ಚರಣ್ರಾಜ್ ರೈ ಪ್ರಕರಣ: 7ನೇ ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು
Team Udayavani, Aug 5, 2023, 10:36 PM IST
ಪುತ್ತೂರು: ಪೆರ್ಲಂಪಾಡಿಯಲ್ಲಿ ನಡೆದ ಚರಣ್ರಾಜ್ ರೈ ಹತ್ಯೆ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ಬಂಧಿತನಾಗಿದ್ದ ಆರೋಪಿ ಪ್ರಜ್ವಲ್ಗೆ ಕರ್ನಾಟಕ ಉಚ್ಚ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಪೆರ್ಲಂಪಾಡಿಯಲ್ಲಿ ಮೆಡಿಕಲ್ ಶಾಪ್ ತೆರೆಯಲು ಪೂರ್ವ ತಯಾರಿಗಾಗಿ ಚರಣ್ರಾಜ್ ಕೆಲಸದಲ್ಲಿ ತೊಡಗಿದ್ದರು. ಈ ವೇಳೆ ದುಷ್ಕರ್ಮಿಗಳು ಅವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಡಿ 7ನೇ ಆರೋಪಿಯನ್ನಾಗಿ ಪ್ರಜ್ವಲ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿತ್ತು. ಆ ಬಳಿಕ ಪ್ರಜ್ವಲ್ರವರು ನಿರೀಕ್ಷಣಾ ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಪೀಠ ಷರತ್ತು ಬದ್ಧ ಜಾಮೀನು ಮಂಜೂರುಗೊಳಿಸಿದೆ. ಆರೋಪಿ ಪರ ವಕೀಲರಾದ ರಾಜಶೇಖರ ಎಸ್ ಮತ್ತು ಮಹೇಶ್ ಕಜೆ ಅವರು ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.