ಉಜ್ವಲ ಯೋಜನೆ: ರಾಜ್ಯ ಸಹಭಾಗಿತ್ವಕ್ಕೆ ಕೇಂದ್ರ ಸಮ್ಮತಿ
Team Udayavani, Jul 3, 2017, 3:40 AM IST
ಮಂಗಳೂರು: ಅಡುಗೆ ಅನಿಲ ಸಂಪರ್ಕ ರಹಿತ ಕುಟುಂಬಗಳಿಗೆ ಉಚಿತವಾಗಿ ಅನಿಲ ಸಂಪರ್ಕ ಒದಗಿಸುವ ಯೋಜನೆಯಲ್ಲಿ ರಾಜ್ಯವನ್ನು ಸಹಭಾಗಿದಾರಿಯಾಗಿ ನಮೂದಿಸಿ ಇದರ ಜತೆಗೆ ಉಚಿತವಾಗಿ ಗ್ಯಾಸ್‌ಸ್ಟವ್ ವಿತರಣೆಗೆ ಅವಕಾಶ ಕಲ್ಪಿಸುವ ಪ್ರಸ್ತಾವಕ್ಕೆ ಕೇಂದ್ರ ಸರಕಾರ ಸಮ್ಮತಿಸಿದೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಯು.ಟಿ. ಖಾದರ್ ಹೇಳಿದರು.
ನಗರದಲ್ಲಿ ರವಿವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಉಜ್ವಲ ಯೋಜನೆಯಲ್ಲಿ ಕೇಂದ್ರ ಸರಕಾರ ಉಚಿತವಾಗಿ ಅಡುಗೆ ಅನಿಲ ಸಂಪರ್ಕ ಮಾತ್ರ ನೀಡುತ್ತದೆ. ಸ್ಟವ್ ಫಲಾನುಭವಿಗಳೇ ಖರೀದಿಸಬೇಕಾಗಿದ್ದು ಇದು ಅವರಿಗೆ ಹೊರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಅವರಿಗೆ ಉಚಿತವಾಗಿ ಸ್ಟವ್ ನೀಡುವುದಾಗಿ ತಿಳಿಸಿ ಯೋಜನೆಯಲ್ಲಿ ರಾಜ್ಯವನ್ನು ಕೂಡ ಸಹಭಾಗಿಯಾಗಿ ಪರಿಗಣಿಸುವಂತೆ ಕೋರಿತ್ತು. ಆದರೆ ಇದಕ್ಕೆ ಕೇಂದ್ರ ಸರಕಾರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸರಕಾರದ ಪ್ರಸ್ತಾವನೆಗೆ ಹಿನ್ನಡೆಯಾಗಿತ್ತು. ಇದೀಗ ಕೇಂದ್ರ ಸರಕಾರ ರಾಜ್ಯ ಸರಕಾರದ ಪ್ರಸ್ತಾವಕ್ಕೆ ಸಮ್ಮತಿ ಸೂಚಿಸಿ ಪತ್ರ ರವಾನಿಸಿದೆ ಎಂದು ಹೇಳಿದರು. ಕೇಂದ್ರ ಸರಕಾರದ ಪ್ರಸ್ತಾವವನ್ನು ಮುಖ್ಯಮಂತ್ರಿಯವರ ಗಮನಕ್ಕೆ ತಂದು ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದವರು ತಿಳಿಸಿದರು.
ಇಂದಿರಾ ಕ್ಯಾಂಟೀನ್‌ಗೆ ಆ. 15ರಂದು ಚಾಲನೆ
ರಾಜ್ಯ ಸರಕಾರ ಮಹತ್ವದ ಯೋಜನೆಯಾಗಿರುವ ಇಂದಿರಾ ಕ್ಯಾಂಟೀನ್‌ಗೆ ಆ. 15ರಂದು ಚಾಲನೆ ನೀಡಲು ಎಲ್ಲ ಸಿದ್ಧತೆಗಳನ್ನು ಮಾಡಲಾಗಿದೆ. ಯೋಜನೆ ಅನುಷ್ಠಾನಕ್ಕೆ ಸಚಿವ ಕೆ.