ಮೂಡುಬಿದಿರೆ: ತಲವಾರು ಝಳಪಿಸಿ, ಕರಿಮಣಿ ಸರ ದರೋಡೆ
Team Udayavani, Sep 1, 2022, 11:00 PM IST
ಮೂಡುಬಿದಿರೆ: ತೆಂಕಮಿಜಾರು ಗ್ರಾ.ಪಂ. ವ್ಯಾಪ್ತಿಯ ಬಡಗ ಮಿಜಾರು ಗ್ರಾಮದ ಬೇರಿಂಜೆಯ ಮನೆಯೊಂದಕ್ಕೆ ಇಬ್ಬರು ಮುಸುಕುಧಾರಿಗಳು ನುಗ್ಗಿ ತಲವಾರು ಝಳಪಿಸಿ ಮಹಿಳೆಯ ಕತ್ತಿನಲ್ಲಿದ್ದ ಸುಮಾರು 5 ಪವನ್ ತೂಕದ ಚಿನ್ನದ ಕರಿಮಣಿ ಸರವನ್ನು ದರೋಡೆ ಮಾಡಿಕೊಂಡು ಪರಾರಿಯಾದ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿರುವ ಕಮಲಾ ಶೆಟ್ಟಿ ದರೋಡೆಗೊಳಗಾದ ಮಹಿಳೆ. ಪತಿ ಕಳೆದ ವರ್ಷ ನಿಧನ ಹೊಂದಿದ್ದು, ಅದಕ್ಕೂ ಮುನ್ನ ಅವರ ಇಬ್ಬರು ಗಂಡು ಮಕ್ಕಳು ಮೃತಪಟ್ಟಿದ್ದರು. ಹೀಗೆ ಮನೆಯಲ್ಲಿ ಒಂಟಿಯಾಗಿದ್ದುದರಿಂದ ರಾತ್ರಿ ಮಲಗಲು ಪರಿಚಯಸ್ಥ ಮಹಿಳೆಯೊಬ್ಬರು ಅವರ ಮನೆಗೆ ಬರುತ್ತಿದ್ದರು.
ರಾತ್ರಿ ಸುಮಾರು ಹನ್ನೊಂದು ಗಂಟೆಗೆ ಮನೆ ಹೊರಗಡೆ ಮಾತನಾಡುತ್ತಿದ್ದ ಅವರಿಬ್ಬರು ಅನಂತರ ಮಲಗಲು ಮನೆ ಒಳಗಡೆ ಹೋಗುತ್ತಿದ್ದಂತೆ ಮುಸುಕುಧಾರಿಗಳಿಬ್ಬರು ಮಾರಕಾಯುಧದೊಂದಿಗೆ ಮನೆಗೆ ನುಗ್ಗಿ ಕಮಲಾ ಅವರ ಕತ್ತು ಒತ್ತಿ ಹಿಡಿದು ಕರಿಮಣಿ ಸರವನ್ನು ಎಳೆದೊಯ್ದಿದ್ದಾರೆ. ಪ್ರತಿರೋಧ ಒಡ್ಡಿದ ಮಹಿಳೆ ಬೊಬ್ಬೆ ಹೊಡೆದಾಗ ಹತ್ತಿರದಲ್ಲಿ ಗಣೇಶೋತ್ಸವ ಸಿದ್ಧತೆಯಲ್ಲಿದ್ದ ಯುವಕರು ಸ್ಥಳಕ್ಕೆ ಧಾವಿಸಿ ಬಂದು ಸುತ್ತಮುತ್ತ ಹುಡುಕಾಡಿದರೂ, ಆರೋಪಿಗಳ ಸುಳಿವು ಸಿಗಲಿಲ್ಲ. ಕುತ್ತಿಗೆ ಭಾಗದಲ್ಲಿ ಆದ ಗಾಯ ಮತ್ತು ಕರಿಮಣಿ ಸರ ಹೋದದ್ದರಿಂದ ಆತಂಕಗೊಂಡ ಕಮಲಾ ಅವರು ಅಸ್ವಸ್ಥರಾಗಿದ್ದು, ಮಾತನಾಡಲಾಗದ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
ಮಂಗಳೂರಿಗೆ ವಾಟರ್ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ
Mangaluru: ಕರಾವಳಿಯ ವೃತ್ತಿಪರರಿಗೆ ವಿಶ್ವದೆಲ್ಲೆಡೆ ಮನ್ನಣೆ
MUST WATCH
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.