ಮೂಡುಬಿದಿರೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Team Udayavani, Apr 28, 2022, 10:32 AM IST

cm

ಮೂಡುಬಿದಿರೆ: ಮುಖ್ಯಮಂತ್ರಿ ಬಸವರಾಜ ಎಸ್‌. ಬೊಮ್ಮಾಯಿ ಅವರು ಬುಧವಾರ ಮೂಡುಬಿದಿರೆ ತಾಲೂಕು ಆಡಳಿತ ಸೌಧ ಉದ್ಘಾಟನೆ ಸಹಿತ 25 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ, 374.71 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳ ಶಂಕುಸ್ಥಾಪನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ನಿಗದಿತವಾಗಿದ್ದಂತೆ ಅಪರಾಹ್ನ 2ಕ್ಕೆ ಮೂಡು ಬಿದಿರೆಗೆ ಬರಬೇಕಾಗಿದ್ದ ಬೊಮ್ಮಾಯಿ ಅವರು ಒಂದೂವರೆ ತಾಸು ಅನಿವಾರ್ಯ ವಿಳಂಬವಾಗಿ, ಹೆಲಿಕಾಪ್ಟರ್‌ನಲ್ಲಿ ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನ ಕ್ರೀಡಾಂಗಣದಲ್ಲಿ ಬಂದಿಳಿದಾಗ ಶಾಸಕ ಉಮಾನಾಥ ಕೋಟ್ಯಾನ್‌ ಮುಖ್ಯಮಂತ್ರಿಯವರನ್ನು ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು. ಬಳಿಕ ನೇರವಾಗಿ ಹತ್ತಿರದ ಕಲ್ಲಬೆಟ್ಟು ಎಕ್ಸಲೆಂಟ್‌ ಶಿಕ್ಷಣಾಲಯಕ್ಕೆ ತೆರಳಿ, ಅಲ್ಲಿ ಶ್ವೇತ ಭವನ ಮಾದರಿಯ ‘ಅನ್ನದಾಸೋಹ ‘ ಕಟ್ಟಡವನ್ನು ಉದ್ಘಾಟಿಸಿದರು.

ಜೈನಮಠಕ್ಕೆ ಭೇಟಿ

ಶ್ರೀ ಜೈನಮಠಕ್ಕೆ ಭೇಟಿ ನೀಡಿ, ಸ್ವಾಮೀಜಿಯವರ ಸಮ್ಮಾನ ಸಹಿತ ಬಸದಿ, ಮಠದ ಅಭಿವೃದ್ಧಿಯ ಕುರಿತಾದ ಬೇಡಿಕೆಗಳ ಪತ್ರವನ್ನು ಸ್ವೀಕರಿಸಿದರು. ಬಳಿಕ, 4.35ಕ್ಕೆ ಪ್ರವಾಸಿ ಬಂಗಲೆ ಮತ್ತು ಆಡಳಿತಸೌಧದ ಪಕ್ಕದಲ್ಲಿ ಲಭಿಸಿರುವ ನಿವೇಶನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ- ಪ್ರಸ್‌ ಕ್ಲಬ್‌ ಮೂಡುಬಿದಿರೆ ವತಿಯಿಂದ ನಿರ್ಮಾಣ ಗೊಳ್ಳಲಿರುವ ಪತ್ರಿಕಾ ಭವನದ ಶಿಲಾನ್ಯಾಸ ನೆರವೇರಿಸಿದರು. ಗಂ. 4.45ಕ್ಕೆ ನೂತನ ತಾಲೂಕು ಆಡಳಿತ ಸೌಧವನ್ನು ಉದ್ಘಾಟಿಸಿದರು.

