‘ಕ್ರೀಡೆಗಳು ಬಾಂಧವ್ಯ ವೃದ್ಧಿಗೆ ಸಹಾಯಕ’
Team Udayavani, Oct 8, 2018, 11:37 AM IST
ಮಂಗಳೂರು : ನಗರದ ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ಕನ್ನಡ ಮತ್ತು ತುಳು ಚಲನಚಿತ್ರ ರಂಗ ಒಂದಾಗಿದ್ದರು. ಕನ್ನಡ ಮತ್ತು ತುಳು ಚಿತ್ರರಂಗದ ನಡುವೆ ಸೌಹಾರ್ದ ಗಟ್ಟಿಯಾಗುವ ಉದ್ದೇಶದಿಂದ ಕನ್ನಡ ಚಲನಚಿತ್ರ ಕಾರ್ಮಿಕರ ಮತ್ತು ಕಲಾವಿದರ ಒಕ್ಕೂಟದ ವತಿಯಿಂದ ನಗರದಲ್ಲಿ ರವಿವಾರ ಸೆಲೆಬ್ರಿಟಿ ಕಬಡ್ಡಿ ಲೀಗ್ – 2018 ಆಯೋಜಿಸಿತ್ತು.
ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಕರಾವಳಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕಾಧ್ಯಕ್ಷ ಎಸ್. ಗಣೇಶ್ ರಾವ್ ಅವರು ಮಾತನಾಡಿ, ಕ್ರೀಡೆಗಳು ಸೌಹಾರ್ದ ಮತ್ತು ಬಾಂಧವ್ಯ ವೃದ್ಧಿಗೆ ಸಹಾಯಕ. ನಶಿಸುತ್ತಿರುವ ಕ್ರೀಡೆಗಳಿಗೆ ತಾರಾಮೆರುಗು ನೀಡಿ ಜನಮನ್ನಣೆಗೊಳಿಸಬೇಕಿದೆ ಎಂದು ತಿಳಿಸಿದರು.
ದೈಹಿಕ, ಮಾನಸಿಕ ಬೆಳವಣಿಗೆಗೆ ಪೂರಕ
ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಸ್ಥಾಪಕಾಧ್ಯಕ್ಷ ಡಾ| ಮಂಜುನಾಥ ಭಂಡಾರಿ ಮಾತನಾಡಿ, ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಕಬಡ್ಡಿ ಪೂರಕವಾಗಿದೆ. ಗ್ರಾಮೀಣ ಕ್ರೀಡೆಯಾಗಿದ್ದ ಕಬಡ್ಡಿ ಇಂದು ವಿಶ್ವ ಮಟ್ಟದಲ್ಲಿ ಗುರುತಿಸಿಕೊಂಡಿರುವುದು ಹೆಮ್ಮೆಯ ವಿಚಾರ ಎಂದರು.
ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಅಧ್ಯಕ್ಷ ರಾಕೇಶ್ ಮಲ್ಲಿ, ಕಾರ್ಯದರ್ಶಿ ಪುರುಷೋತ್ತಮ ಪೂಜಾರಿ, ಅಂತಾರಾಷ್ಟ್ರೀಯ ಲೀಗ್ ರೆಫ್ರಿಗಳಾದ ಉದಯ ಚೌಟ, ಪ್ರೇಮನಾಥ ಉಳ್ಳಾಲ್, ಚಿತ್ರ ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲಬೈಲು, ಮಹಾಬಲ ಪೂಜಾರಿ ಕಡಂಬೋಡಿ, ತುಳು ಚಿತ್ರ ನಿರ್ಮಾಪಕ ಸಂಘದ ಅಧ್ಯಕ್ಷ ರಾಜೇಶ್ ಬ್ರಹ್ಮಾವರ ಮೊದಲಾದವರು ಉಪಸ್ಥಿತರಿದ್ದರು.
13 ತಂಡಗಳು ಭಾಗಿ
ಪಂದ್ಯಾವಳಿಯಲ್ಲಿ 7 ಪುರುಷರ ಹಾಗೂ 6 ಮಹಿಳೆಯರ ಸೇರಿದಂತೆ ಒಟ್ಟು 13 ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು. ಪುರುಷರ ಹಾಗೂ ಮಹಿಳೆಯರ ಪಂದ್ಯಾಟ ಏಕಕಾಲದಲ್ಲಿ ನಡೆಯಿತು. ಕಬಡ್ಡಿ ವೀಕ್ಷಿಸಲು ನೂರಾರು ಮಂದಿ ಪ್ರೇಕ್ಷಕರು ಆಗಮಿಸಿದ್ದು, ಕಬಡ್ಡಿ ಆಟಗಾರರನ್ನು ಹುರಿದುಂಬಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್
Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.