ಜೆ. ಜಾರ್ಜ್ ಅವರ ಅಧ್ಯಕ್ಷತೆಯಲ್ಲಿ ನಾನೂ ಸೇರಿದಂತೆ ಐವರು ಸದಸ್ಯರ ಸಮಿತಿ ರಚಿಸಲಾಗಿದೆ. ಈಗಾಗಲೇ ಕ್ಯಾಂಟೀನ್ ಸ್ಥಾಪನೆಗೆ ಜಾಗ ಗುರುತಿಸಲಾಗಿದ್ದು ಕಟ್ಟಡ ನಿರ್ಮಾಣ ಪ್ರಕ್ರಿಯೆ ಆರಂಭಗೊಂಡಿದೆ ಎಂದು ಸಚಿವರು ವಿವರಿಸಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 198 ವಾರ್ಡ್‌ಗಳಲ್ಲಿ ವಾರ್ಡ್‌ಗೆ ಒಂದರಂತೆ ಕ್ಯಾಂಟೀನ್ ಸ್ಥಾಪನೆಯಾಗಲಿದೆ. ಬೆಂಗಳೂರಿನಲ್ಲಿ ಒಟ್ಟು 28 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ 7ರಿಂದ 8 ಕ್ಯಾಂಟೀನ್‌ಗಳು ಸ್ಥಾಪನೆಯಾಗಲಿವೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಕೇಂದ್ರೀಕೃತ ಅಡುಗೆ ಮನೆ ಇರುತ್ತದೆ. 5 ರೂ.ಗಳಲ್ಲಿ ಬೆಳಗ್ಗಿನ ಉಪಾಹಾರ, 10 ರೂ.ಗಳಲ್ಲಿ ಊಟ ನೀಡಲಾಗುವುದು. ಸುಮಾರು 1.80 ಲಕ್ಷ ಮಂದಿಗೆ ಅತ್ಯಂತ ಕಡಿಮೆ ದರದಲ್ಲಿ ಬೆಳಗ್ಗಿನ ಉಪಾಹಾರ, ಮಧ್ಯಾಹ್ನದ ಹಾಗೂ ರಾತ್ರಿ ಊಟ ದೊರೆಯಲಿರುವುದು. ವಿದ್ಯಾರ್ಥಿಗಳು, ದುಡಿಯುವ ವರ್ಗ, ಜನಸಾಮಾನ್ಯರಿಗೆ ಇದರಿಂದ ಪ್ರಯೋಜನವಾಗಲಿದೆ ಎಂದು ಸಚಿವರು ವಿವರಿಸಿದರು. ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮಹಮ್ಮದ್ ಮೋನು ಉಪಸ್ಥಿತರಿದ್ದರು.
ಅನಿಲ ಭಾಗ್ಯದಿಂದ ಎಲ್ಲರಿಗೂ ಪ್ರಯೋಜನ
ರಾಜ್ಯದಲ್ಲಿ 1.31 ಕೋಟಿ ಕುಟುಂಬಗಳಿವೆ. ಇದರಲ್ಲಿ 1.10 ಕೋಟಿ ಕುಟುಂಬಗಳಿಗೆ ಅಡುಗೆ ಅನಿಲ ಸಂಪರ್ಕವಿದೆ. 21 ಲಕ್ಷ ಕುಟುಂಬಗಳಿಗೆ ಅನಿಲ ಸಂಪರ್ಕವಿಲ್ಲ. ಉಜ್ವಲ ಯೋಜನೆಗೆ ಕೇಂದ್ರ ಸರಕಾರ 2011ರ ಸಾಮಾಜಿಕ – ಆರ್ಥಿಕ ಗಣತಿಯನ್ನು ಪರಿಗಣಿಸಿದ್ದು ಇದರಲ್ಲಿ ಕೇವಲ 2. 5 ಲಕ್ಷ ಮಂದಿಗೆ ಮಾತ್ರ ಅವಕಾಶವಿದೆ. ಉಳಿದ ಕುಟುಂಬಗಳು ಸಂಪರ್ಕದಿಂದ ವಂಚಿತವಾಗುತ್ತವೆ. ರಾಜ್ಯ ಸರಕಾರ ಜಾರಿಗೆ ತರುತ್ತಿರುವ ಅನಿಲ ಭಾಗ್ಯ ಯೋಜನೆಯಲ್ಲಿ ಅಡುಗೆ ಅನಿಲ ಸಂಪರ್ಕವಿಲ್ಲದ ಎಲ್ಲ ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಅಡುಗೆ ಅನಿಲ ಸಂಪರ್ಕ ಹಾಗೂ ಗ್ಯಾಸ್‌ಸ್ಟವ್ ನೀಡಲಾಗುವುದು ಎಂದು ಸಚಿವ ಖಾದರ್ ತಿಳಿಸಿದರು. ಅನಿಲ ಭಾಗ್ಯ ಯೋಜನೆಗೆ ವಿಶೇಷ ಸಾಫ್ಟ್‌ವೇರ್ ಸಿದ್ಧಪಡಿಸಲಾಗುತ್ತಿದೆ. ಅರ್ಹ ಫಲಾನುಭವಿಗಳು ಸಂಬಂಧಪಟ್ಟ ಗ್ರಾಮ ಪಂಚಾಯತ್‌ನಲ್ಲಿ ಆಧಾರ್ ಸಂಖ್ಯೆಯೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿಯನ್ನು ಪರಿಶೀಲಿಸಿ ಬಳಿಕ ವಿತರಣೆ ನಡೆಯಲಿರುವುದು ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.