ಮುಂದಿನ ವರ್ಷದಿಂದ ಮಂಗಳೂರು ದಸರಾ ಮೆರವಣಿಗೆ ಸ್ವರೂಪ ಬದಲು!


Team Udayavani, Oct 22, 2018, 11:42 AM IST

22-october-6.gif

ಮಹಾನಗರ: ಮಂಗಳೂರು ದಸರಾ ಶೋಭಾಯಾತ್ರೆ ವೈಭವದಿಂದ ನಡೆದಿದ್ದು, ದೇಶ-ವಿದೇಶದ ಲಕ್ಷಾಂತರ ಮನಸೂರೆಗೊಳಿಸುವಲ್ಲಿ ಯಶಸ್ವಿಯಾಗಿದೆ. ಮುಂದಿನ ದಿನಗಳಲ್ಲಿ ಈ ಶೋಭಾಯಾತ್ರೆಯನ್ನು ಮತ್ತಷ್ಟು ವ್ಯವಸ್ಥಿತವಾಗಿ ನಡೆಸುವ ಉದ್ದೇಶದಿಂದ ದೇವಸ್ಥಾನ ಆಡಳಿತ ಮಂಡಳಿ ಮೆರವಣಿಗೆ ಸ್ವರೂಪದಲ್ಲಿ ಬದಲಾವಣೆ ಮಾಡಲು ನಿರ್ಧರಿಸಿದೆ.

ಜನಸಂಚಾರ ನಿಭಾಯಿಸುವುದು ಕಷ್ಟ
ಮಂಗಳೂರು ದಸರಾದ ಈ ಬಾರಿಯ ಶೋಭಾಯಾತ್ರೆ ವೈಭವವನ್ನು ತೆರೆದಿಡುವಲ್ಲಿ ಯಶಸ್ವಿಯಾಯಿತಾದರೂ, ಜನಸಾಗರ ಹಾಗೂ ಟ್ಯಾಬ್ಲೋಗಳ ಒತ್ತಡದಿಂದ ಮೆರವಣಿಗೆ ನಿರೀಕ್ಷಿತ ಸಮಯದಲ್ಲಿ ಮುಗಿಸಲು ಈ ಬಾರಿಯೂ ಸಾಧ್ಯವಾಗಿಲ್ಲ. ಈ ಬಾರಿ ಮೆರವಣಿಗೆ ಅವಧಿ 12 ಗಂಟೆಗೆ ಸೀಮಿತಗೊಳಿಸಿದ್ದರೂ, ಶುಕ್ರವಾರ ಸಂಜೆ 4ಗಂಟೆಗೆ ಹೊರಟ ಮೆರವಣಿಗೆ ಶನಿವಾರ ಬೆಳಗ್ಗಿನ ಜಾವ 6.30ರ ವರೆಗೆ ನಡೆಯುವ ಮೂಲಕ 14.30 ಗಂಟೆ ಸಮಯ ತಗುಲಿತು. ಅದರಲ್ಲೂ 1 ಕಿಲೋ ಮೀಟರ್‌ ಮೆರವಣಿಗೆ ತಲುಪಲು 8 ಗಂಟೆ ಅವಧಿ ತಲುಪಿದೆ. ಟ್ಯಾಬ್ಲೋ, ವಾಹನ, ಜನಸಂಚಾರವನ್ನು ನಿಭಾಯಿಸುವುದೇ ಪೊಲೀಸರಿಗೆ, ಸಂಘಕಟರಿಕೆಗೆ ದೊಡ್ಡ ತಲೆನೋವಾಗಿತ್ತು.

