದ ಇನ್ನೋರ್ವ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ಧಾರೆ.

ಜು.20 ರಂದು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ  ಗ್ರಾಮದ ಪಿಲಿಕೂರಿನಲ್ಲಿ 2 ಮಾರುತಿ ಸ್ವಿಪ್ಟ್ ಕಾರಿನಲ್ಲಿ ಬಂದು ಅಕ್ರಮವಾಗಿ MDMA ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿ ಅವರಿಂದ 180 ಗ್ರಾಂ ಎಂಡಿಎಂಎ, ಎರಡು ಕಾರು, ಪಿಸ್ತೂಲ್, ಡ್ರಾಗನ್ ಚೂರಿ, ನಗದು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಬುಧವಾರ ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳ ಪತ್ತೆ ಕಾರ್ಯದಲ್ಲಿದ್ದ ಸಿಸಿಬಿ ಪೊಲೀಸರು ಸಮಯ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ MDMA ಸಹಿತ ಅಬ್ದುಲ್ ಉವೇಸ್ ಎಂಬಾತನನ್ನು ಬಂಧಿಸಿದ್ದಾರೆ.

ಆತನ ವಶದಿಂದ ಒಟ್ಟು 8 ಗ್ರಾಂ ತೂಕದ ರೂ. 40,000/- ಮೌಲ್ಯದ ಎಂಡಿಎಂಎ ಮಾದಕ ವಸ್ತು, ಒಂದು ಮೊಬೈಲ್ ಫೋನ್, ನಗದು ರೂ. 1020/-, ಡಿಜಿಟಲ್ ತೂಕ ಮಾಪನ ಸೇರಿ ಒಟ್ಟು ರೂ 81,520/- ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿಡಲಾಗಿದೆ.

ಆರೋಪಿ ಅಬ್ದುಲ್ ಉವೇಸ್ ಎಂಬಾತನ ವಿರುದ್ಧ ಈ ಹಿಂದೆ ಮೂಡಬಿದ್ರಿ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಕಿಡ್ನಾಫ್ ಪ್ರಕರಣ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟ/ ಸೇವನೆ ಪ್ರಕರಣ, ಉಡುಪಿ ಜಿಲ್ಲೆ ಸೆನ್ ಪೊಲೀಸ್ ಠಾಣೆಯಲ್ಲಿ ಐ ಟಿ ಅಕ್ಟ್ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣಗಳ ಪೈಕಿ 2 ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದು, ಈತನ ವಿರುದ್ಧ 2 ವಾರಂಟ್ ಜಾರಿಯಲ್ಲಿದೆ.

ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ಸುದೀಪ್ ಎಂ ವಿ, ಶರಣಪ್ಪ ಭಂಡಾರಿ, ನರೇಂದ್ರ  ಹಾಗೂ ಸಿಸಿಬಿ ಸಿಬ್ಬಂದಿಯವರು  ಪಾಲ್ಗೊಂಡಿದ್ದರು.

ಇದನ್ನೂ ಓದಿ: Udupi ವಿಡಿಯೋ ಚಿತ್ರೀಕರಣ ಕೇಸ್: ಉಡುಪಿಗೆ ಆಗಮಿಸಿದ ಖುಷ್ಬೂ ಸುಂದರ್

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.