ಇದೇ ಸಂದರ್ಭ ಮುಖ್ಯಮಂತ್ರಿಯವರು ದರೆಗುಡ್ಡೆ ಮೆಟ್ರಿಕ್‌ ಅನಂತರದ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡ, ಬನ್ನಡ್ಕದಲ್ಲಿ ನಿರ್ಮಾಣವಾಗಿರುವ ಮಂಗಳೂರು ವಿ.ವಿ. ಪದವಿ ಕಾಲೇಜು, ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರದ ಹೊರರೋಗಿ ವಿಭಾಗ, ಲೋಕೋಪಯೋಗಿ ಇಲಾಖೆಯಡಿ ವಿದ್ಯಾಗಿರಿಯಿಂದ ಸ್ವರಾಜ್ಯ ಮೈದಾನದವರೆಗೆ ದ್ವಿಪಥ, ರೋಟರಿ ಶಾಲೆ -ಮೆಸ್ಕಾಂ ಜಂಕ್ಷನ್‌ ಚತುಷ್ಪಥ ರಸ್ತೆ, ಪುತ್ತಿಗೆ ಗ್ರಾ. ಪಂ. ಕೊಡಿಪ್ಪಾಡಿ ಮತ್ತು ತೆಂಕಮಿಜಾರು ಗ್ರಾ.ಪಂ. ಉಳಾಯಂಗಡಿ ಬಳಿ ನಿರ್ಮಾಣವಾಗಿರುವ ಕಿಂಡಿ ಅಣೆಕಟ್ಟುಗಳನ್ನು ಉದ್ಘಾಟಿಸಲಿರುವ ಮುಖ್ಯಮಂತ್ರಿಯವರು ಹಳೆಯಂಗಡಿ ಸರಕಾರಿ ಪ್ರ. ದ. ಕಾಲೇಜು ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಿದರು.

ಮುಖ್ಯಮಂತ್ರಿಯವರ ಜತೆಗೆ ಸಚಿವರಾದ ವಿ. ಸುನಿಲ್‌ಕುಮಾರ್‌, ಅಂಗಾರ ಎಸ್‌., ಕೋಟ ಶ್ರೀನಿವಾಸ ಪೂಜಾರಿ, ವಿ. ಸೋಮಣ್ಣ, ಸಿ.ಸಿ. ಪಾಟೀಲ್‌, ಡಾ| ಅಶ್ವತ್ಥನಾರಾಯಣ ಸಿ.ಎನ್‌. ಡಾ| ಕೆ. ಸುಧಾಕರ್‌, ಬಿ.ಸಿ. ನಾಗೇಶ್‌ ಇವರು ಮುಖ್ಯ ಅತಿಥಿಗಳಾಗಿದ್ದರು.

ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ

ಜಲಜೀವನ್‌ ಮಿಷನ್‌ ಯೋಜನೆಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆ (145.48 ಕೋಟಿ ರೂ.), ಲೋಕೋಪಯೋಗಿ ಇಲಾಖೆಯ ಅಪೆಂಡಿಕ್ಸ್‌ -ಇ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿಗಳು (100.5ಕೋಟಿ), ಸಣ್ಣ ನೀರಾವರಿ ಇಲಾ ಖೆಯ ಪಶ್ಚಿಮವಾಹಿನಿ ಯೋಜನೆಯಡಿ ಕಿಂಡಿ ಅಣೆಕಟ್ಟುಗಳ ನಿರ್ಮಾಣ (73.23 ಕೋಟಿ), ಗ್ರಾಮೀಣಾಭಿವೃದ್ಧಿ ಹಾಗೂ ಪಂ.ರಾಜ್‌ ಇಲಾಖೆಯಡಿ ಗ್ರಾಮೀಣ ರಸ್ತೆ ಅಭಿವೃದ್ಧಿ ಕಾಮಗಾರಿಗಳು (ರೂ. 31 ಕೋಟಿ), ಮೂಲ್ಕಿ ತಾಲೂಕಿನ ಆಡಳಿತ ಸೌಧದ ಕಾಮಗಾರಿ (10 ಕೋಟಿ ರೂ.), ಮೂಡುಬಿದಿರೆಯಲ್ಲಿ ನೂತನ ಅಂಬೇಡ್ಕರ್‌ ಭವನ (6 ಕೋಟಿ ರೂ.), ಮುಜರಾಯಿ ಇಲಾಖೆಯಡಿ ದೇವಸ್ಥಾನ, ದೆ„ವಸ್ಥಾನಗಳ ಅಭಿವೃದ್ಧಿ (ರೂ. 2 ಕೋಟಿ), ಬೃಹತ್‌ ನೀರಾವರಿ ಇಲಾಖೆಯ ಕಾಮಗಾರಿಗಳು (ರೂ. 6 ಕೋಟಿ), ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಕಾಮಗಾರಿ (0.50 ಕೋಟಿ) ಹೀಗೆ 374.71ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದರು.

ಟಾಪ್ ನ್ಯೂಸ್

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

Cap-Brijesh-Chowta

Putturu: ವಿದೇಶಗಳಿಂದ ಅಡಿಕೆ ಆಮದು ಪರಿಣಾಮ ಅಧ್ಯಯನ: ಸಂಸದ ಕ್ಯಾ.ಬ್ರಿಜೇಶ್‌ ಚೌಟ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.