CCB ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿ ಸೆರೆ
Team Udayavani, Nov 12, 2023, 9:25 PM IST
ಮಂಗಳೂರು: ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ತಾಲೂಕು ಹರೇಕಳ ಗ್ರಾಮದ ಐಕು ಕೊಪ್ಪಳ ಹೌಸ್ ನಿವಾಸಿ, ಪ್ರಸ್ತುತ ಬಜಾಲ್ ಪಡ್ಪು ಹೌಸ್ ನಿವಾಸಿ ಹಸೈನಾರ್ ಯಾನೆ ಅಚ್ಚು (32) ಬಂಧಿತ ಆರೋಪಿ.
ಪಡೀಲ್ ಪರಿಸರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಆತನ ವಶದಿಂದ ಒಟ್ಟು 12 ಗ್ರಾಂ ತೂಕದ 60,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಒಂದು ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 70,500 ರೂ. ಎಂದು ಅಂದಾಜಿಲಾಗಿದೆ.
ಆರೋಪಿಯ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಹಸೈನಾರ್ ವಿರುದ್ಧ ಈ ಹಿಂದೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಹಲ್ಲೆ ಪ್ರಕರಣ ಮತ್ತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಹೀಗೆ ಒಟ್ಟು 3 ಪ್ರಕರಣಗಳು ದಾಖಲಾಗಿವೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.
ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಅವರ ಮಾರ್ಗದರ್ಶನದಲ್ಲಿ, ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬಂದಿ ಕಾರ್ಯಾಚರಣೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangalore: ಪ್ರಯಾಣಿಕರಿಗಾಗಿ ಸಿಗ್ನಲ್‌ಗಳಲ್ಲೇ ಬಸ್ ನಿಲುಗಡೆ; ಅನಾಹುತಕ್ಕೆ ಎಡೆ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Niveus Mangalore Marathon 2024: ನ.10: ನೀವಿಯಸ್ ಮಂಗಳೂರು ಮ್ಯಾರಥಾನ್
MUST WATCH
ಹೊಸ ಸೇರ್ಪಡೆ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.