ಮಂಗಳೂರು : ಚೆಕ್ ಬೌನ್ಸ್ ಪ್ರಕರಣ ; 88 ಲ.ರೂ. ಪಾವತಿಸಲು ಆದೇಶ, ತಪ್ಪಿದರೆ 6 ತಿಂಗಳ ಸಜೆ
Team Udayavani, May 26, 2022, 9:59 PM IST
ಮಂಗಳೂರು : ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಲಿ.ಗೆ ಮಂಜುನಾಥ ಖಾರ್ವಿ ಅವರು ನೀಡಿದ ಮೂರು ಚೆಕ್‌ಗಳು ಬೌನ್ಸ್ ಆದ ಹಿನ್ನೆಲೆಯಲ್ಲಿ ಒಟ್ಟು 88 ಲ.ರೂ. ಪಾವತಿಸಬೇಕು. ತಪ್ಪಿದರೆ 6 ತಿಂಗಳ ಸಜೆ ಅನುಭವಿಸಬೇಕು ಎಂದು ನ್ಯಾಯಾಲಯ ತೀರ್ಪು ನೀಡಿದೆ.
ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಲಿ. ಸಂಸ್ಥೆಯಿಂದ ಮಂಜುನಾಥ ಖಾರ್ವಿ ಮೀನು ಖರೀದಿ ಮಾಡಿದ್ದರು. ಅಲ್ಲದೆ ಫೆಡರೇಷನ್‌ಗೆ ಮೀನು ಮಾರಾಟವಾದ ಕಮಿಷನ್ ಕೂಡ ಬಾಕಿ ಇರಿಸಿದ್ದರು. ಈ ಮೊತ್ತಕ್ಕೆ ಮೂರು ಚೆಕ್‌ಗಳನ್ನು ಫೆಡರೇಷನ್‌ಗೆ ನೀಡಿದ್ದರು. ಆ ಚೆಕ್‌ಗಳನ್ನು ಬ್ಯಾಂಕ್‌ಗೆ ನೀಡಿದಾಗ ಖಾತೆಯಲ್ಲಿ ಹಣವಿಲ್ಲದೆ ಅಮಾನತುಗೊಂಡಿದ್ದವು. ಇದಕ್ಕೆ ಸಂಬಂಧಿಸಿದ ನೋಟಿಸ್ ನೀಡದರೂ ಬಾಕಿ ಮೊತ್ತ ನೀಡಿರಲಿಲ್ಲ. ಈ ಕುರಿತು ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಲಾಗಿತ್ತು. ಅವರ ಮೇಲೆ ಮೂರು ಪ್ರಕರಣ ದಾಖಲಾಗಿತ್ತು.
5ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಚಿನ್ಮಯಿ ಅವರು ಮೂರು ಪ್ರಕರಣಗಳಲ್ಲಿ ಆರೋಪಿ 5 ಲ.ರೂ., 53 ಲ.ರೂ. ಮತ್ತು 30 ಲ.ರೂ. ಸೇರಿದಂತೆ ಒಟ್ಟು 88 ಲ.ರೂ. ಪಾವತಿಸಬೇಕು. ಇಲ್ಲವಾದರೆ 6 ತಿಂಗಳ ಸಜೆ ಅನುಭವಿಸಬೇಕು ಎಂದು ತೀರ್ಪು ನೀಡಿದ್ದಾರೆ.
ದೂರುದಾರರ ಪರ ವೆರಿಟಾಸ್ ಲೆಗೀಸ್ ಅಸೋಸಿಯೇಷನ್ ಮಂಗಳೂರಿನ ವಕೀಲರಾದ ರಾಘವೇಂದ್ರ ರಾವ್, ಗೌರಿ ಶೆಣೈ, ಅಭಿಲಾಷ್ ಶಾಸಿŒ ಮತ್ತು ಜಯಶ್ರೀ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
MUST WATCH
ಹೊಸ ಸೇರ್ಪಡೆ
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.