ಮಂಗಳೂರು ದಸರಾ ವೈಭವವನ್ನು ಎಲ್ಲರಿಗೆ ವೀಕ್ಷಿಸಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮೆರವಣಿಗೆಯನ್ನು ಈ ಬಾರಿ ಯಾವುದೇ ತೊಡಕಿಲ್ಲದೆ ಒಟ್ಟು ಸಮಯ 12 ಗಂಟೆಯೊಳಗೆ ಮುಗಿಸಬೇಕು ಎಂದು ದೇಗುಲದ ಆಡಳಿತ ಮಂಡಳಿ ನಿರ್ಧರಿಸಿತ್ತು. ಆದರೆ ಈ ಬಾರಿ ತಡವಾದ ಕಾರಣ ಮುಂದಿನ ವರ್ಷದಿಂದ ಶೋಭಾಯಾತ್ರೆ ಸ್ವರೂಪದಲ್ಲಿ ಬದಲಾವಣೆ ಮಾಡಲು ನಿರ್ಧರಿಸಲಾಗಿದೆ.

ಹಸಿರು ಕೊಡೆ, ಡೊಳ್ಳು ಕುಣಿತ ಸೇರಿದಂತೆ ರಾಜ್ಯದ ಎಲ್ಲ ಕಲಾ ತಂಡದ ಮೆರವಣಿಗೆ ಪ್ರಾರಂಭದಲ್ಲಿ ಸಾಗಲಿದೆ. ಅನಂತರ ನವದುರ್ಗೆಯರ ಸಹಿತ ಶ್ರೀ ಶಾರದೆ ದೇವರ ಮೂರ್ತಿಗಳು ಸಾಗಲಿದೆ. ಅನಂತರ ಬಗೆ ಬಗೆಯ ಟ್ಯಾಬ್ಲೋಗಳಿಗೆ ಅವಕಾಶ ನೀಡಲು ಚಿಂತಿಸಲಾಗಿದೆ. ಈ ಮೂಲಕ ಮೆರವಣಿಗೆಯನ್ನು ಆದಷ್ಟು ಬೇಗನೆ ಮುಗಿಸುವಂತೆ ಮಾಡುವುದು ಆಯೋಜಕರ ನಿರ್ಧಾರ. 

 ಡಿಜೆ, ಎಲ್‌ಇಡಿಗೆ ಕೊಕ್‌
ಮಂಗಳೂರು ದಸರಾ ಈಗಾಗಲೇ ಜನಪ್ರಿಯಗೊಂಡಿದ್ದು, ಲಕ್ಷಾಂತರ ಮಂದಿ ಭಾಗವಹಿಸುತ್ತಿದ್ದಾರೆ. ಈ ಮೆರವಣಿಗೆಯನ್ನು ಮತ್ತಷ್ಟು ಕ್ರೀಯಾತ್ಮಕವನ್ನಾಗಿಸುವ ಉದ್ದೇಶದಿಂದ ಮುಂದಿನ ವರ್ಷಗಳಲ್ಲಿ ಕ್ರಿಯಾಶೀಲ ಸ್ತಬ್ದಚಿತ್ರಗಳಿಗೆ ಮಾತ್ರ ಅವಕಾಶ ನೀಡಲಾಗುವುದು. ನಮ್ಮ ನೆಲದ ಸಂಸ್ಕೃತಿ, ಕಂಪನ್ನು ಪಸರಿಸುವ ತಂಡಗಳಿಗೆ ಮಾತ್ರ ಕಲಾಪ್ರರ್ಶನಕ್ಕೆ ಅವಕಾಶ. ಡಿಜೆ ಹಾಡು, ನೃತ್ಯ, ಎಲ್‌ಇಡಿ ಸ್ಕ್ರೀನ್‌ ಬಳಸಿದ ಟ್ಯಾಬ್ಲೋಗಳಿಗೆ ಅವಕಾಶ ನೀಡುವುದಿಲ್ಲ.
 - ಪದ್ಮರಾಜ್‌ ಆರ್‌.,
    ಕೋಶಾಧಿಕಾರಿ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ 

ಟಾಪ್ ನ್ಯೂಸ್

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

5(1

Karkala: ಪಾಳು ಬಿದ್ದ ಸರಕಾರಿ ಕಟ್ಟಡಗಳು; ಲಕ್ಷಾಂತರ ಅನುದಾನ ವ್ಯರ್ಥ

4

Network Problem: ಇಲ್ಲಿ ಟವರ್‌ ಇದೆ, ಆದರೆ ನೆಟ್ವರ್ಕ್‌ ಸಿಗಲ್ಲ!

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.